ಕೊಪ್ಪಳ | ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಹೆಚ್ಚಳ; ಕಂಡಕ್ಟರ್‌ ಮೇಲೆ ಹಲ್ಲೆ

Date:

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿನ ಪ್ರಯಾಣ ದರವನ್ನು ಏರಿಕೆ ಮಾಡಲಾಗಿರುವ ಹಿನ್ನೆಲೆ, ವ್ಯಕ್ತಿಯೊಬ್ಬ ‘ಯಾರನ್ನು ಕೇಳಿ ಟಿಕೆಟ್‌ ದರ ಹೆಚ್ಚಿಸಿದ್ದೀರಿ’ ಎಂದು ಕಂಡಕ್ಟರ್‌ (ನಿರ್ವಾಹಕ) ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜನವರಿ ಮೊದಲ ವಾರದಲ್ಲಿ, ಕೆಎಸ್‌ಆರ್‌ಟಿಸಿ 15% ಟಿಕೆಟ್ ದರ ಏರಿಸಿದೆ. ಆ ಸಂದರ್ಭದಲ್ಲಿ ದರ ಏರಿಕೆಯ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದಿದ್ದವು. ಆಕ್ರೋಶವೂ ವ್ಯಕ್ತವಾಗಿತ್ತು. ಆದಾಗ್ಯೂ, ಈಗ ಟಿಕೆಟ್‌ ದರ ಏರಿಕೆ ಕಾರಣಕ್ಕೆ ನಿರ್ವಾಹಕನ ಮೇಲೆ ಹಲ್ಲೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೊಪ್ಪಳ ಜಿಲ್ಲೆಯ ಹುಲಗಿ ಗ್ರಾಮದಿಂದ ಗಂಗಾವತಿಗೆ ತೆರಳುತ್ತಿದ್ದ ಬಸ್‌ನಲ್ಲಿ ನಿರ್ವಾಹಕ ಹನುಮಪ್ಪ ಮೇಲೆ ಹಲ್ಲೆ ನಡೆಸಲಾಗಿದೆ. ಹುಲಗಿಯಲ್ಲಿ ಬಸ್‌ ಹತ್ತಿದ ಪ್ರಯಾಣಿಕ ಶ್ರೀಧರ್, ‘ಈ ಹಿಂದೆ ಹುಲಗಿಯಿಂದ ಗಂಗಾವತಿಗೆ 26 ರೂ. ಇತ್ತು. ಈಗ, 30 ರೂ. ಆಗಿದೆ. ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಿಸಿದ್ದೀರಿ’ ಎಂದು ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ. ಆತ ಮದ್ಯ ಸೇವಿಸಿದ್ದ ಎಂದು ಹೇಳಲಾಗಿದೆ.

ನಿರ್ವಾಹಕ ವಿರುದ್ಧ ಆರೋಪಿ ಶ್ರೀಧರ್ ಅವಾಚ್ಯವಾಗಿ ನಿಂದಿಸಿದ್ದಾನೆ. ಆತನ ದುರ್ವರ್ತನೆಯ ಕಾರಣಕ್ಕೆ ಮಾರ್ಗ ಮಧ್ಯೆ ವಿರುಪಾಪುಯರ ಬಳಿ ಬಸ್‌ ನಿಲ್ಲಿಸಲಾಗಿದೆ. ಬಸ್‌ ನಿಲ್ಲುತ್ತಿದ್ದಂತೆ ನಿರ್ವಾಹಕನನ್ನು ಬಸ್‌ನಿಂದ ಕೆಳಗೆ ಎಳೆದೊಯ್ದ ಶ್ರೀಧರ್, ಕಲ್ಲು ತೆಗೆದುಕೊಂಡು ನಿರ್ವಾಹಕ ಹನುಮಪ್ಪ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ನಿರ್ವಾಹಕ ಹನುಮಪ್ಪ ಅವರ ಹಣೆ ಮತ್ತು ಕಣ್ಣಿಗೆ ಪೆಟ್ಟು ಬಿದ್ದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...