ಕೊಪ್ಪಳ ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ ಹಾಗೂ ಇದರಿಂದ ಯುವ ಸಮುದಾಯ ಬಲಿಯಾಗುತ್ತಿದೆ ಎಂದು ನಗರದ ಪಾಲಕರು ಸಾಮಾಜಿಕ ಕಾಳಜಿಯುಳ್ಳ ನಾಗರಿಕರು ಆತಂಕಪಟ್ಟಿದ್ದರು. ಈ ನಡುವೆ ಕೊಪ್ಪಳದ ಸಜ್ಜಿವಾಲಾ ಓಣಿಯಲ್ಲಿ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಗವಿಸಿದ್ದಪ್ಪನನ್ನು ಕೊಚ್ಚಿ ಕೊಲೆ ಮಾಡಿದ ಅರೋಪಿ ಸಾದಿಕ್ ಗಾಂಜಾ ವ್ಯಸನಿಯಾಗಿದ್ದ ಹಾಗೂ ಅವನು ಗಾಂಜಾ ಸೇವಿಸಿಯೇ ಕೊಲೆ ಮಾಡಿದ್ದು ಎಂಬ ಮಾತುಗಳು ಕೇಳಿ ಬಂದಿತ್ತು.ಘಟನೆ ನಡೆದು ಕೆಲವೇ ದಿನಗಳಲ್ಲಿ ಕೊಪ್ಪಳ ನಗರ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಂಜಾ ಮಾರುತಿದ್ದ ರುಕ್ಮಿಣಿ ಅಲಿಯಾಸ್ ಫಾತಿಮಾ ಹಾಗೂ ಸುಭಾಷ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರು ಮಾಹಿತಿ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.