ಕೊಪ್ಪಳ | ಅಂಗಡಿಗಳ ಮೇಲೆ ದಾಳಿ; ₹40 ಲಕ್ಷ ರೂ. ಮೌಲ್ಯದ ಪಟಾಕಿ ವಶ

Date:

ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ಕೊಪ್ಪಳ ನಗರ ಹಾಗೂ ಗಂಗಾವತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ನಿಯಮಬಾಹಿರವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

ಗಂಗಾವತಿ ನಗರದ ಜಾಮಿಯಾ ಮಸೀದಿ ಸಮೀಪದ ಏಳು ಪಟಾಕಿ ಅಂಗಡಿ, ಮಳಿಗೆ, ಗೋದಾಮಿನ ಮೇಲೆ ಗುರುವಾರ ಪೊಲೀಸರು, ನಗರಸಭೆ, ತಾಲೂಕು ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ಜಂಟಿಯಾಗಿ ದಾಳಿ ನಡೆಸಿದರು.

ಅತ್ತಿಬೆಲೆಯಲ್ಲಿ ನಡೆದ ಪ್ರಕರಣ ಮರುಕಳಿಸಬಾರದೆಂದು ಮುಖ್ಯಮಂತ್ರಿ ಕಠಿಣ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಕೊಪ್ಪಳ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಅನಧಿಕೃತ ಮತ್ತು ಜನವಸತಿ ಪ್ರದೇಶಗಳಲ್ಲಿ ಪಟಾಕಿ ಮಾರಾಟ ಅಥವಾ ಸಂಗ್ರಹ ಮಾಡಿದ್ದರೆ ಪರಿಶೀಲಿಸಿ ದಾಳಿ ನಡೆಸಿ ವರದಿ ಸಲ್ಲಿಸಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೀಗಾಗಿ ಗುರುವಾರ ಅಧಿಕಾರಿಗಳು ಗಂಗಾವತಿಯ ಬಳ್ಳಾರಿ ಚನ್ನಬಸಪ್ಪ, ಅಶೋಕ ಅಡಿವೆಪ್ಪ ಹೂಗಾರ, ಪಾಂಡುರಂಗ ನಾಗಪ್ಪ, ಮಹಾಬಲೇಶ್ವರ ಶಿವಶಂಕರಪ್ಪ ಅವರ ಅಂಗಡಿ ಸೇರಿದಂತೆ 7 ಮಳಿಗೆಗಳ ಮೇಲೆ ದಾಳಿ ನಡೆಸಿದರು.

ವಶಪಡಿಸಿಕೊಂಡ ಪಟಾಕಿಗಳನ್ನು ಎರಡು ಟ್ರ್ಯಾಕ್ಟರ್‌ ಮತ್ತು ಎರಡು ಕಸ ಸಂಗ್ರಹ ವಾಹನಗಳಲ್ಲಿ ತೆಗೆದುಕೊಂಡು ಹೋಗಿದ್ದು, ಸದ್ಯ ತಾಲೂಕು ಆಡಳಿತದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದಾರೆ ಎನ್ನಲಾಗಿದೆ.

ದಾಳಿ ಬಳಿಕ ಗಂಗಾವತಿ ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ ಮಾಧ್ಯಮಗಳೊಂದಿಗೆ ಮಾತನಾಡಿ, “ಜನವಸತಿ ಪ್ರದೇಶಗಳಲ್ಲಿ ಪಟಾಕಿ ಸಂಗ್ರಹಕ್ಕೆ ಅವಕಾಶವಿಲ್ಲ. ಆದರೆ, ಇಲ್ಲಿನ ಬಹುತೇಕ ಮಾಲೀಕರು ಪಟಾಕಿಗಳನ್ನು ಜನವಸತಿ ಪ್ರದೇಶಗಳಲ್ಲಿನ ಅಂಗಡಿಗಳಲ್ಲಿಟ್ಟು ಮಾರಾಟ ಮಾಡುತ್ತಿದ್ದಾರೆ. ಇದು ಕಾನೂನು ಬಾಹಿರ. ಜಪ್ತಿ ಮಾಡಿದ ಎಲ್ಲ ಪಟಾಕಿಗಳನ್ನು ಒಂದೆಡೆ ಸಂಗ್ರಹಿಸಿ, ಪಟಾಕಿ ಮಾರಾಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ದಾಳಿ ಮುಂದುವರಿಯಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ದಸರಾದಲ್ಲಿ ಕರೋಕೆ ಹಾಡು ನಿಷೇಧಿಸಲು ಆರ್ಟಿಸ್ಟ್ ಅಸೋಸಿಯೇಷನ್ ಆಗ್ರಹ

ದಾಳಿಯಲ್ಲಿ ವಶಕ್ಕೆ ಪಡೆದ ಪಟಾಕಿಗಳ ಮೊತ್ತ ₹40 ಲಕ್ಷಕ್ಕೂ ಹೆಚ್ಚು ಇರಬಹುದೆಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆ ವ್ಯಾಪ್ತಿಯ ಎರಡು ಕಡೆ ಮತ್ತು ನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಕಡೆ ಸಂಜೆ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನಾ ಕಾರ್ಯ ಜರುಗುತ್ತಿದೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸ್ ಇ‌ನ್ಸ್‌ಪೆಕ್ಟರ್‌ ಮಂಜುನಾಥ, ಪುಂಡಲಿಕಪ್ಪ, ತಾಲೂಕು ಪಂಚಾಯಿತಿ ಇಒ ಲಕ್ಷ್ಮೀದೇವಿ, ನಗರಸಭೆ ಪೌರಾಯುಕ್ತ ಆರ್ ವಿರೂಪಾಕ್ಷಮೂರ್ತಿ, ನಗರಸಭೆ ಆರೋಗ್ಯ ನಿರೀಕ್ಷಕ ನಾಗರಾಜ, ಚೇತನ್ ಕುಮಾರ್ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...