ಕೊಪ್ಪಳ | ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ: ಮನೆಯೊಳಗಿದ್ದ ವಿಕಲಚೇತನ ಯುವಕ ಮೃತ್ಯು

Date:

Advertisements

ಆಕಸ್ಮಿಕ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯೊಂದು ಸಂಪೂರ್ಣ ಬೆಂಕಿಗಾಹುತಿಯಾಗಿ ಮನೆಯ ಒಳಗಡೆಯಿದ್ದ ವಿಕಲಚೇತನ ಯುವಕ ಗಂಭೀರವಾಗಿ ಗಾಯಗೊಡು ಸಾವನಪ್ಪಿದ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮುನೀರಾಬಾದ್ ಸಮೀಪದ ಗುಳದಳ್ಳಿ ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಗುಳದಳ್ಳಿ ಗ್ರಾಮದ ಹುಲಿಗೆಮ್ಮ ಹನುಮಪ್ಪ ಬೆಣ್ಣೆ ಇವರಿಗೆ ಸೇರಿದ ಮನೆಗೆ ವಿದ್ಯುತ್ ಸ್ಪರ್ಶವಾಗಿ ಸಂಪೂರ್ಣ ಸುಟ್ಟಿದ್ದು ಇವರ ಮಗ ಸೋಮನಾಥ ಹನುಮಪ್ಪ ಬೆಣ್ಣಿ (18) ಅವರ ಮೈ ಬಹುತೇಕ ದೇಹ ಸುಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮೃತನ ತಾಯಿ ಹುಲಿಗೆಮ್ಮ ಕೂಲಿ ಕೆಲಸಕ್ಕೆ ತೆರಳಿದ್ದು, ಅಕ್ಕ ಅನಿತಾ ವಿಕಲಚೇತನನಿಗೆ ಊಟ ಮಾಡಿಸಿ ಶಾಲೆಗೆ ತೆರಳಿದ ಸಂದರ್ಭದಲ್ಲಿ ದುರಂತ ಸಂಭವಿಸಿದೆ. ಮನೆಯಲ್ಲಿದ್ದ 60 ಸಾವಿರಕ್ಕೂ ಹೆಚ್ಚು ನಗದು, ಹಾಸಿಗೆ ಬಟ್ಟೆ-ಬರೆ, ಪುಸ್ತಕಗಳು ಸುಟ್ಟು ಹೋಗಿದ್ದು, ಸುಮಾರು ರೂ 3.5 ಲಕ್ಷಕ್ಕೂ‌ ಹೆಚ್ಚು. ನಷ್ಟವಾಗಿದೆ‌ ಎಂದು ತಿಳಿದು ಬಂದಿದೆ.

Advertisements

ಇದನ್ನು ಓದಿದ್ದೀರಾ? ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ‌ಕರ್ ರಾಜೀನಾಮೆ

ಸ್ಥಳಕ್ಕೆ ತಹಶೀಲ್ದಾರ್, ಪೊಲೀಸ್, ಕೆಇಬಿ ಅಧಿಕಾರಿಗಳು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಪಂ ಪಿಡಿಒ, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X