ಕೊಪ್ಪಳ | ಪಟ್ಟಣಕ್ಕೆ ಹೊಂದಿಕೊಂಡ ಹಳ್ಳದ ಸ್ವಚ್ಛತೆಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹ

Date:

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣಕ್ಕೆ ಹೊಂದಿಕೊಂಡಿರುವ ತ್ರಿವೇಣಿ ಸಂಗಮ ಎಂದು ಹೆಸರಾಗಿರುವ ಹಳ್ಳಕ್ಕೆ ಕೃಷ್ಣ ಭಾಗ್ಯ ಜಲ ನಿಗಮದಿಂದ ದನಕರುಗಳಿಗೆ ಕುಡಿಯಲು ನೀರು, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ನೀರು ಹರಿಸುತ್ತಿದ್ದು, ಈ ಹಳ್ಳವನ್ನು ಸ್ವಚ್ಚಗೊಳಿಸಲು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

- Advertisement -

ಕನಕಗಿರಿಯ ಕೇಂದ್ರದಲ್ಲಿರುವ ದೊಡ್ಡ ಹಳ್ಳವನ್ನು ಸ್ವಚ್ಚಗೊಳಿಸಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹಳ್ಳಕ್ಕೆ ಪಟ್ಟಣದ ಚರಂಡಿಗಳಿಂದ ನೀರು ಹರಿಸುತ್ತಿರುವುದಲ್ಲದೇ, ಜನರು ತ್ಯಾಜ್ಯ ಹಾಕಿದ ಪರಿಣಾಮ ಹಳ್ಳವು ಕಸ ಹಾಗೂ ದುರ್ವಾಸನೆಯಿಂದ ಕೂಡಿರುತ್ತದೆ. ಅಲ್ಲದೆ ಐತಿಹಾಸಿಕ ಮತ್ತು ಪೌರಾಣಿಕವಾಗಿ ಹಿನ್ನಲೆ ಹೊಂದಿರುವ ಪಟ್ಟಣದ ಶ್ರೀ ಕನಕಾಚಲ ದೇವಸ್ಥಾನದಕ್ಕೆ ಹೊಂದಿಕೊಂಡಿರುವುದರಿಂದ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನಾನುಕೂಲವಾಗಿರುತ್ತದೆ.

ಹಳ್ಳದಲ್ಲಿನ ಚರಂಡಿ ನೀರು ಮತ್ತು ತ್ಯಾಜ್ಯ ತೆಗೆಸಿ ಹಳ್ಳವನ್ನು ಸ್ವಚ್ಚಗೊಳಿಸಿ, ಶ್ರೀ ಮಲ್ಲಯ್ಯ ತಾತಾ ದೇವಸ್ಥಾನದಿಂದ ಕೆಇಬಿ ಹಿಂದೆ ಇರುವ ಚೆಕ್ ಡ್ಯಾಂನವರೆಗೆ ಚರಂಡಿ ಕಾಲುವೆ ನಿರ್ಮಿಸಿ, ಪಟ್ಟಣದ ಚರಂಡಿ ನೀರನ್ನು ಹರಿಸಿದರೆ, ಹಳ್ಳಕ್ಕೆ ಹರಿವ ಕಲುಷಿತ ಚರಂಡಿ ನೀರನ್ನು ತಪ್ಪಿಸಿದಂತಾಗುತ್ತದೆ. ಅಲ್ಲದೇ ಹಳ್ಳದ & ಕೊಳವೆ ಬಾವಿಗಳ ಅಂತರ್ಜಲ ಮಟ್ಟವನ್ನು ಹೆಚ್ಚಿಸಿದಂತಾಗುತ್ತದೆ. ದನಕರುಗಳಿಗೂ ಇದರಿಂದ ಎಲ್ಲಾಕಾಲದಲ್ಲೂ ನೀರು ಸಿಗಲು ಅನುಕೂಲವಾಗುತ್ತದೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಸ್ನಾನ ಮಾಡಲು ಅನುಕೂಲವಾಗುತ್ತದೆ. ಕಾರಣ ಈ ಕೂಡಲೇ ಹಳ್ಳವನ್ನು ಸ್ವಚ್ಚಗೊಳಿಸಬೇಕು ಎಂದು‌ ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | 62 ದಿನಗಳ ಕಾಲ 1,550 ಕಿ.ಮೀ. ಏಕಾಂಗಿ ಪಾದಯಾತ್ರೆ ನಡೆಸಿದ ಹನುಮೇಶ

ಈ ವೇಳೆ ಪಾಮಣ್ಣ ಅರಳಿಗನೂರು, ಲಿಂಗಪ್ಪ ಪೂಜಾರ್, ನಾಗೇಶ್ ಬಡಿಗೇರ್, ಖಾದರ್ ಭಾಷಾ ಗುಡಿಯಹಿದಲು, ಹೊನ್ನೂರಸಾಬ್ ಬಿಡಿ, ವೆಂಕೋಬ ಬೋವಿ, ಬಸವರಾಜ್ ಕಂಪ್ಲಿ, ಚಿದಾನಂದ ಭಜಂತ್ರಿ, ಸಣ್ಣದುರುಗಪ್ಪ ಗೋರಳಕೇರಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...