ಕೊಪ್ಪಳ | ರಾಷ್ಟ್ರದ್ರೋಹಿ ಅಮಿತ್ ಶಾನನ್ನು ದೇಶದಿಂದ ಗಡಿಪಾರು ಮಾಡಿ: ಸಂವಿಧಾನ ಸಂರಕ್ಷಣಾ ಒಕ್ಕೂಟ ಒತ್ತಾಯ

Date:

ಭಾರತದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ಲಘುವಾಗಿ ಮಾತನಾಡಿರುವ ರಾಷ್ಟ್ರದ್ರೋಹಿ ಅಮಿತ್ ಶಾನನ್ನು ದೇಶದಿಂದ ಗಡಿಪಾರು ಮಾಡಿ, ಕೇಂದ್ರ ಗೃಹಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂವಿಧಾನ ಸಂರಕ್ಷಣಾ ಒಕ್ಕೂಟ ಒತ್ತಾಯಿಸಿದೆ.

- Advertisement -

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಬೃಹತ್‌ ಹೋರಾಟದಲ್ಲಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಡಾ ಬಿ ಆರ್ ಅಂಬೇಡ್ಕರ್ ರಚಿಸಿರುವ ಭಾರತದ ಸಂವಿಧಾನ ಮೇಲೆ ಸಂಸತ್‌ ಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅವರು ಕೊಟ್ಟಂತಹ ಎಲ್ಲ ರಾಜಕೀಯ ಅಧಿಕಾರಿವನ್ನು ಮರೆತು ಮಹಾನ್ ಮಾನವತಾವಾದಿ‌ ಅಂಬೇಡ್ಕರ್‌ ಬಗ್ಗೆ ಲಘವಾಗಿ ಮಾತನಾಡಿದ ಅಮಿತ್‌ ಶಾನನ್ನು ಕೇಂದ್ರದ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ದೇಶದಿಂದ ಗಡಿಪಾರು ಮಾಡಬೇಕು. ಅಲ್ಲದೆ ಪದೇಪದೆ ಸಂವಿಧಾನದ ವಿರುದ್ಧ ಹೇಳಿಕೆ ನೀಡುತ್ತಿರುವ ಕೆಲವು ಲೋಕಸಭಾ ಸಂಸದರನ್ನೂ ದೇಶದಿಂದ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು.

ಅಮಿತ್‌ ಶಾ ವಿರುದ್ಧ ಪ್ರತಿಭಟನೆ ಕೊಪ್ಪಳ 1

“ಚಹಾ ಮಾರುವ ವ್ಯಕ್ತಿ ಇವತ್ತು ಪ್ರಧಾನ ಮಂತ್ರಿ ಹುದ್ದೆಗೆ ಹೋಗುತ್ತಾರೆಂದರೆ ಅದು ಬಾಬಾ ಸಾಹೇಬ್‌ರು ರಚಿಸಿದ ಸಂವಿಧಾನದ ಅಡಿಯಲ್ಲಿಯೇ ಹೊರತು, ನಿನ್ನ ದೇವರಿಂದಲ್ಲ. ಕೊಟ್ಟಿದ್ದನ್ನು ಮರೆತು ಕಾಲ್ಪನಿಕ ದೇವರುಗಳನ್ನು ಸ್ಮರಿಸುವಂತೆ ಹೇಳುವ ಮೂಢತನಕ್ಕೆ ದಿಕ್ಕಾರವಿರಲಿ” ಎಂದು ಮರಿಯಪ್ಪ ಸಾಲೋನಿ ಆಕ್ರೋಶ ವ್ಯಕ್ತಪಡಿಸಿದರು.

ಸಿರಾಜ್ ಅಹ್ಮದ್ ಅವರು ಮಾತನಾಡಿ, “ಸಂವಿಧಾನದ ಅಡಿಯಲ್ಲಿ ಎಲ್ಲರೂ ಅಧಿಕಾರದ ಗದ್ದುಗೆ ಏರಿ, ಈಗ ಬಾಬಾ ಸಾಹೇಬ್ ಹೆಸೆರು ಒಂದು ವ್ಯಸನವೆಂದು ಹೇಳುತ್ತಿದ್ದಾರೆ. ಇದು ಅಂಬೇಡ್ಕರ್ ಅವರಿಗೆ, ಶೋಷಿತ ಸಮುದಾಯಗಳ ಅಸ್ಮಿತೆಗೆ ಮಾಡಿದ ಅಪಮಾನ. ಮನುವಾದಿ ನಿರಂತರ ಸಂವಿಧಾನವನ್ನು ಹರಿಯುತ್ತಿದ್ದಾರೆ. ಅದು ನಮಗೆ ಅರ್ಥವಾಗುತ್ತಿಲ್ಲ. ಇವತ್ತು ನಾವು ಎಚ್ಚೆತ್ತುಕೊಳ್ಳದಿದ್ದರೆ ಪ್ರಜಾಪ್ರಭುತ್ವದ ಅವನತಿಯಾಗುವ ಕಾಲ ಸಮೀಪ ಬರುತ್ತಿದೆ. ಸಂವಿಧಾನದ ಮೂಲ ಆಶಯವನ್ನು ಬದಲಾಯಿಸುವ ಎಲ್ಲ ತಂತ್ರಗಾರಿಕೆಗಳೂ ನಡೆಯುತ್ತಿವೆ. ಆದ್ದರಿಂದ, ಈಗಿಂದಲೇ ತೀವ್ರ ಹೋರಾಟಕ್ಕೂ ನಾವು ಸಜ್ಜಾಗಬೇಕಿದೆ” ಎಂದು ಪ್ರತಿಭಟನಾಕಾರರಿಗೆ ಎಚ್ಚರಿಕೆ ಕರೆಕೊಟ್ಟರು.

