ಕೊಪ್ಪಳ | ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡಲು ಒತ್ತಾಯ

Date:

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಂತೆ ಶೇ. 1ರಷ್ಟು ಒಳಮೀಸಲಾತಿಯನ್ನು ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಬುಡಕಟ್ಟು ಆದಿವಾಸಿ ಸಮುದಾಯಗಳಿಗೆ ಒದಗಿಸಬೆಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಜನಾಂಗಗಳು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದವು.

- Advertisement -

ಕೊಪ್ಪಳ ನಗರ ಅಶೋಕ ವೃತ್ತದಿಂದ ಜಿಲ್ಲಾಡಳಿತದವರೆಗೂ 30ಕ್ಕೂ ಹೆಚ್ಚು ಅಲೆಮಾರಿ, ಅರೆಅಲೆಮಾರಿ ಹಾಗೂ ಬುಡಕಟ್ಟು ಸಮುದಾಯಗಳ ಜನರು ತಮ್ಮ ವಿವಿಧ ಸಾಂಸ್ಕೃತಿಕ ವೇಷ-ಭೂಷಣ ಧರಿಸಿ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ವರದಿಯನ್ನು ಜಾರಿ ಮಾಡಬೇಕೆಂದು ಒತ್ತಾಯಿಸಿ ಸರಕಾರಕ್ಕೆ ಜಿಲ್ಲಾಧಿಕಾರಿ ಸುರೇಶ ಹಿಟ್ನಾಳ ಅವರ ಮೂಲಕ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅಲೆಮಾರಿಗಳ ಜೀವನ ಪದ್ಧತಿ, ಅವರ ಕಲೆ, ನಡೆಸುವ ಅತಂತ್ರ ಬದುಕಿನ ಚಿತ್ರಣವನ್ನು ಬೀದಿಗಳಲ್ಲಿ ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವ ಪ್ರಯತ್ನ ನಡೆಯಿತು. ಸುಡುಗಾಡು ಸಿದ್ಧರ ಕಲೆ, ಹಗಲು ವೇಷಗಾರರ ಕಲೆ, ಸಿಂಧೋಳ್ಳ ಸಮಾಜದವರ ಕಲೆ, ಹಕ್ಕಿಪಿಕ್ಕಿಗಳು, ಬುಡುಬುಡಿಕೆಯವರ ಜೀವನ ಸಹಿತ ಹಲವಾರು ಅಲೆಮಾರಿ ಸಮುದಾಯಗಳ ಜೀವನ ವೃತ್ತಾಂತ ಪ್ರತಿಭಟನೆಯ ಮೂಲಕವೇ ಪರಿಚಯವಾಯಿತು.

WhatsApp Image 2025 08 29 at 8.53.57 PM 2

ಬುಡ್ಗ ಜಂಗಮ ಸಮುದಾಯದ ರಾಜ್ಯಾಧ್ಯಕ್ಷ ಸಣ್ಣ ಮಾರಪ್ಪ ಮಾತನಾಡಿ, “ರಾಜ್ಯ ಸರಕಾರ ಎಡಗೈ ಹಾಗೂ ಬಲಗೈ ಸಮುದಾಯಗಳಿಗೆ ಶೇ 6-6ರಂತೆ ಒಳಮೀಸಲಾತಿ ಜಾರಿ ಮಾಡಿತು. ಆದರೆ, ನ್ಯಾಯಮೂರ್ತಿ ನಾಗಮೋಹನ ದಾಸ್ ವರದಿಯ ಪ್ರಕಾರ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲಾತಿ ಕೊಡದೇ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿದೆ. ನಮ್ಮ ಸಮುದಾಯಗಳಿಗೆ ಮರಣ ಶಾಸನ ಬರೆಯಿತು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಕಟ್ಟಕಡೆಯ ಸಮುದಾಯಗಳು ಇವೆಯೋ, ಅಂತ ಸಮುದಾಯಗಳಿಗೆ ನ್ಯಾಯ ಕೊಡುವ ಬದಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಲೆಮಾರಿ ಸಮುದಾಯಗಳಿಗೆ ಮೋಸ ಮಾಡಿದರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾದಿಗ ಸಮುದಾಯದ ಯುವ ಮುಖಂಡ ಮಲ್ಲಿಕಾರ್ಜುನ ಪೂಜಾರ ಮಾತನಾಡಿ, “ಧ್ವನಿ ಇಲ್ಲದ ಅಲೆಮಾರಿ ಸಮುದಾಯಗಳಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಹಳ ದೊಡ್ಡ ಅನ್ಯಾವೆಸಗಿದೆ. ಎಲ್ಲಾ ಅಲೆಮಾರಿ ಸಮುದಾಯಗಳ ಜೊತೆ ಮಾದಿಗ ಸಮುದಾಯ ಜೊತೆಗಿರುತ್ತದೆ. ಶೇ.1‌ ಒಳಮೀಸಲಾತಿ ಅಲೆಮಾರಿಗಳಿಗೆ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ” ಎಂದು ಭರವಸೆ ನೀಡಿದರು.

