ಕೊಪ್ಪಳ | ದಲಿತ ಮಹಿಳೆಯರ ನಿಂದನೆ: ಉಚ್ಛಾಟಿತ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್

Date:

ಖಾಸಗಿ(ಸುವರ್ಣ) ಟಿವಿ ಮಾದ್ಯಮದ ಮುಂದೆ ಬಹಿರಂಗವಾಗಿ ದಲಿತ ಮಹಿಳೆಯರನ್ನು ನಿಂದಿಸಿ ಅವಮಾನ ಮಾಡಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ‌‌ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -

ದಲಿತ ವಿಮೋಚನೆಯ ಮಾನವ ಹಕ್ಕು ಹೋರಾಟ ವೇದಿಕೆಯ ಕೊಪ್ಪಳ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ್ ಪೂಜಾರ ಎಸ್‌ಸಿ.ಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮೈಸೂರು ದಸರಾ ಕಾರ್ಯಕ್ರಮದಲ್ಲಿ ಬಾನು ಮುಷ್ತಾಕ್ ಅವರು ಕಾರ್ಯಕ್ರಮ ಉದ್ಘಾಟಕರಾಗಿರುವುದನ್ನ ವಿರೋಧಿಸುವ ಭರದಲ್ಲಿ ವಿಜಯಪುರ ಶಾಸಕ ಬಸವರಾಜ್ ಪಾಟೀಲ್ ಯತ್ನಾಳ ದಲಿತ ಮಹಿಳೆಯರೂ ಚಾಮುಂಡಿ ತಾಯಿಗೆ ಹೂವು ಮುಡಿಸುವಂತಿಲ್ಲ. ಅದು ಸನಾತನ ಧರ್ಮ ಅನುಸರಿಸುವವರಿಗೆ ಮಾತ್ರ ಆ ಹಕ್ಕು ಇರುವುದು ಎಂದು ಹೇಳಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಮಲ್ಲಿಕಾರ್ಜುನ ಪೂಜಾರ ಮಂಗಳವಾರ ನಗರದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

1002263611

ಫೇಸ್‌ಬುಕ್‌ನಲ್ಲಿ ದಲಿತರ ಅವಹೇಳನ ಮಾಡಿದ ವಿಡಿಯೋ ಸುವರ್ಣ ಟಿವಿ ಬೈಟ್ ಮುಖಾಂತರ ಪ್ರಸಾರವಾಗಿತ್ತು. ಸೆಪ್ಟೆಂಬರ 12ರಂದು ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದಲ್ಲಿ ಹಿಂದುಗಳ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಯನ್ನು ಮಾಡುತ್ತಿರುವವರ ವಿರುದ್ದ ಹಾಗೂ ಪ್ರಚಾರದ ಗೀಳಿನಿಂದ ಸನಾತನ ಧರ್ಮದವರು ಮಾತ್ರ ದಸರಾಹಬ್ಬದಲ್ಲಿ ನಾಡಿನ ಚಾಮುಂಡಿ ದೇವಿಗೆ ಹೂ ಮುಡಿಸಬೇಕು ಹೊರತು ಒಬ್ಬ ಸಾಮಾನ್ಯ ದಲಿತ ಮಹಿಳೆಗೆ ಕೂಡ ಅವಕಾಶ ಇಲ್ಲಾ ಎಂದು ಸಾರ್ವಜನಿಕವಾಗಿ ಹೇಳಿಕೆ ಕೊಟ್ಟು ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಹಿರಂಗವಾಗಿ ದಲಿತ ಹೆಣ್ಣು ಮಕಳಿಗೆ ಹಾಗೂ ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಲ್ಲದೆ ತನ್ನ ವಿಕೃತ ಮನಸ್ಥಿತಿಯಯನ್ನು ಮೆರೆದಿದ್ದಾರೆ. ಹಿಂದೂಗಳ ಧರ್ಮದಲ್ಲಿಯೇ ಬರುವ ದಲಿತ ಹೆಣ್ಣುಮಕ್ಕಳನ್ನು ಅತ್ಯಂತ ಕೀಳುಮಟ್ಟದಲ್ಲಿ ಸಾರ್ವಜನಿಕವಾಗಿ ನಿಂದಿಸುವುದು, ಅವಮಾನ ಮಾಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಇಂತಹ ಕೊಳಕು ಮನಸ್ಥಿತಿಯ ಮತ್ತು ದಿನಾಲೂ ರಾಜ್ಯದಲ್ಲಿ ಕೋಮು ಸಂಘರ್ಷದ ಹೇಳಿಕೆ, ಪ್ರಚೋದನಕಾರಿ ಹೇಳಿಕೆ ನೀಡಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ದಿನನಿತ್ಯ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಆದ್ದರದ ಎಸ್‌ಸಿ,ಎಸ್‌ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...