ಕೊಪ್ಪಳ | ನಿವೇಶನ ಹಕ್ಕು ಪತ್ರಕ್ಕಾಗಿ ದಲಿತ ಕುಟುಂಬಗಳ ಧರಣಿ

Date:

Advertisements

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಳುವಾಗೆರಾ ಗ್ರಾಮದಲ್ಲಿ ಗ್ರಾಮೀಣ ಆಶ್ರಯ ಯೋಜನೆ ಅಡಿಯಲ್ಲಿ ಬರುವ ಜಮೀನು ಖರೀದಿಸಲಾಗಿದ್ದು, ಅದನ್ನು ಅಭಿವೃದ್ಧಿಪಡಿಸಿ ದಲಿತ ಕುಟುಂಬಗಳ ಫಲಾನುಭವಿಗಳಿಗೆ ನಿವೇಶನಗಳ ಹಕ್ಕು ಪತ್ರಗಳನ್ನು ನೀಡಬೇಕು ಎಂದು ನಗರದ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.

“ಕುಷ್ಟಗಿ ತಾಲೂಕಿನ ಹನುಮಸಾಗರ ಹೋಬಳಿ ವ್ಯಾಪ್ತಿಯಲ್ಲಿ ಬರುವ ತಾಳುವಗೇರಾ ಗ್ರಾಮದ ಸರ್ವೆ ನಂ.218/2, ಸರ್ವೆ ನಂ. 1 ಎಕರೆ 19 ಗುಂಟೆ ಜಮೀನು ಮ್ಯುಟೇಶನ್ ಆಗಿರುತ್ತದೆ. ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು ಸೇರಿ ಸಂಬಂಧಪಟ್ಟ ಫಲಾನುಭವಿಗಳಿಗೆ ವಿತರಣೆ ಮಾಡಲು ವಿಳಂಬ ಮಾಡುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

“ನಿವೇಶನ ಜಮೀನ್ ನಂಬರ್ ಎಂಆರ್‌ಎಚ್ 25/18-19 ಸದರಿ ಜಮೀನನ್ನು ತಳುವಾಗೇರಾ ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳ 37 ಫಲಾನುಭವಿಗಳಿಗೆ ನಿವೇಶನಗಳನ್ನು ಅಭಿವೃದ್ಧಿಪಡಿಸಿ ವಿತರಿಸಲು ಮಂಜೂರಿ ಹಿಂದೆಯೇ ನೀಡಲಾಗಿರುತ್ತದೆ. ಆದರೆ ಈವರೆಗೂ ಹಕ್ಕುಪತ್ರ ಸಿಕ್ಕಿಲ್ಲ” ಎಂದು ಆಕ್ರೋಶ ಹೊರಹಾಕಿದರು .

Advertisements

“ಮೇಲಧಿಕಾರಿಗಳು ತನಿಖೆ ಮಾಡಿ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಮೇಲಿನ ಪರಿಶಿಷ್ಟ ಜಾತಿಯ 37 ಫಲಾನುಭವಿಗಳಿಗೆ ನಿವೇಶನಗಳ ಹಕ್ಕು ಪತ್ರಗಳನ್ನು ಶೀಘ್ರದಲ್ಲೇ ವಿತರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಮರಗಳ ಬೆಳವಣಿಗೆಗೆ ಅಡ್ಡಿಯಾಗಿರುವ ರಕ್ಷಾ ಕವಚ ತೆರವಿಗೆ ಆಗ್ರಹ

ಕರ್ನಾಟಕ ದಲಿತ ಸಂಘದ ಸದಸ್ಯ ಬಸವರಾಜ್ ಸಾಲಮರಿ, ಕಲಬುರಗಿ ವಿಭಾಗೀಯ ಅಧ್ಯಕ್ಷ ಶಂಕರ್ ಕಲ್ಲಬಾವಿ, ಕಲಬುರಗಿ ವಿಭಾಗಿಯ ಪ್ರಧಾನ ಕಾರ್ಯದರ್ಶಿ ಮರಿಸ್ವಾಮಿ ಮದಲಗಟ್ಟಿ, ಜಿಲ್ಲಾಧ್ಯಕ್ಷ ಬಸವರಾಜ್ ಬೇವಿನಕಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತ ದೋಟಿಹಾಳ, ಜಿಲ್ಲಾ ಕಾರ್ಯದರ್ಶಿ ಯಮನೂರ ಮೇಲಿನಮನಿ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X