ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಎಚ್ಚೆತ್ತುಕೊಂಡ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಸಹಾಯವಾಣಿ ಆರಂಭಿಸಿದೆ.
ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಮತ್ತು ಮಾಹಿತಿ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರದಲ್ಲಿ ಆರೋಗ್ಯ, ಪೊಲೀಸ್, ಅಗ್ನಿಶಾಮಕ, ಅರಣ್ಯ, ಅಬಕಾರಿ, ಪ್ರವಾಸೋದ್ಯಮ ಮತ್ತು ಪುರಾತತ್ವ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರವಾಸಿಗರಿಗೆ ಆಪತ್ತು ಎದುರಾದರೆ ಮತ್ತು ತುರ್ತು ಸಂದರ್ಭದಲ್ಲಿ ಮಾಹಿತಿ ಒದಗಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಸಹಾಯವಾಣಿ ಕರ್ತವ್ಯ ನಿರ್ವಹಿಸಲಿದೆ. ಪ್ರವಾಸಿಗರು 08539-225311 ಕರೆ ಮಾಡಬಹುದು ಎಂದು ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.
