ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯ ₹25,000 ಕೋಟಿ ಹಣವನ್ನು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು.
ಕೊಪ್ಪಳದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿ, “ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ತಪ್ಪದೇ ಅವರ ಅಭಿವೃದ್ಧಿಗೆ ಮಾತ್ರ ಬಳಸಬೇಕು” ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಹಕ್ಕಿ ಜ್ವರ : ಜಿಲ್ಲೆಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ : ಶುಭ ಕಲ್ಯಾಣ್
ಗಮಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ಶಿವನಗೌಡ ನಾಯಕ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಜಿಲ್ಲಾಧ್ಯಕ್ಷ ಬಸವರಾಜ್ ದಡೇಸುಗೂರು, ಮಾಜಿ ಸಚಿವ ಹಾಲಪ್ಪ ಆಚಾರ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಕೆ ಎಸ್ ದಿವಾಕರ್ ಸೇರಿದಂತೆ ಇತರರು ಇದ್ದರು.