ಕೊಪ್ಪಳ | ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನ: ಪೊಲೀಸರೊಂದಿಗೆ ವಾಗ್ವಾದ

Date:

ಸರ್ವೋಚ್ಚ ನ್ಯಾಯಾಲಯದ ಆದೇಶದ ಪರಿಶಿಷ್ಟಜಾತಿ ಸಮುದಾಯಗಳಿಗೆ ಒಳಮೀಸಲಾತಿ ನೀಡಬೇಕು ಎಂದು ಕೊಪ್ಪಳ ಜಿಲ್ಲೆಯ ಮಾದಿಗ ಸಮುದಾಯ ಸೇರಿದಂತೆ ವಿವಿಧ ಸಮುದಾಯಗಳು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಜಿಲ್ಲಾಡಳಿತ ಭವನಕ್ಕೆ ಒಳಪ್ರವೇಶಿಸಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.‌ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಘೋಷಣೆಗಳನ್ನು ಕೂಗಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೊಪ್ಪಳ ತಹಶೀಲ್ದಾರ್ ವಿಠಲ ಚೌಗುಲಾ ಅವರ ಬಹುದಿನಗಳ ಬೇಡಿಕೆಯಾದ ಒಳಮೀಸಲಾತಿ ಜಾರಿಗೊಳಿಸಲು ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ‌ ವಿಳಂಬ ನೀತಿ ಕೈಬಿಡಬೇಕು. ಆಗಸ್ಟ್ 11ರಂದು ಅರಂಭವಾಗುವ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ತರಬೇಕು. ಇಲ್ಲದಿದ್ದರೆ, 16 ಆಗಸ್ಟ್‌ರಿಂದ ರಾಜ್ಯಾದ್ಯಂತ ಅಸಹಕಾರ ಹೋರಾಟ ಆರಂಭಿಸಲಾಗುವುದು. ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಯಾವ ಅಧಿಕಾರಕ್ಕೆ ಬರುವ ಮುನ್ನ ಒಳಮೀಸಲಾತಿ ಜಾರಿ ಮಾಡು‌ತ್ತೇವೆ ತಪ್ಪಿ ನಡೆಯುವುದಿಲ್ಲವೆಂದು ಹೇಳುತ್ತವೆ. ಅಧಿಕಾರಕ್ಕೆ ಬಂದ ಮೇಲೆ ತಮ್ಮ ವರಸೆಯನ್ನೇ ಬದಲಾಯಿಸಿಬಿಡುತ್ತವೆ. ನಮ್ಮ ತಾಳ್ಮೆ ಪರೀಕ್ಷೀಸಬೇಡಿ” ಎಂದು ಸರ್ಕಾರಕ್ಕೆ ಎಚ್ಚರಿಸಿದರು.‌

ಕೊಪ್ಪಳ ಒಳಮೀಸಲಾತಿ ಹೋರಾಟ 1 1

ಜಿಲ್ಲಾ ಕಚೇರಿ ಒಳ‌ನುಗ್ಗಲು ಪ್ರಯತ್ನ ಹೆಚ್ಚುತ್ತಿದ್ದರಿಂದ ಪೊಲೀಸರು ಮಾಜಿ ಶಾಸಕ ಬಸವರಾಜ್ ದಡೆಸೂರು ಸೇರಿದಂತೆ ಹಲವು ಪ್ರತಿಭಟನೆ ನಿರತ ಹೋರಾಟಗಾರರನ್ನು ವಶಕ್ಕೆ ಪಡೆದು ಸಾರಿಗೆ ವಾಹನದಲ್ಲಿ ಕರೆದುಕೊಂಡು ಹೋದರು. ಇದರಿಂದ ಆಕ್ರೋಶಗೊಂಡ ಜನರು ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿ ಭಿತ್ತಪತ್ರಗಳನ್ನು ಪ್ರದರ್ಶಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಒಳಮೀಸಲಾತಿ ಜಾರಿಗೆ ಅರೆಬೆತ್ತಲೆ ಮೆರವಣಿಗೆ: ಕೇಶ ಮುಂಡನೆ ಮಾಡಿಕೊಂಡು ವಿನೂತನ ಪ್ರತಿಭಟನೆ

ಜಿಲ್ಲಾಡಳಿತಭವನ ಪ್ರವೇಶಿಸುವ ಮುನ್ನ ಕಚೇರಿ ಎದುರು ವೇದಿಕೆ ಕಾರ್ಯಕ್ರಮದಲ್ಲಿ ಬಸವರಾಜ್ ದಡೆಸೂರು ಮಾತನಾಡಿ, “ಶೋಷಿತರಲ್ಲೇ ಶೋಷಿತ ಸಮುದಾಯಗಳಿಗೆ ಒಳಮೀಸಲಾತಿ ಜಾರಿ ಮಾಡುವಂತೆ ಸುಮಾರು 35 ವರ್ಷಗಳಿಂದ ಹೋರಾಟ ಮಾಡುತ್ತಲೇ ‌ಬಂದಿದೆ. ಆದರೆ, ಯಾವ ಸರ್ಕಾರಗಳು ನಮ್ಮ ಹೋರಾಟವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಆದ್ದರಿಂದ ನಾಳೆಯ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...