ಕೊಪ್ಪಳ | ಮೊಹರಂ ವೇಳೆ ದಲಿತರ ಮೇಲೆ ಹಲ್ಲೆ; ದೂರು ಪ್ರತಿದೂರು ದಾಖಲು

Date:

ಕೊಪ್ಪಳ‌ ಜಿಲ್ಲೆಯ ಅಳವಂಡಿ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆ ದಲಿತರ ಮೇಲೆ ಹಲ್ಲೆ ನಡೆದಿದ್ದು, ಮನೆಗಳಿಗೆ ನುಗ್ಗಿ ಹಲ್ಲೆ ಮಾಡಲಾಗಿದೆ ಎಂದು ದೂರು ಪ್ರತಿದೂರು ದಾಖಲಾಗಿದೆ.

- Advertisement -

ಭಾನುವಾರ ಬೋಚನಹಳ್ಳಿ ಗ್ರಾಮದ ಮಂಜುಳಾ ಮೈಲಪ್ಪ ಹಿರೇಮನಿ ಎಂಬುವರು ‘ನಮ್ಮವರ ಮೇಲೆ ಹಲ್ಲೆಯಾಗಿದೆ’ ಎಂದು 39 ಜನರ ವಿರುದ್ಧ ದೂರು ದಾಖಲಿಸಿದ್ದು, ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ವಾಲ್ಮೀಕಿ ಸಮುದಾಯಕ್ಕೆ ಸೇರಿದ ಪರಸಪ್ಪ ಹುಲಕೋಟಿ ಎನ್ನುವರು ದೂರು ನೀಡಿದ್ದು, “ಜೂ. 26ರಂದು ಸಂಜೆ 6 ಗಂಟೆ ಸುಮಾರಿಗೆ ಮೊಹರಂ ಮೆರವಣಿಗೆ ನಡೆಯುತ್ತಿದ್ದಾಗ ಪ್ರಕರಣದ ಮೊದಲ ಆರೋಪಿ ಮುದಿಯಪ್ಪ ಪೂಜಾರ ಹಾಗೂ ಇತರರು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆ. ದೂರು ಕೊಡಲು ಬರುವ ವೇಳೆಯೂ 39 ಜನರ ಗುಂಪು ತಮ್ಮ ಮೇಲೆ ಹಲ್ಲೆ ಮಾಡಿದರು” ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಕುರಿತು ಅಳವಂಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಗ್ರಾಮದಲ್ಲಿ ಎರಡೂ ಗುಂಪುಗಳ ಜನರನ್ನು ಕರೆಸಿ ಚರ್ಚಿಸಿ ಸೌಹಾರ್ದತೆ ಮೂಡಿಸಲು ಪ್ರಯತ್ನ ನಡೆದಿದೆ. ಆದರೆ ಪರಿಶಿಷ್ಟ ಜಾತಿ ಸಮುದಾಯದವರು ಶಾಂತಿ ಸಭೆಗೆ ಬರದ ಕಾರಣ ಅಧಿಕಾರಿಗಳು ಪ್ರತ್ಯೇಕ ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...

ಈ ದಿನ ಸಂಪಾದಕೀಯ | ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗಲಿದೆಯೇ, ನಾಯಕರ ಮಾತು ಎಚ್ಚರಿಕೆಯ ಗಂಟೆಯೇ?

ವಿದೇಶಾಂಗ ನೀತಿ ಗೊತ್ತಿಲ್ಲದ ಜೈಶಂಕರ್‌, ಬಡವರು ಹೇಗೆ ಬದುಕುತ್ತಿದ್ದಾರೆ ಎಂದು ಅರಿಯದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ನೋಂದಣಿಯೇ ಆಗದ RSSನಿಂದ ಪೌರತ್ವ ನೋಂದಣಿ ಜಾರಿಗೆ ಆಗ್ರಹ: ಜನಗಣತಿ, SIR ನಡುವೆ ಹೊಸ ವಿವಾದ

ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...