ಕೊಪ್ಪಳ | ಬಿಜೆಪಿ ಸೇರಿ ಅಣ್ಣಾಮಲೈ ಪಶ್ಚಾತ್ತಾಪ ಪಡ್ತಿದ್ದಾರೆ: ಸಚಿವ ಶಿವರಾಜ್ ತಂಗಡಗಿ

Date:

ಅಣ್ಣಾಮಲೈ ಒಳ್ಳೆಯ ಐಪಿಎಸ್ ಅಧಿಕಾರಿಯಾಗಿದ್ದರು. ಬಿಜೆಪಿಗೆ ಹೋಗಿ ಮೋಸ ಹೋದರೆ, ಅವರೇ ಪ್ರಾಮಾಣಿಕರನ್ನು ಕರೆದು ಪಕ್ಷದಲ್ಲಿ ಸೇರಿಸಿಕೊಂಡು ಬೀದಿಗೆ ಬಿಡುವ ಕೆಲಸ ಮಾಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಅಣ್ಣಾಮಲೈ ದಕ್ಷ ಅಧಿಕಾರಿಯಾಗಿ ಜನರ ವಿಸ್ವಾಸ ಗಳಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದರಿಂದ ಅವರ ಇಡೀ ಬದುಕು‌ ಏನಾಗಿದೆಯೆಂದು ಗಮನಿಸುತ್ತಿದ್ದೇವೆ. ರಸ್ತೆಯಲ್ಲಿ ನಿಂತು ಬಾರ್ಕೋಲಲ್ಲಿ ತಮ್ಮ ಮೈ ಹೊಡೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ” ಎಂದು ಅಣ್ಣಾಮಲೈ ಅವರ ರಾಜಕೀಯ ದುರಂತ ಬಗ್ಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು‌ 11 ವರ್ಷ ಆಯ್ತು. ಇಷ್ಟು ವರ್ಷದಲ್ಲಿ‌ ಅವರು ಮಾಡಿರುವ ಅಭಿವೃದ್ಧಿ ಕೆಲಸ ಏನು? ಕಾಂಗ್ರೆಸ್ ಯೋಜನೆಗಳ ಹೆಸರು ಬದಲಾಯಿಸಿ ತಮ್ಮ ಯೋಜನೆ ಅಂತ ಹೇಳ್ತಿದ್ದಾರೆ. ಇವರು ಸಾಧ್ಯವಾದಷ್ಟು ಜನರ ಕಣ್ಣಿಗೆ ಮಣ್ಣೆರಚಿ ಮೋಸ ಮಾಡಲು ಪ್ರಯತ್ನ ಪಡುತ್ತಿದ್ದಾರೆ” ಎಂದರು.

“ಅಧಿಕಾರ ಬಂದು ನೂರು ದಿನದಲ್ಲಿ ಸ್ವೀಸ್ ಬ್ಯಾಂಕ್‌ನಿಂದ ಕಪ್ಪು ಹಣವನ್ನು ಹೊರಗರ ತರುತ್ತೇವೆಂದು ಹೇಳಿದ್ದರು, ತಂದರಾ? 15 ಲಕ್ಷ ಭಾರತೀಯರ ಖಾತೆಗೆ ಹಾಕಿದರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಕೊಟ್ಟರಾ? ಯಾವುದೂ ತರಲಿಲ್ಲ, ಜನರಿಗೂ ಕೊಡಲಿಲ್ಲ” ಎಂದು ಬಿಜೆಪಿ ಹಾಗೂ ಪ್ರಧಾನಿಯವರ ಸುಳ್ಳುಗಳ ಜೋಡಿ ಸರಮಾಲೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ನಗರದಲ್ಲಿ ಸುರಿದ ಮೊದಲ ಮಳೆಗೆ ತಂಪಾದ ಇಳೆ

“ಬಿಜೆಪಿಯವರಿಗೆ ತಮ್ಮ ರಾಜಕಾರಣ ಹಾಗೂ ರಾಜಕೀಯಕ್ಕೆ ಯಾರ ಅವಶ್ಯಕತೆ ಎಷ್ಟು ಬೇಕೋ ಅಷ್ಟು ಬಳಸಿಕೊಳ್ಳುತ್ತಾರೆ. ರಾಜಕೀಯ ಲಾಭವಾದ ಮೇಲೆ ಅವರನ್ನು ಬಿಸಾಡುತ್ತಾರೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದಾಗ ನನ್ನನ್ನು ಕರೆದುಕೊಂಡು ಹೋಗಿ ‘ಮುಖ್ಯಮತ್ರಿ ಸ್ಥಾನ ಬಿಟ್ಟು ಉಳಿದ ಎಲ್ಲಾ ಇಲಾಖೆ ಕೊಡುತ್ತೇವೆಂದು ಹೇಳಿದ್ದರು. ಬಹುಮತ ಸಾಬೀತಾಗಿ ಅಧಿಕಾರಕ್ಕೆ ಬಂದ ಮೇಲೆ ಒಳ್ಳೆಯ ಖಾತೆಗಳನ್ನು ಅವರು ತೆಗೆದುಕೊಂಡರು ನಮಗೆ ಯಾವುದೋ ಖಾತೆ ಕೊಟ್ಟರು” ಎಂದು ಹೇಳಿದರು.

“ಬಿಜೆಪಿಯವರು ರಾಜಕಾರಣ ಮಾಡಲು ಅಮಾಯಕರು, ಜನಸಾಮಾನ್ಯರು ಹಾಗೂ ಯುವಜನತೆಯನ್ನು ರಾಜಕೀಯವಾಗಿ ಬಳಸಿಕೊಂಡು ದಾರಿತಪ್ಪಿಸುವಂಥ ಕೆಲಸ ಮಾಡುತ್ತಾರೆ.‌ ಅವರಿಗೆ ತಮ್ಮ ಮಕ್ಕಳ ಮೇಲಿರುವ ಜವಾಬ್ದಾರಿ ಹಾಗೂ ಕಾಳಜಿ, ಬಡವರ ಮಕ್ಕಳ ಮೇಲಿಲ್ಲ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...