ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು 24 ವರ್ಷದ ನಂತರ ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಗಂಗಾವತಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 2010 ಮೇ 04ರಂದು ಕೊಪ್ಪಳ ಜಿಲ್ಲಾ ಕಾರಾಗೃಹದಿಂದ ಆರೋಪಿ ಮಾರ್ಕಂಡೇಯ ಪಾಲಮರಿ ಎಂಬಾತ ತಪ್ಪಿಸಿಕೊಂಡು ಪರಾರಿಯಾಗಿದ್ದ.
ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಆರೋಪಿ ಮಾರ್ಕಂಡೇಯ ಪಾಲಮರಿ ಜೈಲಿನಿಂದ ತಪ್ಪಿಸಿಕೊಂಡ ಮೇಲೆ ಯಾರಿಗೂ ಕಾಣದೆ ನಾಪತ್ತೆಯಾಗಿದ್ದ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದರೆ ಖುಷಿ : ಕೇಂದ್ರ ಸಚಿವ ವಿ. ಸೋಮಣ್ಣ
ಕರ್ನಾಟಕದಿಂದಲೇ ದೂರವಾಗಿದ್ದ ಆರೋಪಿ ತೆಲಂಗಾಣದ ಬುಡಾನ ಪಂಚಪಲ್ಲಿ ಎಂಬ ಗ್ರಾಮದಲ್ಲಿ ವಾಸವಾಗಿದ್ದು, ತನ್ನ ಆಧಾರ್ ಕಾರ್ಡ್‌ನಲ್ಲೂ ಹೆಸರು ಬದಲಾಯಿಸಿಕೊಂಡು ತಲೆಮರಿಸಿಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.