ಕೊಪ್ಪಳ | ಸಚಿವ ಸಂಪುಟದಿಂದ ಅಮಿತ್ ಶಾ ವಜಾಕ್ಕೆ ಭೀಮ್‌ ಆರ್ಮಿ ಆಗ್ರಹ

Date:

ಡಾ. ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವೇ ಗೃಹಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಬೇಕೆಂದು‌ ಒತ್ತಾಯಿಸಿ ಭೀಮ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನಾಕಾರರು ಕೊಪ್ಪಳ ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

- Advertisement -

“ಬುಧವಾರ ಸಂಸತ್ತಿನಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ‘ಡಾ.‌ ಬಿ ಆರ್ ಅಂಬೇಡ್ಕರ್ ಹೆಸರನ್ನು ಪದೇ ಪದೆ ಬಳಸುವುದು ಶೋಕಿಯಾಗಿದೆ, ಅಂಬೇಡ್ಕರ್ ಹೆಸರು ಬಳಸುವುದಕ್ಕಿಂತ ದೇವರ ಸ್ಮರಣೆ ಮಾಡಿದ್ದರೆ ಏಳೇಳು ಜನ್ಮಕ್ಕೆ ಆಗುವಷ್ಟು ಸ್ವರ್ಗವಾದರೂ ಸಿಗುತ್ತಿತ್ತು’ ಎಂದು ಹಗುರವಾಗಿ ಮಾತನಾಡಿ ಡಾ. ಬಿ ಅರ್ ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿರುವುದು ಖಂಡನೀಯ” ಎಂದು ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಅಮಿತ್ ಶಾ ನಾಡಿನ ಜನತೆಯ ಕ್ಷಮೆಯಾಚಿಸಿ, ರಾಜೀನಾಮೆ ನೀಡುವಂತೆ ಡಿಎಸ್‌ಎಸ್ ಆಗ್ರಹ

“ಅಮಿತ್ ಶಾ ಅವರ ಅಸೂಕ್ಷ್ಮ ಹೇಳಿಕೆ ಮತ್ತು ಅಭದ್ರ ಹೇಳಿಕೆ ಇಡೀ ದೇಶದ ಶೋಷಿತ ಸಮುದಾಯಗಳ ಸಂಕಷ್ಟ ಹಾಗೂ ಅವಮಾನವನ್ನು ಒತ್ತಿ ಹೇಳುತ್ತಿದೆ. ಈ ಹೇಳಿಕೆ ತುಳಿತಕ್ಕೊಳಪಟ್ಟವರನ್ನು ಜಾಗೃತಿಗೊಳಿಸದಂತ ಮಹಾ ವಿಶ್ವಜ್ಞಾನಿಗೆ ಅವಮಾನ ಮಾಡಿದ್ದಾರೆ. ಕೂಡಲೇ ಅಮಿತ್ ಶಾ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ಅವರ ವಿರುದ್ಧ ತೀವ್ರವಾಗಿ ಹೋರಾಟ ಮಾಡುತ್ತೇವೆ” ಎಂದು ಶಶಿಕಲಾ ಮಠದ ಆಕ್ರೋಶ ವ್ಯಕ್ತಪಡಿಸಿದರು.

ನಿಂಗು ಬೆಣಕಲ್, ಮಾಂತೇಶ್ ಮ್ಯಾಗಳಮನಿ, ಯಮನೂರ ಬಣಕಾರ, ಮೈಲಾರಪ್ಪ ಮಾದಿನೂರು, ಶಶಿಕಲಾ ಮಠದ, ಸಲೀಮಾ ಜಾನ್, ಸಂಜಯ ದಾಸರ ಕೌಜಗೇರಿ, ಯಲ್ಲಪ್ಪ ಸಣ್ಣಿಗರ, ರಾಮಲಿಂಗ ಶಾಸ್ತ್ರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಕೋಲಾರ | ಸ್ಮಶಾನಗಳ ದಾರಿ ಒತ್ತುವರಿ ತೆರವುಗೊಳಿಸಿ ಮೂಲಸೌಕರ್ಯ ಒದಗಿಸಿ: ರೈತ ಸಂಘ ಒತ್ತಾಯ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಸ್ಮಶಾನದ ದಾರಿಗಳನ್ನು ಗುರುತಿಸಿ ತೆರವುಗೊಳಿಸುವುದರ ಜತೆಗೆ, ಸ್ಮಶಾನಗಳಲ್ಲಿ ಮೂಲಸೌಕರ್ಯಗಳನ್ನು...

ಚಿಂತಾಮಣಿ | ಕಾರು ಡಿವೈಡರ್‌ಗೆ ಡಿಕ್ಕಿ:ಎರಡು ವರ್ಷದ ಕಂದಮ್ಮ ಸಾವು, ಐವರಿಗೆ ಗಂಭೀರ ಗಾಯ

ಜೋರು ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಸರಿಯಾಗಿ ಕಾಣಿಸದೆ,ಚಾಲಕನ ನಿಯಂತ್ರಣ ತಪ್ಪಿದ...

ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ...