ಕೊಪ್ಪಳ | ಮನರೇಗಾದ ಎಲ್ಲ ಕಾಮಗಾರಿಗಳು ಮಾರ್ಚ್ ಒಳಗೆ ಮುಕ್ತಾಯಗೊಳ್ಳಬೇಕು: ರಾಹುಲ್ ರತಂ ಪಾಂಡೆ

Date:

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ದತ್ತು ಗ್ರಾಮದ ಕ್ರಿಯಾ ಯೋಜನೆಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಆರಂಭಿಸಿ ಮಾರ್ಚ್ ಒಳಗೆ ಮುಕ್ತಾಯಗೊಳಿಸಬೇಕು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಗ್ರಾಮಸ್ಥರ ಸಂಪೂರ್ಣ ಸಹಕಾರದಿಂದ ಎಲ್ಲ ಕಾಮಗಾರಿಗಳು ಮುಕ್ತಾಯವಾಗಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಗಳು ಅಪೂರ್ಣವಾಗಬಾರದು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ರತಂ ಪಾಂಡೆಯವರು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ತಾಂತ್ರಿಕ ಸಹಾಯಕರಿಗೆ ಸೂಚಿಸಿದರು.

- Advertisement -

ಕೊಪ್ಪಳ ತಾಲೂಕಿನ ಸಮೀಪದ ಮೋರನಾಳ ಗ್ರಾಮ ದತ್ತು ಗ್ರಾಮವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಪ್ರಗತಿಯಲ್ಲಿರುವ ಗ್ರಾಮೀಣ ಗೋದಾಮು, ಶಾಲಾ ಶೌಚಾಲಯ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಾಲಾ ಮಕ್ಕಳ ಕಂಪ್ಯೂಟರ್ ಕಲಿಕಾ ಕೊಠಡಿ ಪರಿಶೀಲನೆ ಮಾಡಿದರು. ನಂತರ ಮಕ್ಕಳೊಂದಿಗೆ ಆರೋಗ್ಯ ತಪಾಸಣೆ ಕುರಿತು ಚರ್ಚಿಸಿದರು. ಪ್ರತಿದಿನ ಆಹಾರ ವಿತರಣೆ, ಮೊಟ್ಟೆ ಇತ್ಯಾದಿ ವಿತರಣೆ ಕುರಿತು ಮುಕ್ತವಾಗಿ ಚರ್ಚಿಸಿದರು.

ಬಳಿಕ ಗ್ರಾಮದ ಮನೆಗೆ ತೆರಳಿ ಶೌಚಾಲಯ ಇರುವ ಬಗ್ಗೆ ಮಾಹಿತಿ ಪಡೆದು, “ಶೌಚಾಲಯ ಬಳಕೆಗೆ ಸರ್ಕಾರದಿಂದ ಈಗಾಗಲೇ ಪ್ರೋತ್ಸಾಹಧನ ವಿತರಿಸುತ್ತಿದೆ. ಶೌಚಾಲಯ ಬಳಕೆಯಿಂದ ನಮ್ಮ ಆರೋಗ್ಯ ಸುರಕ್ಷಿತ ಹಾಗೂ ಗ್ರಾಮದ ಸುತ್ತ-ಮುತ್ತಲೂ ನೈರ್ಮಲ್ಯ ವಾತಾವರಣ ಉಂಟಾಗುತ್ತದೆ. ಹಾಗಾಗಿ ಪ್ರತಿದಿನ ಶೌಚಾಲಯ ಬಳಕೆ ಮಾಡಬೇಕು” ಎಂದು ಗ್ರಾಮಸ್ಥರಲ್ಲಿ ಸಿಇಒ ಮನವಿ ಮಾಡಿದರು.‌

ಈ ಸುದ್ದಿ ಓದಿದ್ದೀರಾ? ರಾಜ್ಯದ ಹೆಣ್ಣು ಮಕ್ಕಳಿಗಾಗಿ ಆರಂಭವಾಗಿದ್ದ ‘ಶುಚಿ ಯೋಜನೆ’ ಸ್ಥಗಿತ; ರಾಯಚೂರು ಬಾಲಕಿಯರಿಗೆ ಸಂಕಷ್ಟ

ತೋಟಗಾರಿಕೆ ಇಲಾಖೆಯಿಂದ ಬದು ಸುತ್ತಲೂ ತೆಂಗು ತೋಟ ನಿರ್ಮಾಣ ಕಾಮಗಾರಿ ವೀಕ್ಷಿಸಿದರು.

ತಾ ಪಂ ಇಒ ದುಂಡಪ್ಪ ತುರಾದಿ, ಗ್ರಾ.ಪಂ ಸದಸ್ಯ ಅಂದಪ್ಪ ಚಿಲಗೋಡ್ರ, ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಂತ್ರಿಕ ಸಂಯೋಜಕ ಯಮನೂರ, ತೋಟಗಾರಿಕೆ ಇಲಾಖೆಯ ಬಸವರಾಜ, ಕಾರ್ಯದರ್ಶಿ ಮಂಜುನಾಥ, ತಾಂತ್ರಿಕ ಸಂಯೋಜಕಿ ಕವಿತಾ, ತಾಂತ್ರಿಕ ಸಹಾಯಕ ಪ್ರವೀಣ, ಬಿಎಫ್‌ಟಿ ಮಾಳಪ್ಪ, ಗ್ರಾ.ಪಂ ಸಿಬ್ಬಂದಿ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...