ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ ತಾವರಗೇರಾ ಮಾರ್ಗವಾಗಿ ಇಬ್ಬರು ಬೈಕ್ ಮೇಲೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬೈಕ್ ಚಲಾಯಿಸುತ್ತಿದ್ದ ಸವಾರ ಜೀವಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ತಾವರಗೇರಾ ಪೊಲೀಸರು ಭೇಟಿ ಕೊಟ್ಟು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಿದ್ದಾರೆ.