ಅಮಿತ್‌ ಶಾ ವಿರುದ್ಧ ಪ್ರತಿಭಟನೆ ಕೊಪ್ಪಳ 2

ಯಲ್ಲಪ್ಪ ಕಟ್ಟಿಮನಿ ಮಾತನಾಡಿ, “ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಅಮಿತ್ ಶಾ ಅವರು ಬೇಕಾದರೆ ತಮ್ಮ ರಾಮನ ಜಪ ಮಾಡಿ ಸ್ವರ್ಗಕ್ಕೆ ಹೋಗಲಿ. ನಮಗೆ ಅಂಬೇಡ್ಕರ್ ಒಬ್ಬರೇ ಸಾಕು. ಅವರ ಹೆಸರಲ್ಲೇ ಸಮಾನತೆ ಇದೆ, ಜಾಗೃತಿ, ಅರಿವು, ಉಳಿವು ಎಲ್ಲವೂ ಇದೆ. ‘ಸ್ವರ್ಗ ಹೋದರೂ ಹೋಗಲಿ, ಬಾಬಾ ಸಾಹೇಬ್ ಅಂಬೇಡ್ಕರ್ ಮಾತ್ರ ನಮಗಿರಲಿ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮನುಸ್ಮೃತಿ, ಆರೆಸ್ಸೆಸ್ ಕುರಿತು‌ ಅಂಬೇಡ್ಕರ್ ಕಠಿಣವಾಗಿ ಟೀಕಿಸಿದ್ದರು: ಮಾಜಿ ಶಾಸಕ ರಾಜು ಆಲಗೂರ

ವೀರನಗೌಡ ಮಾಲಿ ಪಾಟೀಲ್ ಮಾತನಾಡಿ, “ದೇವರು-ಧರ್ಮದ ಹೆಸರಲ್ಲಿ ರಾಜಕೀಯ ಮಾಡುವ ಕೇಂದ್ರ ಸರ್ಕಾರದ ನಾಯಕರಿಗೆ ಅಂಬೇಡ್ಕರ್ ಶಕ್ತಿಯ ಬಗ್ಗೆ ಗೊತ್ತಿಲ್ಲ. ಇವರಿಗೆ ದಲಿತರು, ಶೋಷಿತರ ನೋವುಗಳೂ ಗೊತ್ತಿಲ್ಲ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ಕಂದಕ ಸೃಷ್ಟಿಸಿ‌ ಕೋಮುದ್ವೇಷ ಹರಡಿ ದೇಶದ ಜನತೆಯ ನೆಮ್ಮದಿ, ಶಾಂತಿಯನ್ನು ಹಾಳುಮಾಡಿದ್ದಾರೆ. ಈಗ ಮತ್ತೆ ವಿಶ್ವಜ್ಞಾನಿಯಾದ ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿ ಅವರಿಗೆ ಅವಮಾನಿ ಮಾಡಿರುವ ಗೃಹಮಂತ್ರಿಯ ಹೇಳಿಕೆಯನ್ನು ಖಡಾಖಂಡಿತವಾಗಿ ಖಂಡಿಸುತ್ತೆವೆ” ಎಂದರು.

ಮರಿಯಪ್ಪ ಸಾಲೋನಿ, ಖಾಜಾಹುಸೇನ್ ಮುಲ್ಲಾ, ಎಸ್ ಡಿ ಮಂಜಪ್ಪ, ಯಲ್ಲಪ್ಪ ಕಟ್ಟಿಮನಿ, ವೀರನಗೌಡ ಬೂದಗುಂಪ, ಅಜ್ಮೀರ್ ಎಸ್‌ಡಿ‌ಪಿಐ, ಸೋಮಶೇಖರ್ ಮೈಲಾಪೂರ, ಅನಂದ, ಉಮ್ಮೇಶ ವಕೀಲರು, ವೀರನಗೌಡ ಮಾಲಿ ಪಾಟೀಲ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...