ಕೊಪ್ಪಳ | ಅಂಗನವಾಡಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ವಿಡಿಯೋ ವೈರಲ್: ಇಬ್ಬರು ಅಮಾನತು

Date:

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎನ್ನುವ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದರೆ, ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ.

- Advertisement -

ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್‌ ಕಸಿದುಕೊಂಡು ವಂಚನೆ ಎಸಗುತ್ತಿದ್ದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ, ಸಹಾಯಕಿ ಶೈನಜಾ ಬೇಗಂ ಅವರನ್ನು ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಿ ಕೊಪ್ಪಳ ಜಿಲ್ಲೆಯ ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ವಂಚನೆ ನಡೆದಿದ್ದು, ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಈ ಘಟನೆಯ ವೀಡಿಯೋವನ್ನು ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಅವರ ‘ವಿಜಯ ಟೈಮ್ಸ್‌’ ವರದಿ ಮಾಡಿತ್ತು. ಬಳಿಕ ಅದು ವೈರಲಾಗಿತ್ತು.

ಈ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಕರ್ತೆ, ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಇನ್ನು ಸ್ಥಳೀಯರು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...