ಕೊಪ್ಪಳ | ʼದೇವನಹಳ್ಳಿ ಚಲೋʼ ಹೋರಾಟಗಾರರ ಬಂಧನ ಖಂಡಿಸಿ ಸಿಐಟಿಯು ಪ್ರತಿಭಟನೆ

Date:

Advertisements

ದೇವನಹಳ್ಳಿಯಲ್ಲಿ ಚಳವಳಿ ನಿರತ ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌ (ಸಿಐಟಿಯು) ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಎಚ್ಚರಿಕೆ ನೀಡಿ ಬಂಧಿತ ರೈತರನ್ನು ಬಿಡುಗಡೆಗೆ ಆಗ್ರಹಿಸಲಾಯಿತು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಸವರಾಜ್ ಶೀಲವಂತರ ಮಾತನಾಡಿ, “ದೇವನಹಳ್ಳಿ ಸೇರಿದಂತೆ 13 ಗ್ರಾಮಗಳಲ್ಲಿನ ರೈತರು ಸರ್ಕಾರದ ಬಲವಂತದ ಭೂ ಸ್ವಾಧೀನ ರೈತ ವಿರೋಧಿ ನೀತಿಗಳನ್ನು ಪ್ರತಿಭಟಿಸಿ, ಸುಮಾರು 1180 ದಿನಗಳಿಂದ ದೇವನಹಳ್ಳಿಯ ಸಂತೆ ಮೈದಾನದಲ್ಲಿ ಶಾಂತಿಯುತ ಚಳವಳಿಯನ್ನು ನಡೆಸುತ್ತಿದ್ದರು. ಇಂಥದೊಂದು ದೀರ್ಘಾವಧಿಯ ರೈತ ಚಳವಳಿ ನಡೆಯುತ್ತಿದ್ದರೂ, ಸರ್ಕಾರ ಮಾತ್ರ ಏನೂ ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶಿಸಿತು. ಇದು ರೈತರ ತಾಳ್ಮೆಗೆಡಲು ಕಾರಣವಾಯಿತು. ಇದರಿಂದಾಗಿ ರೈತರ ಚಳುವಳಿಯು ತೀವ್ರತೆ ಪಡೆಯಲು ಸರ್ಕಾರವೇ ಹೊಣೆ” ಎಂದು ಕಿಡಿಕಾರಿದರು.

Advertisements

ಸಿಪಿಐಎಂ ತಾಲೂಕು ಮುಖ್ಯಸ್ತೆ ಫಕ್ಕೀರಮ್ಮ ಮಿರಗನತಂಡಿ ಮಾತನಾಡಿ, “ರಾಜ್ಯದ ವಿವಿಧ ಜಿಲ್ಲೆಗಳ ರೈತರು, ಕಾರ್ಮಿಕರು, ಜನಪರ ಸಂಘಟನೆಗಳ ಕಾರ್ಯಕರ್ತರು ದೇವನಹಳ್ಳಿ ಚಲೋ ಚಳುವಳಿಯ ಭಾಗವಾಗಿ ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದರು. ಪ್ರಾಣ ಬಿಟ್ಟೆವು, ಭೂಮಿ ಬಿಡೆವು ಘೋಷವಾಕ್ಯದಡಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ವಿಸ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಬೇಕಾದ ಸರ್ಕಾರ, ರೈತರ ಜೊತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅನಗತ್ಯವಾಗಿ ಬಂಧಿಸಿ ದರ್ಪವನ್ನು ಮೆರೆದಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿ, ರಾಜ್ಯ ಮಟ್ಟದ ಹೋರಾಟಕ್ಕೆ ಬೆಂಬಲಿಸಿ ಗುರುವಾರ ಕೊಪ್ಪಳದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಿದಿದ್ದರೆ ಮುಂದಿನ ದಿನಗಳಲ್ಲಿ ಇಡೀ ರಾಜ್ಯ ವ್ಯಾಪಿ ಹೋರಾಟ ಎದುರಿಸಬೇಕಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಕೊಪ್ಪಳ | ನುಗ್ಗೆಸೊಪ್ಪಿನ ಪುಡಿಗೆ ವಿದೇಶದಲ್ಲಿ ಬೇಡಿಕೆ: ಕೃಷಿಯಲ್ಲಿ ಐಟಿ ಉದ್ಯೋಗಿ ಬಸಯ್ಯರ ಸಾಧನೆ

ಪ್ರತಿಭಟನೆಯಲ್ಲಿ ಖಾಸಿಮ್ ಸರ್ದಾರ್, ಎಸ್ ಎ ಗಫಾರ್, ಮಖಬೂಲ್ ರಾಯಚೂರು, ಶಿವಪ್ಪ ಹಡಪದ್, ಶಕ್ಷಾವಲಿ, ಮಂಜಪ್ಪ ಟಿ ಯು ಕೆ ಬಿ ಗೋನಾಳ, ನಾಗರಾಜ್ ಕಡೆಮನಿ, ಭೀಮಪ್ಪ ಯಲಬುರ್ಗಿ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X