ಕೊಪ್ಪಳ | ದಶಕದ ಹಿಂದಿನ ಯಲ್ಲಾಲಿಂಗನ ಕೊಲೆ ಪ್ರಕರಣ: 9 ಆರೋಪಿಗಳ ಖುಲಾಸೆ

Date:

Advertisements

ರಾಜ್ಯ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ತೀರ್ಪು ಇಂದು ನ್ಯಾಯಾಲಯದಿಂದ ಹೊರಬಂದಿದ್ದು, ಎಲ್ಲ 9 ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತರನ್ನಾಗಿ ಖುಲಾಸೆಗೊಳಿಸಿದೆ.

ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಕೋಲಾಹಲ ಉಂಟಾಗಿ ಅಂದೂ ಕೂಡ ಸಚಿವರಾಗಿದ್ದ ಶಿವರಾಜ್ ತಂಗಡಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾಗಿದ್ದ ಯಲ್ಲಾಲಿಂಗನ ಕೊಲೆ ಪ್ರಕರಣದ ಆದೇಶವನ್ನು ಕೊಪ್ಪಳ ಜಿಲ್ಲಾ ನ್ಯಾಯಾಲಯ ಶುಕ್ರವಾರ ಪ್ರಕಟಿಸಿದೆ.

ಜಿಲ್ಲಾ ನ್ಯಾಯಾಲಯ ಪ್ರಕರಣದ ಕುರಿತು ಸೆಪ್ಟೆಂಬರ್‌ 24ರಂದು ಅಂತಿಮ ವಿಚಾರಣೆ ನಡೆಸಿತ್ತು. ರಾಜಕೀಯ ಷಡ್ಯಂತ್ರದ ಕಾರಣಕ್ಕೆ 9 ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರವೆಂದು ನ್ಯಾಯಾಲಯ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ವಿವಿಯಿಂದ ಎರಡು ಮಹಾ ಪ್ರಬಂಧಗಳಿಗೆ ಡಾಕ್ಟರೇಟ್: ಕನ್ನಡ ಉಪನ್ಯಾಸಕರಿಗೆ ಗೌರವ

ʼಯಲ್ಲಾಲಿಂಗನದ್ದು ಕೊಲೆಯಲ್ಲ; ಆತ್ಮಹತ್ಯೆʼ ಎಂದು ಅವರ ಸ್ವಂತ ಸಹೋದರನೇ ಹೇಳಿದ್ದ ಎಲ್ಲ ಅಂಶಗಳನ್ನು ಗಮನಿಸಿ ನ್ಯಾಯಾಲಯ ಅವರನ್ನು ನಿರ್ದೋಷಿ ಎಂದು ಹೇಳಿರುವುದಾಗಿ ಆರೋಪಿಗಳ ಪರ ವಾದಿಸಿದ್ದ ವಕೀಲ ಗಂಗಾಧರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಮುಖಂಡ ಹನುಮೇಶ ನಾಯಕ, ಬಾಳನಗೌಡ, ಕಾಡಮಂಜ, ಮಹಾಂತೇಶ ನಾಯಕ, ಮನೋಜ ಪಾಟೀಲ್‌, ನಂದೀಶ, ಪರಶುರಾಮ, ಯಮನೂರಪ್ಪ ಹಾಗೂ ದುರ್ಗಪ್ಪ ಇವರ ಮೇಲೆ ಕೊಲೆ ಆರೋಪ ಬಂದಿತ್ತು.

ಕನಕಗಿರಿ ತಾಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಎಂಬುವವರು ತಮ್ಮ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು. ಇದಾದ ನಂತರ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಮೃತದೇಹ ಪತ್ತೆಯಾಗಿತ್ತು.

ಇದನ್ನು ಪ್ರಾರಂಭದಲ್ಲಿ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ ನಂತರ ಕೊಲೆ ಎಂದು ಕೊಪ್ಪಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಚಿವ ಶಿವರಾಜ ತಂಗಡಗಿ ಆಪ್ತ ಹನಮೇಶ ನಾಯಕ ಸೇರಿ ಒಂಬತ್ತು ಜನರ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿತ್ತು.‌

ಯಲ್ಲಾಲಿಂಗನ ಸಾವಿಗೆ ನ್ಯಾಯ ಒದಗಿಸುವಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ಕೂಡ ನಡೆದಿದ್ದರಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿ ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಹೊರಬೀಳುವಂತಾಗಿತ್ತು. ಸುದೀರ್ಘ ಹತ್ತು ವರ್ಷಗಳ ವಿಚಾರಣೆ ನಡೆದಿದ್ದು, ಇಂದು ನ್ಯಾಯಾಲಯ ಈ ಆದೇಶ ನೀಡಿದೆ.

ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ನಂತರ ಆರೋಪಿಗಳಿಗೆ ಜಾಮೀನು ಸಹ ದೊರೆತಿತ್ತು. 2021ರಲ್ಲಿ ಆರೋಪಿ ಮಹಾಂತೇಶ್ ನಾಯಕನ ಮದುವೆಯಲ್ಲಿ ಪೊಲೀಸರು ಭಾಗವಹಿಸಿದ್ದರಿಂದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಶ್ರೀ ಮೈಲಾರೇಶ್ವರ ದಸರಾ ಹಾಗೂ ರಾಜಬೀದಿ ಉತ್ಸವ

ಶಿವಮೊಗ್ಗ ನಗರದ ಬಿ, ಹೆಚ್, ರಸ್ತೆಯಲ್ಲಿ ಇರುವ ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ...

ಶಿವಮೊಗ್ಗ | ಅ. 6ರಿಂದ ಅರಸಾಳು, ಕುಂಸಿಯಲ್ಲಿ ಇಂಟರ್ಸಿಟಿ ರೈಲು‌ ನಿಲುಗಡೆ

ಶಿವಮೊಗ್ಗ, ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣಗಳಲ್ಲಿ ಬೆಂಗಳೂರು –...

ವಾಲ್ಮೀಕಿ ಸಮುದಾಯದವರು ಒಟ್ಟಾಗಿ ಸೇರಿ ವಾಲ್ಮೀಕಿ ಜಯಂತಿ ಆಚರಿಸೋಣ

ಚಿಂತಾಮಣಿ : ಎಲ್ಲಾ ವಾಲ್ಮೀಕಿ ಸಮುದಾಯದವರು ರಾಜಕೀಯವನ್ನು ಮೆರೆತು ಒಟ್ಟುಗೂಡಿ ಎಲ್ಲರೂ...

ಎಳೆತನದಲ್ಲೇ ಬುದ್ಧಿ ಸ್ಥಗಿತಗೊಂಡ ಸ್ಥಿತಿಯಲ್ಲಿ RSS; ದೇವನೂರರ ಮನೋಜ್ಞ ವಿಶ್ಲೇಷಣೆ

“ನೂರು ವರ್ಷಗಳಾದರೂ ಆರ್‌ಎಸ್‌ಎಸ್ ಸಂಘಟನೆಯನ್ನು ರಿಜಿಸ್ಟ್ರೆಷನ್ ಮಾಡಿಸದೇ ಇರುವುದು ಹಾಗೂ ಸಾರ್ವಜನಿಕರಿಂದ...

Download Eedina App Android / iOS

X