ಕೊಪ್ಪಳ | ಬಾಲ್ಯವಿವಾಹ ಪ್ರಕರಣ ಸಾಬೀತು: ಚರ್ಚ್ ಫಾದರ್ ಸೇರಿ 6 ಮಂದಿಗೆ ಜೈಲು ಶಿಕ್ಷೆ

Date:

ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗದ್ವಾಲ್ ಕ್ಯಾಂಪ್ ಚರ್ಚ್‌ನಲ್ಲಿ ಅಪ್ರಾಪ್ತೆಯ ವಿವಾಹ(ಬಾಲ್ಯವಿವಾಹ) ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ 2 ವರ್ಷ ಜೈಲು ಹಾಗೂ 10 ಸಾವಿರ ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾ. ನಾಗೇಶ ಪಾಟೀಲ ಅವರು ತೀರ್ಪು ನೀಡಿದ್ದಾರೆ.

- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗದ್ವಾಲ್ ಕ್ಯಾಂಪ್ ಚರ್ಚ್‌ನಲ್ಲಿ 2020ರ ಮೇ 22ರಂದು ಅಪ್ರಾಪ್ತೆಗೆ ವಿವಾಹ ಮಾಡಲಾಗಿತ್ತು. ಆದ್ದರಿಂದ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವರ ಕುರುಪಣ್ಣ, ವರನ ತಂದೆ ಆನಂದ, ತಾಯಿ ಆಶೀರ್ವಾದಮ್ಮ, ವಧುವಿನ ತಂದೆ ಯೇಸು,‌ ತಾಯಿ ಶಾಂತಮ್ಮ ಚರ್ಚ್‌ನ ಫಾದರ್ ಅಬ್ರಹಾಂ ಡಿ ಶಿಕ್ಷೆಗೆ ಗುರಿಯಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

14 ವರ್ಷದ ಅಪ್ರಾಪ್ತೆಯ ಪೋಷಕ ಆರೋಪಿಗಳು ತಮ್ಮ ಮಗಳ ಮದುವೆಯನ್ನು ಗದ್ವಾಲ್ ಕ್ಯಾಂಪ್ ಗ್ರಾಮದ ಚರ್ಚ್‌ನಲ್ಲಿ 2020ರ ಮೇ 22ರಂದು ಫಾದರ್ ಅವರ ನೇತೃತ್ವದಲ್ಲಿ ಬಾಲ್ಯವಿವಾಹ ಮಾಡಿದ್ದರು. ಆರೋಪಿತರೆಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆ 2006ರ ಕಲಂ 9, 10, 11ರ ಅಡಿ ಅಪರಾಧ ಮಾಡಿದ್ದು, ಸಾಬೀತಾದ ಹಿನ್ನೆಲೆಯಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ದೊಡ್ಡಪ್ಪ ಜೆ ಅಪರಾಧಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕೆದಿಲ-ಪನಡ್ಕ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ: 12 ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ

ಇಂತಹದೇ ಒಂದು ಪ್ರಕರಣದಲ್ಲಿ 2017ರ ಏಪ್ರಿಲ್ 2ರಂದು ಗಂಗಾವತಿಯ ಶಾದಿಮಹಲ್‌ನಲ್ಲಿ ನಡೆದ ಬಾಲ್ಯವಿವಾಹ ಪ್ರಕರಣದಲ್ಲೂ ಗಂಗಾವತಿಯ ಪ್ರಧಾನ ದಿವಾಣಿ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಸೆ.22ರಂದು ಇಂಥದ್ದೇ ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ನಕಲಿ ವರ್ಗಾವಣೆ ಪ್ರಮಾಣ ಪತ್ರ ಸೃಷ್ಟಿಸಿ, ಬಾಲಕಿಯ ವಯಸ್ಸು ಮರೆಮಾಚಿ, ಬಾಲ್ಯವಿವಾಹ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವರ ಖಾಜಾ ಪಾಷಾ ಖಾದ್ರಿ, ವರನ ತಂದೆ ಮೈನುದ್ದೀನ್ ಖಾದ್ರಿ, ತಾಯಿ ಖತೂನ್ ಬೀ ಹಾಗೂ ಬಾಲಕಿಯ ತಂದೆ ಮಕ್ಯುಲ್ ಪೀರಾ ಖಾದ್ರಿ, ತಾಯಿ ಕುಸುಮಾಬೀ ಅವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ತಲಾ 10,000 ರೂ. ದಂಡ ವಿಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...