ಕೊಪ್ಪಳ | ನೀರಿಗಾಗಿ ರೈತರ ಪ್ರತಿಭಟನೆ: ಸಚಿವ ಶಿವರಾಜ್‌ ತಂಗಡಗಿ ರಾಜೀನಾಮೆಗೆ ಒತ್ತಾಯ

Date:

Advertisements

ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್ 20 ರವರೆಗೆ ನೀರು ಬಿಡಲು ಒತ್ತಾಯಿಸಿ ಹಾಗೂ ರೈತರ ಹಿತಾಸಕ್ತಿ ಕಡೆಗಣಿಸಿದ ಸಚಿವ ಶಿವರಾಜ್ ಎಸ್ ತಂಗಡಗಿಯವರ ರಾಜೀನಾಮೆಗೆ ಒತ್ತಾಯಿಸಿ ಕೊಪ್ಪಳದ ಕಾರಟಗಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಪ್ರತಿಭಟನೆ ನಡೆಸಿತು.

“2024ರ ಆಗಸ್ಟ್‌ನಲ್ಲಿ 100 ಟಿಎಂಸಿ ನೀರು ತುಂಬಿದ ತುಂಗಭದ್ರಾ ಜಲಾಶಯದಿಂದ ರಾಜ್ಯ ಸರ್ಕಾರ ರೈತರ ಎರಡು ಬೆಳೆಗಳಿಗೆ ಸಮರ್ಪಕ ನೀರು ಒದಗಿಸಬಹುದಾಗಿತ್ತು. ಆದರೆ, ಹಿಂಗಾರು ಹಂಗಾಮಿನ ಎರಡನೇ ಬೇಸಿಗೆ ಬೆಳೆಗೆ ಎಡದಂಡೆ ಭಾಗದ ಪಾಲಿನ ನೀರು ಇದ್ದರೂ ನೀರು ಹರಿಸಲು ಅಧಿಕಾರಿಗಳು ಮತ್ತು ಸಚಿವರು ನಿರ್ಲಕ್ಷ್ಯ ಧೋರಣೆವಹಿಸಿದರು” ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

“ರಾಜಕಾರಣಿಗಳು ಮತ್ತು ಅಧಿಕಾರಿಗಳು ನೀರನ್ನು ಜಲಾಶಯದ ಮೇಲ್ಭಾಗದ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಿದ್ದಾರೆ. ಜಲಾಶಯದ ನೀರು ಹಂಚಿಕೆಯಲ್ಲಿ ಆಗುತ್ತಿರುವ ಅಕ್ರಮಗಳ ಕುರಿತು ವಿಶೇಷ ತನಿಖಾ ತಂಡವನ್ನು ರಚಿಸಿ ಎಡದಂಡೆ ಭಾಗ ಹಾಗೂ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಮರ್ಪಕ ನೀರು ನೀಡಲು ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.

Advertisements
WhatsApp Image 2025 04 10 at 3.12.50 PM 1

“ಭದ್ರಾ ಜಲಾಶಯದ ಎಡದಂಡೆ ಭಾಗದಲ್ಲಿ ಮುನಿರಾಬಾದ್‌ನಿಂದ ರಾಯಚೂರು ವರೆಗೆ ಸುಮಾರು 100ಕ್ಕೂ ಹೆಚ್ಚು ಉಪ ಕಾಲುವೆಗಳು ಇದ್ದು, ಪ್ರತಿಯೊಂದು ಉಪ ಕಾಲುವೆಗಳ ಕೊನೆ ಭಾಗದ ರೈತರಿಗೆ ಬೆಳೆ ಕೈಗೆ ಬರಬೇಕಾದರೆ ಇನ್ನೂ 15 ರಿಂದ 20 ದಿನಗಳು ಬೇಕಾಗುತ್ತದೆ. ಆದರೆ, ರಾಜ್ಯ ಸರಕಾರ 123ನೇ ನೀರಾವರಿ ಸಲಹಾ ಸಮಿತಿಯಲ್ಲಿ ಏಪ್ರಿಲ್ 10ವರೆಗೆ ನೀರು ಬಿಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ. ಇದು ರೈತರ ಬದುಕಿಗೆ ಬರೆ ಹಾಕಿದಂತೆ. ಏಪ್ರಿಲ್ 10 ಕ್ಕೆ ನೀರು ನಿಲ್ಲಿಸಿದರೆ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಹಾಗಾಗಿ ಏಪ್ರಿಲ್ 20ರವರೆಗೆ ನೀರು ಬಿಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೊಪ್ಪಳ | 42ನೇ ವಯಸ್ಸಿನಲ್ಲಿ ಮಗಳೊಂದಿಗೆ ಪಿಯು ಪರೀಕ್ಷೆ ಬರೆದು ಪಾಸಾದ ತಾಯಿ

ನಗರದ ಕನಕದಾಸ ವೃತ್ತದಲ್ಲಿ ಪ್ರತಿಭಟನಾನಿರತ ರೈತರನ್ನು ಪೊಲೀಸರು ತಡೆಯಲು ಮುಂದಾದಾಗ.. ಕ್ರಿಮಿನಾಶಕ ಸೇವಿಸಲು ಕೆಲ ರೈತರು ಮುಂದಾಗಿದ್ದು, ಕೆಲವರನ್ನು ಪೊಲೀಸರು ಬಂಧಿಸಿದರು. ಇಬ್ಬರ ನಡುವಿನ ಮಾತಿನ ಜಟಾಪಟಿಯಿಂದ ಬಿಗುವಿನ ವಾತಾವರಣ ಸೃಷ್ಟಿಯಾಗಿ ಬಳಿಕ ತಿಳಿಯಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X