ಕೊಪ್ಪಳ | ಎಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ 62 ವಸತಿನಿಲಯಗಳ ಅನುಮೋದನೆ ಸ್ವಾಗತಾರ್ಹ: ರಮೇಶ ಕಾಳೆ

Date:

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ 204ರಂತೆ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿ ಜಿಲ್ಲೆಗೆ ಎರಡರಂತೆ ಒಟ್ಟು 62 ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಧಾರವನ್ನು ಕಾಂಗ್ರೆಸ್ ಯುವ ಮುಖಂಡ ರಮೇಶ ಕಾಳೆ ಸ್ವಾಗತಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಹಿಂದುಳಿದ ವರ್ಗಗಳ ಎಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಒಟ್ಟು 62 ವಸತಿ ಶಾಲೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದ್ದು‌, ಈಗಾಗಲೇ 10 ಎಂಜಿನಿಯರಿಂಗ್ ನಿಲಯಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 50:50 ಅನುದಾನದ ಅನುಪಾತದಲ್ಲಿ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಮಾಡಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ತುಮಕೂರು ನಗರದಲ್ಲಿ ನ.17 ರಿಂದ ನಾಟಕೋತ್ಸವ : ಸತೀಶ್ ತಿಪಟೂರು

“ಕೊಪ್ಪಳ ಜಿಲ್ಲೆಯ ತಳಕಲ್‍ನಲ್ಲಿ 6 ವಸತಿ ನಿಲಯಗಳ ನಿರ್ಮಾಣಕ್ಕೂ ಅನುಮೋದನೆ ನೀಡಿ ಪ್ರಸಕ್ತ ಸಾಲಿನಲ್ಲಿ 15 ಕೋಟಿ ರೂಪಾಯಿಗಳ ಅನುದಾನವನ್ನೂ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ನಿರ್ಧಾರದಿಂದ ಈ ಭಾಗದ ಹಿಂದುಳಿದ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಪ್ರೋತ್ಸಾಹ ನೀಡಿದಂತಾಗಿದೆ” ಎಂದರು.

ಹಾಸ್ಟೆಲ್‍ಗಳ ನಿರ್ಮಾಣ ಹಾಗೂ ಅನುದಾನಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿ ಶ್ರಮಿಸಿದ ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಗಿಯವರಿಗೂ ಕಾಂಗ್ರೆಸ್ ಯುವ ಮುಖಂಡ ರಮೇಶ ಕಾಳೆ ಅವರು ಕೃತಜ್ಞತೆಯನ್ನು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...