ಕೊಪ್ಪಳ | ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ; ಲೋಕ ಅದಾಲತ್‌ನಲ್ಲಿ ಒಂದಾದ ಆರು ಜೋಡಿ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರು ಜೋಡಿಗಳು ಒಂದಾಗಿದ್ದು, ನ್ಯಾಯಾಧೀಶರು ಹಾಗೂ ವಕೀಲರ ಮನವೊಲಿಕೆ ಪ್ರಯತ್ನ ಯಶಸ್ವಿಯಾಗಿದೆ.

ಗಂಗಾವತಿ ತಾಲೂಕು ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಆರು ಜೋಡಿಗಳು ಒಂದಾಗಿದ್ದಾರೆ.

ವೈವಾಹಿಕ ಜೀವನದಲ್ಲಿ ಸಣ್ಣಪುಟ್ಟ ಜಗಳ, ವಿವಾದ, ಮನೆ ಸಮಸ್ಯೆಗಳಿಗೆ ಬೇಸತ್ತು 6 ಜೋಡಿಗಳು ವಿಚ್ಛೇದನ ಕೋರಿ ವಕೀಲರ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು. ನ್ಯಾಯಾಧೀಶರು ಮತ್ತು ವಕೀಲರು, 6 ಜೋಡಿಗಳಿಗೆ ಬುದ್ಧಿಮಾತು ಹೇಳಿ, ವಿಚ್ಛೇದನ ಸಮಯವನ್ನು ಮುಂದಕ್ಕೆ ಹಾಕುತ್ತ ಮನವೋಲಿಸಿದ್ದು, ಇದೀಗ ದಂಪತಿಯನ್ನು ಒಟ್ಟುಗೂಡಿಸಿದ್ದಾರೆ.

Advertisements

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಹುಲಿಹೈದರ್ ಗ್ರಾಮದ ಭರಮಣ್ಣ, ಅಂಬಮ್ಮ, ಜಂಗಮರ ಕಲ್ಗುಡಿ ಗ್ರಾಮದ ಶಿವಮ್ಮ, ಗುಲಪ್ಪ(2 ವರ್ಷ), ಸಿದ್ದಾಪುರ ಗ್ರಾಮದ ರಾಘವೇಂದ್ರ, ಎಂ. ತ್ರಿವೇಣಿ, ಬಾಗಲಕೋಟೆ ರಾಜೇಶ, ಜ್ಯೋತಿ, ಚಿಕ್ಕಡಂಕನಕಲ್ ಗ್ರಾಮದ ಬಸವರಾಜ, ಲಕ್ಷ್ಮಿ, ಗೋಡಿನಾಳದ ಶಿವಲಿಂಗಮ್ಮ, ಮುತ್ತಣ್ಣ ಎಂಬ ದಂಪತಿಗಳು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ಗಂಗಾವತಿ ತಾಲೂಕು ನ್ಯಾಯಾಲಯದಲ್ಲಿ ಒಟ್ಟು 9,493 ಬಾಕಿ ಪ್ರಕರಣಗಳಿದ್ದು, ರಾಷ್ಟ್ರೀಯ ಲೋಕ ಆದಾಲತ್‌ನಲ್ಲಿ ಅಪಘಾತ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ ವಸೂಲಿ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್, ಜನನ ಪ್ರಕರಣ, ಕ್ರಿಮಿನಲ್ ಪ್ರಕರಣ ಸೇರಿದಂತೆ ಒಟ್ಟು 1,796 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಆಹ್ವಾನಿಸಿದ್ದರು. ಆದರೆ 4 ನ್ಯಾಯಾಲಯಗಳಲ್ಲಿ ಸೇರಿ ಮೋಟಾರು ವಾಹನ, ಬ್ಯಾಂಕ್, ಜನನ-ಮರಣ, ಚೆಕ್ ಬೌನ್ಸ್, ಕ್ರಿಮಿನಲ್, ವೈವಾಹಿಕ 1,160 ಪ್ರಕರಣಗಳು ಮಾತ್ರ ಇತ್ಯರ್ಥವಾಗಿವೆ. 4 ನ್ಯಾಯಾಲಯಗಳಲ್ಲಿ ಸೇರಿ ಒಟ್ಟು ₹7,45,91,771 ಹಣವನ್ನು ಸರ್ಕಾರಕ್ಕೆ ಜಮಾ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಲೋಕ ಅದಾಲತ್;‌ 2,680 ಪ್ರಕರಣಗಳ ಪೈಕಿ 1,345 ಪ್ರಕರಣ ಇತ್ಯರ್ಥ

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸದಾನಂದ ನಾಗಪ್ಪ ನಾಯ್ಕ, ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶ ರಮೇಶ ಎಸ್.ಗಾಣಿಗೇರಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಶ್ರೀದೇವಿ ದರ್ಬಾರೇ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಗೌರಮ್ಮ ಪಾಟೀಲ ಸೇರಿದಂತೆ ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಸೇರಿ ವಕೀಲರು, ಅರ್ಜಿದಾರರು, ಎಸ್‌ಬಿಐ ಬ್ಯಾಂಕ್, ಕೆನರಾ ಬ್ಯಾಂಕ್, ಫೈನಾನ್ಸ್ ಸಂಸ್ಥೆಯ ಸಿಬ್ಬಂದಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X