ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕನೂರು ತಾಲೂಕಿನ ಅರಿಕೇರಿ ಗ್ರಾಮದಲ್ಲಿ ನಡೆದಿದೆ.
ದೇವಪ್ಪ ದುರ್ಗಪ್ಪ ನೀರಳ್ಳಿ (48) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ದುರ್ಗಪ್ಫನಿಗೆ ರಾವಣಕಿ ಸೀಮಾದಲ್ಲಿ 7 ಎಕರೆ 32 ಗುಂಟೆ ಜಮೀನು ಇದ್ದು, ಕಳೆದ ವರ್ಷ ಶಿರೂರು ಗ್ರಾಮದ ಕೆನರಾ ಬ್ಯಾಂಕ್‌ನಲ್ಲಿ 2.50 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು.

ತಮ್ಮ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ ಕೈಕೊಟ್ಟ ಹಿನ್ನೆಲೆಯಲ್ಲಿ ಬ್ಯಾಂಕ್ ಸಾಲ ಸೇರಿದಂತೆ ವಿವಿಧ ಫೈನಾನ್ಸ್ ಸಾಲ ಮರುಪಾವತಿ ಮಾಡಲು ಸಾಧ್ಯವಾಗದೆ ನೊಂದು, ತಮ್ಮ ಹೊಲದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಈ ಕುರಿತು ಕುಕುನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
