ಕನಕಗಿರಿ ತಾಲೂಕಿನ ಕರಡೋಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗಲಿಂಗಪ್ಪ ಅವರನ್ನು ಕರ್ತವ್ಯ ಲೋಪ, ಬೇಜವಾಬ್ದಾರಿ ಕಾರಣದಿಂದ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರು ಸೇವೆಯಿಂದ ಅಮಾನತು ಆದೇಶ ಹೊರಡಿಸಿದ್ದಾರೆ.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಮಂಜೂರಾದ 426 ಗುರಿಗಳಲ್ಲಿ 119 ಮಾತ್ರ ಪ್ರಗತಿ ಮಾಡಿ ಬಡ ಕುಟುಂಬಗಳಿಗೆ ಸರ್ಕಾರದ ಯೋಜನೆಯನ್ನು ತಲುಪಿಸುವಲ್ಲಿ ನಿರ್ಲಕ್ಷ್ಯ ತೋರಿವುದು ಹಾಗೂ ಮನರೇಗಾ ಯೋಜನೆಯಲ್ಲಿ ನಿಗದಿತ ಗುರಿ, ಹೆಚ್ಚುವರಿ ಕಾಮಗಾರಿ ಹಾಗೂ ಸಮರ್ಪಕ ಕರ ವಸೂಲಾತಿ ಮತಾಡಲಿಲ್ಲ.
ಪಿಡಿಒ ಅವರ ಕರ್ತವ್ಯದ ನಿರ್ಲಕ್ಷ್ಯದ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ನೋಟಿಸ್ ಜಾರಿಗೆ ಮಾಡಿದ್ದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ತೋರಿದ ಬಗ್ಗೆ ಮೇಲಾಧಿಕಾರಿಗಳು ಸಲ್ಲಿಸಿದ ವರದಿ ಆಧರಿಸಿ ಅಮಾನತು ಮಾಡಲಾಗಿದೆ.
https://shorturl.fm/jInVe