ಕೊಪ್ಪಳ | ಭಗತ್ ಸಿಂಗ್‌ ಆಶಯದಂತೆ ಜನಸಾಮಾನ್ಯರೂ ಹೋರಾಟದ ರಾಜಕೀಯ ಮಾಡಬೇಕು: ರಾಮಾಂಜನಪ್ಪ ಆಲ್ದಳ್ಳಿ

Date:

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ ಜನತೆ ಜಾತಿ, ಧರ್ಮ ಮತ್ತು ಭಾಷೆಗಳ ಹೆಸರಿನಲ್ಲಿ ಕಚ್ಚಾಡುವುದನ್ನು ನೋಡುತ್ತಿದ್ದೇವೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಬಲ್ಯ ಹೊಂದಿದ್ದ ಪಂಥ ಇಂತಹ ಸಮಸ್ಯೆಗಳ ವಿರುದ್ಧ ರಾಜಿರಹಿತ ಹೋರಾಟವನ್ನು ಹರಿಬಿಡಲಿಲ್ಲ. ಹಾಗಾಗಿ ಭಗತ್ ಸಿಂಗ್‌ ಆಶಯದಂತೆ ಜನಸಾಮಾನ್ಯರೂ ಹೋರಾಟದ ರಾಜಕೀಯ ಮಾಡಬೇಕು ಎಂದು ಧಾರವಾಡ ಜನಜಾಗೃತಿ ಅಭಿಯಾನದ ಸಲಹೆಗಾರ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.

- Advertisement -

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್‌ ಜನ್ಮ‌ದಿನಾಚರಣೆ ಅಂಗವಾಗಿ ಕೊಪ್ಪಳ ಜಿಲ್ಲೆಯ ಉಳೇನೂರು ಗ್ರಾಮದಲ್ಲಿ ಎಐಡಿಎಸ್ಒ, ಎಐಡಿವೈಒ, ಎಐಎಂಎಸ್ಎಸ್ ಮತ್ತು ಎಐಕೆಕೆಎಂಎಸ್ ಸಂಘಟನೆಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್‌ ಜನ್ಮ‌ದಿನಾಚರಣೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಭಗತ್ ಸಿಂಗ್‌ ಅವರು ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ದೌರ್ಜನ್ಯಗಳು, ನಿರುದ್ಯೋಗ ಸಮಸ್ಯೆ, ಶಿಕ್ಷಣ, ಆರೋಗ್ಯದ ವ್ಯಾಪಾರೀಕರಣ, ರೈತರ ಆತ್ಮಹತ್ಯೆಗಳಂತಹ ಹಲವಾರು ಸಮಸ್ಯೆಗಳು ಜನತೆಯ ಜೀವನವನ್ನು ನರಕ ಸದೃಶಗೊಳಿಸುತ್ತಿವೆ” ಎಂದು ಹೇಳಿದರು.

ಭಗತ್‌ ಸಿಂಗ್‌ ಜನ್ಮದಿನಾಚರಣೆ 1

“ಸಾಂಸ್ಕೃತಿಕ ಅಂಧಃಪತನದಿಂದಾಗಿ ನೀತಿ-ನೈತಿಕತೆ ಮೌಲ್ಯಗಳು ಕುಸಿಯುತ್ತಿದ್ದು, ಸ್ವಾರ್ಥ ಸ್ವಕೇಂದ್ರೀಯತೆ ಹೆಚ್ಚಾಗುತ್ತಿದೆ. ವಿದ್ಯಾವಂತ ಯುವಜನತೆ ತಮ್ಮ ತಂದೆ ತಾಯಂದಿರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು, ಬೀದಿಗಳಲ್ಲಿ ಅನಾಥರಾಗಿ ಬಿಟ್ಟು ಹೋಗುವುದನ್ನು ನೋಡುತ್ತಿದ್ದೇವೆ. ಇದು ಅತ್ಯಂತ ನೋವಿನ ವಿಷಯ. ಜತೆಗೆ ಇಂದಿನ ಸಾಮಾಜಿಕ ಮಾಧ್ಯಮಗಳಲ್ಲಿ ಅವ್ಯಾಹತವಾಗಿ ಪ್ರಸಾರವಾಗುತ್ತಿರುವ ಅಶ್ಲೀಲ ಸಿನಿಮಾ, ಸಾಹಿತ್ಯ, ಜಾಹೀರಾತುಗಳು ಆನ್ಲೈನ್ ಗೇಮ್‌ಗಳಿಗೆ ಸಣ್ಣಮಕ್ಕಳಿಂದ ಹಿಡಿದು ದೊಡ್ಡವರೂ ದಾಸರಾಗುತ್ತಿದ್ದಾರೆ” ಎಂದರು.

“ವಿದ್ಯಾರ್ಥಿ-ಯುವಜನರನ್ನು ದಾಸ್ಯದಿಂದ ಹೊರತರಲು ಭಗತ್ ಸಿಂಗ್‌ರ ಆದರ್ಶಗಳು ಅತ್ಯವಶ್ಯಕವಾಗಿವೆ. ಇಲ್ಲಿ ಪ್ರಜ್ಞಾವಂತ ಜನತೆ, ಹಿರಿಯರು ಅತ್ಯಂತ ಜಾಗರೂಕತೆಯಿಂದ ಇಂದಿನ ಪೀಳಿಗೆಯನ್ನು ಉಳಿಸಿಕೊಳ್ಳಬೇಕಾಗಿದೆ. ಭಗತ್ ಸಿಂಗ್‌ ಅವರ ಆಶಯದಂತೆ ಜನತೆ ಹೋರಾಟದ ರಾಜಕೀಯವನ್ನು ಎತ್ತಿಹಿಡಿಯಬೇಕಾಗಿದೆ. ಅವರ ಕನಸಿನ ಸಮಾಜವಾದಿ ಸಮಾಜವನ್ನು ಕಟ್ಟುವುದರ ಮೂಲಕ ಎಲ್ಲ ಜನತೆ ಘನತೆ, ಗೌರವ, ನೆಮ್ಮದಿಯಿಂದ ಬದುಕುವಂತಾಗಬೇಕು. ಆಗ ಮಾತ್ರ ನಾವು ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಜನತೆ ಯೋಚಿಸಬೇಕು, ಕಾರ್ಯಗತಗೊಳ್ಳಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬಿಸಿ ಪಾನಕ ಬಿದ್ದು, ವಿದ್ಯಾರ್ಥಿಗೆ ಗಂಭೀರ ಗಾಯ: ಸ್ವಾಮಿ ನಾರಾಯಣ ಗುರುಕುಲ ವಿದ್ಯಾಪೀಠದ ಆಡಳಿ ನಿರ್ಲಕ್ಷ್ಯ

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಊರಿನ ಶಾಲಾ ಮಕ್ಕಳು ಭಗತ್ ಸಿಂಗ್‌ ಅವರ ಕುರಿತಾದ ನೃತ್ಯಗಳನ್ನು ಮತ್ತು ಕ್ರಾಂತಿಕಾರಿ ಗೀತೆಗಳನ್ನು ಹಾಡಿದರು.

ವಿವಿಧ ಸಂಘಟನೆಗಳ ರಾಜ್ಯ ಮುಖಂಡರುಗಳಾದ ಮಹಾಂತೇಶ್, ಗೋವಿಂದ್, ವಿಜಯಲಕ್ಷ್ಮಿ, ಶರಣು ಪಾಟೀಲ್, ಸೋಮಲಿಂಗಪ್ಪ, ಹೊನ್ನೂರಪ್ಪ, ಶಾರದಾ, ಸಿಂಧು, ಯರಿಸ್ವಾಮಿ, ಗಂಗರಾಜ ಅಳ್ಳಳ್ಳಿ, ದೊಡ್ಡಬಸವ, ಶಿವಪ್ಪ, ದೇವರಾಜ, ಅಂಜಿನಪ್ಪ, ಬಸವರಾಜಪ್ಪ ಸೇರಿದಂತೆ ಊರಿನ ಎಲ್ಲಾ ವಿದ್ಯಾರ್ಥಿ ಯುವಜನರುರು, ಮಹಿಳೆಯರು ಮತ್ತು ರೈತ ಕಾರ್ಮಿಕರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...