ಕೊಪ್ಪಳ ತಾಲೂಕಿನ ಬಾದರಬಂಡಿ ಹೊಸಹಳ್ಳಿ ಗ್ರಾಮದಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಕೆಲ ದಿನಗಳು ಕಳೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿ ಕೆಂಚಪ್ಪ ಯಂಕಪ್ಪ ಕುಕ್ಕೆಪ್ಪನವರ(27) ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮಲಗಿದ್ದವಳನ್ನು ಎಬ್ಬಿಸಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆಂದು ಆರೋಪಿಸಲಾಗಿದೆ. ಕೊಪ್ಪಳ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಆರೋಪಿ ಹಾಗೂ ಆತನ ಸಹೋದರನ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂತ್ರಸ್ಥ ಬಾಲಕಿ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
