ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ 13 ಜನರ ಮೇಲೆ ಪ್ರಕರಣ ದಾಖಲಾಗಿದ್ದು 7 ಮಂದಿಯನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್ ಅರಸಿದ್ದಿ ತಿಳಿಸಿದ್ದಾರೆ.
ಈ ಪ್ರಕರಣ ಸಂಬಂಧ ಮಾಧ್ಯಮಗೋಷ್ಠಿ ನಡೆಸಿದ ಅವರು, ಪ್ರಕರಣದ ಸಂಬಂಧ ಯುವತಿಯ ಪತಿ ಹನುಮಯ್ಯ ಹಾಗೂ ತಂದೆ ಕಾಳಿಂಗಪ್ಪ ಮತ್ತು ತಾಯಿ ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಅಂರ್ತಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ: ಆರೋಪ
“ಕನಕಗಿರಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಜಾತಿ ಕಾರಣಕ್ಕೆ ಮಾದಿಗ ಸಮುದಾಯದ ಯುವತಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಇನ್ನಷ್ಟು ಮಾಹಿತಿ ಹೊರಬರಬೇಕಿದೆ” ಎಂದು ತಿಳಿಸಿದರು.