ಕೊಪ್ಪಳ | ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ; AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Date:

Advertisements

ರಾಜ್ಯಾದ್ಯಂತ ಪದವಿ ತರಗತಿಗಳು ಆರಂಭವಾಗಿ ಒಂದೂವರೆ ತಿಂಗಳು ಗತಿಸಿದರೂ ಅತಿಥಿ ಉಪನ್ಯಾಸಕರನ್ನ ನೇಮಕ ಮಾಡಿಕೊಂಡಿಲ್ಲ. ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಗಣನೀಯವಾಗಿ ಹೆಚ್ಚಿದ್ದು, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಿದೆ. ಆದ್ದರಿಂದ, ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು AIDSO ನೇತೃತ್ವದಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟಿಸಿದರು.

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ ಕೊಪ್ಪಳ ನಗರದ ಅಶೋಕ ವೃತ್ತದ ಬಳಿ ಎಐಡಿಎಸ್ಓ ನೇತೃತ್ವದಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಯವರ ಮೂಲಕ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

ಎಐಡಿಎಸ್ಒ ನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಹಯ್ಯಾಳಪ್ಪ ಮಾತನಾಡಿ, “ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕ” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ಧರ್ಮ ಮೀರಿ ಭಾವೈಕ್ಯತೆ ಸಾರಿದ ಇರಕಲ್ಲಗಡ ಗಣೆಶೋತ್ಸವ

ಎಐಡಿಎಸ್ಒ ರಾಜ್ಯ ಸಮಿತಿ ಸದಸ್ಯೆ ಸಿಂಧು.ಕೆ ಮಾತನಾಡಿ, “ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಸಮಸ್ಯೆಯನ್ನು ಹಾಗೂ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವು ಈ ಕೂಡಲೇ ಬಗೆಹರಿಸಬೇಕು” ಎಂದು ವಿದ್ಯಾರ್ಥಿಗಳ ಪರವಾಗಿ ಆಗ್ರಹಿಸಿದರು.

ಪ್ರತಿಭಟನೆಯ ನಂತರ ಜಿಲ್ಲಾ ಕಾರ್ಯಕರ್ತ ಪ್ರದೀಪ್, ಶರಣಪ್ಪ, ಅಪ್ಪಾಜಿ, ತಿರುಪತಿ, ವಿದ್ಯಾರ್ಥಿಗಳಾದ ರುಕ್ಸನಾ ಬೇಗಂ, ಸಾವಿತ್ರಿ, ತುಳಸಿ, ಆಕಾಶ್, ಹುಲಿಗಮ್ಮ, ಲಕ್ಷ್ಮಿ, ನೇತ್ರಾ, ದರ್ಶನ್, ಮಲ್ಲಪ್ಪ, ಸಂತೋಷ್ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X