ಕೊಪ್ಪಳ | ಗ್ರಾಪಂ ಸದಸ್ಯೆ ಮಗಳ ಬಾಲ್ಯವಿವಾಹ ಪ್ರಕರಣ; ಮೂವರ ವಿರುದ್ಧ ದೂರು ದಾಖಲು

Date:

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರ ಮಗಳ ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.

- Advertisement -

ಬಾಲ್ಯ ವಿವಾಹದ ಸುದ್ದಿ ಹರಿದಾಡುತ್ತಿದ್ದಂತೆ ಹಿರೇಖೇಡ ಗ್ರಾಮ ಪಂಚಾಯತಿ ಅಧಿಕಾರಿ ಏ.25ರಂದು ಬಾಲಕಿ ವಿವಾಹವಾದ ಶ್ಯಾಮಣ್ಣ ಬಂಕಾಪೂರ, ಇವರ ಸಂಬಂಧಿಗಳಾದ ಪಕ್ಕೀರಪ್ಪ ಬಂಕಾಪೂರ ಹಾಗೂ ದೇವಮ್ಮ ಎಂಬುವರ ವಿರುದ್ದ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ದೂರು ದಾಖಲಿಸದಂತೆ ಶಾಸಕರು ಒತ್ತಡ ಹಾಕಿದ ಹಿನ್ನಲೆ ಐದು ದಿನದ ಬಳಿಕ ಮೂವರ ವಿರುದ್ಧವಷ್ಟೇ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಬಾಲ್ಯ ವಿವಾಹದಲ್ಲಿ ಭಾಗಿಯಾಗಿದ್ದ ಕಂಪ್ಲಿ ಹಾಲಿ ಶಾಸಕ ಜೆ‌ ಎನ್ ಗಣೇಶ್ ಹಾಗೂ ಗಂಗಾವತಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲ್ಯ ವಿವಾಹ ನಿಷೇಧವಾಗಿದ್ದರೂ ಕೊಪ್ಪಳ ಜಿಲ್ಲೆಯಲ್ಲಿ ನಿರಾತಂಕವಾಗಿ ಈ ರೀತಿ ವಿವಾಹಗಳು ನಡೆಯುತ್ತಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬಾಲ್ಯ ವಿವಾಹದಲ್ಲಿ ಪ್ರತಿಷ್ಠಿತ ರಾಜಕಾರಣಿಗಳ ಭಾಗಿಯಾಗುವಿಕೆಯೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕೊಪ್ಪಳ | ಪಹಲ್ಗಾಮ್‌ ಉಗ್ರ ಕೃತ್ಯಕ್ಕೆ ಸಿಪಿಐಎಂಎಲ್ ಖಂಡನೆ

ಈ ಪ್ರಕರಣದ ಬೆನ್ನಲ್ಲೇ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮತ್ತೊಂದು ಬಾಲ್ಯ ವಿವಾಹವಾದ ಘಟನೆ ನಡೆದಿರುವುದು ಬೆಳಿಕಿಗೆ ಬಂದಿದೆ ಎನ್ನಲಾಗಿದೆ. ಸಂಬಂಧ ಮಾಹಿತಿ ನಿರೀಕ್ಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...