ಕೊಪ್ಪಳ | ರೈತರ ನಿರ್ಲಕ್ಷ್ಯ ಸಲ್ಲದು, ಕೂಡಲೇ ಬೇಡಿಕೆ ಈಡೇರಿಸಬೇಕು: ದೊಡ್ಡ ಬರಮಣ್ಣರ

Date:

ಬೆಳೆ ನಷ್ಟ, ಸಾಲದ ಬಾಧೆ ಹಾಗೂ ಮಾರುಕಟ್ಟೆಯ ಅನ್ಯಾಯದ ವಿರುದ್ಧವಾಗಿ ಗಂಗಾವತಿಯಲ್ಲಿ ರೈತರು ಧ್ವಜ ಹಿಡಿದು ಬೀದಿಗಿಳಿದರು. ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ದೆಹಲಿ ನೇತೃತ್ವದೊಂದಿಗೆ ಗಂಗಾವತಿಯಲ್ಲಿ ನೂರಾರು ರೈತರು ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳ ಮೂಲಕ ಆಗ್ರಹಿಸಿದರು.

- Advertisement -

ಗಂಗಾವತಿಯಲ್ಲಿ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ದೆಹಲಿಯಿಂದ ನೂರಾರು ರೈತರು ತಮ್ಮ ಮೂಲಭೂತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಾಲೂಕಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಭಾಕ್ರಾಂಕಿಸೇ ಜಿಲ್ಲಾ ಅಧ್ಯಕ್ಷ್ಯ ದೊಡ್ಡ ಬರಮಣ್ಣರ ಮಾತನಾಡಿ, “ಸರ್ಕಾರ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದರೆ ಅದು ಗ್ರಾಮೀಣ ಆರ್ಥಿಕತೆಯ ಕುಸಿತಕ್ಕೆ ಕಾರಣವಾಗುತ್ತದೆ. ನಿತ್ಯವೂ ರೈತರ ಆತ್ಮಹತ್ಯೆಯಿಂದ ದಿಕ್ಕೆಟ್ಟಿದ್ದಾರೆ. ಆದರೆ ಸರ್ಕಾರ ಕೇವಲ ಭರವಸೆಯ ಮಾತುಗಳನ್ನೇ ನೀಡುತ್ತಿದೆ. ಬೆಳೆಹಾನಿ ಪರಿಹಾರ, ಸಾಲಮನ್ನಾ, ಬೆಂಬಲ ಬೆಲೆ ಇವು ರೈತರ ಜೀವಾಳಕ್ಕೆ ಸಂಬಂಧಿಸಿದ ಬೇಡಿಕೆಗಳು. ಈ ಬೇಡಿಕೆಗಳನ್ನು ತಕ್ಷಣ ಪೂರೈಸದಿದ್ದರೆ, ರಾಜ್ಯವ್ಯಾಪಿ ಬೃಹತ್ ಹೋರಾಟ ಆರಂಭಿಸಲು ನಾವು ಹಿಂಜರಿಯುವುದಿಲ್ಲ” ಎಂದು ಎಚ್ಚರಿಸಿದರು.

“ಪ್ರಾಕೃತಿಕ ವಿಕೋಪದಿಂದ ಬೆಳೆ ಹಾನಿಯಾದ ರೈತರಿಗೆ ಎಕರಗೆ ಕನಿಷ್ಠ ₹25,000 ಪರಿಹಾರ ನೀಡಬೇಕು. ಬೆಳೆ ವಿಮಾ ಯೋಜನೆಗಳು ನಿಜವಾದ ರೈತರಿಗೆ ತಲುಪುವಂತೆ ಕಡ್ಡಾಯವಾಗಿ ಜಾರಿಗೆ ತರಬೇಕು. ರೈತರಿಗೆ ಉಚಿತ ಬಿತ್ತನೆಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಔಷಧಿಗಳನ್ನು ಒದಗಿಸಬೇಕು. ಸಾಲಮನ್ನಾ ತಕ್ಷಣ ಜಾರಿಗೆ ಬರಬೇಕು; ರೈತರಿಗೆ ಹೊಸ ಸಾಲ ವಿತರಣೆ ಸುಲಭವಾಗಬೇಕು. ಗ್ರಾಮೀಣ ಉದ್ಯೋಗ ಯೋಜನೆಗಳನ್ನು ಬಲಪಡಿಸಿ ನಿರುದ್ಯೋಗ ನಿವಾರಣೆ ಮಾಡಬೇಕು. ಎಲ್ಲ ಬೆಳೆಗಳಿಗೆ MSP(ಕನಿಷ್ಠ ಬೆಂಬಲ ಬೆಲೆ) ನಿಗದಿ ಮಾಡಿ, ಖರೀದಿ ಖಚಿತಪಡಿಸಬೇಕು. ರೈತರು ಖಾಸಗಿ ಹಣಕಾಸು ಸಂಸ್ಥೆಗಳ ಬಲೆಗೆ ಸಿಲುಕದಂತೆ ಸಹಕಾರ ಮತ್ತು ಸರ್ಕಾರಿ ಬ್ಯಾಂಕ್‌ಗಳ ಮೂಲಕವೇ ಸಾಲ ವಿತರಣೆಯಾಗಬೇಕು ಹಾಗೂ ರೈತರ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರವಲ್ಲ, ಶಾಶ್ವತ ನೀತಿ ಕ್ರಮಗಳು ರೂಪುಗೊಳ್ಳಬೇಕು” ಎಂಬುದು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ಜಾತಿಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಸಮುದಾಯಕ್ಕೆ ಮಂಗಲನಾಥ ಸ್ವಾಮೀಜಿ ಮನವಿ

ಇದೇ ವೇಳೆ, ಮನವಿಯನ್ನು ಸ್ವೀಕರಿಸಿದ ಸ್ಥಳೀಯ ಅಧಿಕಾರಿಗಳು, “ಬೇಡಿಕೆಗಳನ್ನು ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು” ಎಂದು ಭರವಸೆ ನೀಡಿದರು. ಆದರೆ, ರೈತರು ಭರವಸೆಗಳನ್ನು ಕೇಳಿ ಸಾಕಾಗಿದೆ, ಈಗ ರೈತರ ಮೂಲ ಬೇಡಿಕೆಯನ್ನು ಈಡೇರಿಸಲು ನಿಜವಾದ ಕ್ರಮವಹಿಸಬೇಕೆಂದು ಗಟ್ಟಿಯಾಗಿ ಒತ್ತಾಯಿಸಿದರು.

ರಾಷ್ಟ್ರೀಯ ಅಧ್ಯಕ್ಷರಾದ ಎಂ ಎಂ ಕುಕನೂರ್, ನಾಗರಾಜ್ ಬಾವಿಕಟ್ಟಿ, ಜಿಲ್ಲಾ ಗೌರವ ಅಧ್ಯಕ್ಷ ದೇವಪ್ಪ ಹಳ್ಳಿಗುಡಿ, ಜಿಲ್ಲಾ ಉಪಾಧ್ಯಕ್ಷ ಹನ್ಮಂತಪ್ಪ ಬೇವೂರ್ ಸೇರಿದಂತೆ ನೂರಾರು ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...