ಕೊಪ್ಪಳ | ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಬೇಡಿಕೆ ಈಡೇರಿಕೆಗೆ ಒತ್ತಾಯ

Date:

ಕೊಪ್ಪಳದ ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟ ಒತ್ತಾಯಿಸಿದೆ. ಓಜಿನಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಅನುಪಸ್ಥಿತಿಯಲ್ಲಿ ಆದಯ್ಯ ಸ್ವಾಮಿ ಹಾಗೂ ಗ್ರಾಂಪಂ ಅಧ್ಯಕ್ಷ ಹುಚ್ಚಪ್ಪ ಯಮನಪ್ಪ ಭೋವಿ ಅವರಿಗೆ ಈ ಕುರಿತು ಮನವಿ ಸಲ್ಲಿಸಲಾಗಿದೆ.

- Advertisement -

“ಕೊಪ್ಪಳ ತಾಲೂಕಿನ ಓಜಿನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಟಣಕನಕಲ್ಲ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಮಹಿಳೆಯರಿಗೆ ಯಾವುದೇ ಸಾರ್ವಜನಿಕ ಶೌಚಾಲಯ ಇರುವುದಿಲ್ಲ. ಇದರಿಂದ ಅನಿವಾರ್ಯವಾಗಿ ಮಹಿಳೆಯರು ಬಹಿರ್ದೆಸೆಗೆ ಹೋಗಬೇಕಾಗಿದೆ. ಇದರಿಂದ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಸಾರ್ವಜನಿಕ ಶೌಚಾಲಯ ನಿರ್ಮಿಸಿಕೊಡಬೇಕು. ಕುಡಿಯುವ ನೀರಿಗಾಗಿ ಸಾರ್ವಜನಿಕ ಸ್ಥಳದಲ್ಲಿ ನಳದ ವ್ಯವಸ್ಥೆಯನ್ನೂ ಮಾಡಿಕೊಡಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಯಲ್ಲಿ ಯಾವುದೇ ದಲಿತ ಮಹಿಳೆಯರು ಇರುವುದಿಲ್ಲ. ಕೂಡಲೇ ಅಡಿಗೆ ಮಾಡುವ ಸಿಬ್ಬಂದಿಯಲ್ಲಿ ದಲಿತ ಮಹಿಳೆಯರನ್ನು ಆಯ್ಕೆ ಮಾಡಿಕೊಂಡು ಸಾಮಾಜಿಕ ಸಮಾನತೆ ಸಾಧಿಸಬೇಕು. ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು” ಎಂದು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷರಿಗೆ ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | ನಗರಸಭೆ ಅಧ್ಯಕ್ಷರ ಸಹೋದರ & ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಈ ವೇಳೆ ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟದ ತಾಲೂಕು ಸಂಯೋಜಕ ಸುಂಕಪ್ಪ ಮೀಸಿ, ಟಣಕನಕಲ್ಲ ಗ್ರಾಮಸ್ಥರಾದ ಯಮನೂರಪ್ಪ ಕುಂಜಾಲಿ, ಮಾರುತಿ ಕುಂಜಾಲಿ, ಹನುಮವ್ವ ಕುಂಜಾಲಿ, ಯಮನವ್ವ ಕುಂಜಾಲಿ, ಹನುಮಪ್ಪ ಕುಂಜಾಲಿ, ಪರಶುರಾಮ್ ಕುಂಜಾಲಿ, ದುರಗವ್ವ ಕುಂಜಾಲಿ, ಈರವ್ವ ಕುಂಜಾಲಿ, ಸುರೇಶ ಕುಂಜಾಲಿ, ಗಾಳೆವ್ವ ಕುಂಜಾಲಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...