ಛಲವಾದಿ ಸಮುದಾಯದ ಯುವ ನಾಯಕ ಕಾಶ್ಯಪ್ಪ ಛಲವಾದಿ ಮಾತನಾಡಿ, “ಬಡವರ ಅನ್ನ ಕಿತ್ತು ರಾಕ್ಷಸರ ಬಾಯಲ್ಲಿ ಇಟ್ಟಂತಾಗಿದೆ ಈ ರಾಜ್ಯ ಸರಕಾರದ ನೀತಿ. ಧ್ವನಿಯೇ ಇಲ್ಲದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸದೇ ಘೋರ ಅನ್ಯಾಯ ಮಾಡಿದೆ. ಡಿ.ದೇವರಾಜ ಅರಸು ಅವರ ಸಾಮಾಜಿಕ ನ್ಯಾಯವನ್ನು ಕಡೆಗಣೆಸಿದೆ ಹಾಗೂ ನ್ಯಾ.ನಾಗಮೋಹನ ದಾಸ್ ಅವರ ಸಾಮಾಜಿಕ ನ್ಯಾಯಯುತ ವರದಿಯನ್ನು ಗಾಳಿಗೆ ತೂರಿದೆ. 49 ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗುವವರೆಗೂ ಛಲವಾದಿ ಸಮುದಾಯ ನಿಮ್ಮ ಜೊತೆ ಇರುತ್ತದೆ” ಎಂದು ವಿಸ್ವಾಸ ತುಂಬಿದರು.

ಹಿರಿಯ ಪತ್ರಕರ್ತ ಬಸವಾರಾಜ ಶೀಲವಂತರ ಹಾಗೂ ಅಲ್ಲಮ‌ಪ್ರಭು ಬೆಟ್ಟದೂರ ಮಾತನಾಡಿ, “ಒಳಮೀಸಲಾತಿಯನ್ನು ಜಾರಿ ಮಾಡುವ ಒತ್ತಡದಲ್ಲಿ ಸರ್ಕಾರ ಅಲೆಮಾರಿಗಳಂತಹ ಧ್ವನಿ ಇಲ್ಲದವರ ಧ್ವನಿ ಅಡಗಿಸಿದ್ದು ಅಕ್ಷಮ್ಯ. ಅಲೆಮಾರಿ ಸಮುದಾಯಗಳಿಗೆ ಮರಣ ಶಾಸನವನ್ನು ಸರ್ಕಾರ ಬರೆದುಬಿಟ್ಟಿದೆ, ಪ್ರತ್ಯೇಕ ಶೇ 1ರಷ್ಟು ಮೀಸಲಾತಿ ನೀಡುವ ಮೂಲಕ ನ್ಯಾಯ ನೀಡಲೇಬೇಕು” ಎಂದು ಒಕ್ಕೊರಲ ಒತ್ತಾಯ ಮಾಡಿದರು.

ಇದನ್ನೂ ಓದಿ: ಕೊಪ್ಪಳ | ಯುಕೆಇಎಂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎನ್‌ಒಸಿ ಕೊಡಲು ತಕರಾರು: ಗ್ರಾ.ಪಂ ಎದುರು ಗ್ರಾಮಸ್ಥರ ಪ್ರತಿಭಟನೆ

“ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗದ ವರದಿಯಲ್ಲಿ ಸರ್ಕಾರದ ಸಮೀಕ್ಷೆಯ ದತ್ತಾಂಶಗಳ ಹಿನ್ನೆಲೆಯಲ್ಲಿ 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳ ಸಮೂಹಕ್ಕೆ ಪ್ರವರ್ಗ-ಎ ರಲ್ಲಿ ವರ್ಗೀಕರಿಸಿರುವುದು ನ್ಯಾಯಸಮ್ಮತವಾಗಿತ್ತು. ಹೀಗಾಗಿ 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ ರಲ್ಲಿಯೇ ಇರಿಸಿ ಶೇ 1ರಷ್ಟು ಒಳ ಮೀಸಲಾತಿ ನಿಗದಿಗೊಳಿಸಬೇಕು” ಎಂದು ಆಗ್ರಹಿಸಿದರು.

ವಿವಿಧ ಅಲೆಮಾರಿ ಸಮುದಾಯಗಳು ಸಾವಿರಾರು ಸಂಖ್ಯೆಯಲ್ಲಿ ಜಿಲ್ಲಾಡಳಿತ ಭವನದ ಮುಂದೆ ಜಮಾವಣೆಯಾಗಿದ್ದರು. ಜಿಲ್ಲಾಧಿಕಾರಿಗಳ ಬದಲಾಗಿ ಅಲೆಮಾರಿಗಳ ಮನವಿ ಪತ್ರ ಸ್ವೀಕರಿಸಲು ಎಡಿಸಿ ಅವರನ್ನು ಕಳಿಸಲಾಗಿತ್ತು; ಆದರೆ, ಪ್ರತಿಭಟನೆ ನಿರತ ಜನ ಜಿಲ್ಲಾಧಿಕಾರಿಗಳೇ ಬರಬೇಕೆಂದು ಪಟ್ಟು ಹಿಡಿದರು. ಪೊಲೀಸ್‌ರು ಮನವೊಲಿಸಲು ಯತ್ನಿಸಿದರೂ ಮಣಿಯದೇ ಪಟ್ಟು ಸಡಿಲಿಸಲಿಲ್ಲ. ಕೊನೆಗೂ ಜಿಲ್ಲಾಧಿಕಾರಿಗಳೇ ಬಂದು ಮನವಿ ಸ್ವೀಕರಿಸಿದ ನಂತರ ಪ್ರತಿಭಟನಾಕಾರರು ಸುಮ್ಮನಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...