ಶುಲ್ಕ ಪಾವತಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕೊಪ್ಪಳ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಒತ್ತಾಯಿಸಿದರು.
ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ, ಬಿಕಾಂ, ಬಿಎಸ್‌ಸಿ ಓದುತ್ತಿರುವ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್‌ಗಳಿಗೆ ಪ್ರವೇಶ ಪಡೆಯಲು ಶುಲ್ಕ ಪಾವತಿಸಲು ಫೆಬ್ರವರಿ 20 ರಿಂದ 28ರವರೆಗೆ ಬ್ಯಾಂಕ್ ಆಫ್ ಬರೋಡದಲ್ಲಿ ಅವಕಾಶ ಕಲ್ಪಿಸಿದೆ. ಇದರಲ್ಲಿ ನಾಲ್ಕನೇ ಶನಿವಾರ ಮತ್ತು ಭಾನುವಾರ ಬ್ಯಾಂಕ್ ರಜೆ, ಸೋಮವಾರ ಕೊಪ್ಪಳ ಬಂದ್, ಫೆಬ್ರವರಿ 26 ಮಹಾಶಿವರಾತ್ರಿ ಹೀಗಾಗಿ ನಾಲ್ಕು ದಿನಗಳ ಕಾಲ ರಜೆಯಾಗಿದೆ. ಐದು ದಿನಗಳಲ್ಲಿ 3,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಹೇಗೆ ಸಾಧ್ಯ?
“ಬ್ಯಾಂಕಿನಲ್ಲಿ ವಿದ್ಯಾರ್ಥಿಗಳು ಮುಗಿಬಿದ್ದು ಶುಲ್ಕ ಪಾವತಿಸಲು ಹರಸಾಹಸ ಪಡುತ್ತಿದ್ದಾರೆ. ಬ್ಯಾಂಕಿನ ವ್ಯವಹಾರ ಮಾಡುವ ಗ್ರಾಹಕರು ತಮ್ಮ ನಿತ್ಯ ವ್ಯವಹಾರಕ್ಕೆ ಬ್ಯಾಂಕಿನಲ್ಲಿ ಹೋಗಲು ಆಗದೆ ತೊಂದರೆ ಅನುಭವಿಸುತ್ತಿದ್ದಾರೆ, ಬ್ಯಾಂಕಿನ ಅಧಿಕಾರಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತ್ಯೇಕ ವಿಭಾಗ ತೆರೆದು ಶುಲ್ಕ ಪಾವತಿಸಿಕೊಳ್ಳಬೇಕು. ಇಲ್ಲವೇ ಆನ್‌ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕೆಎಸ್‌ಆರ್‌ಟಿಸಿ ಟಿಕೆಟ್ ದರ ಹೆಚ್ಚಳ; ಕಂಡಕ್ಟರ್ ಮೇಲೆ ಹಲ್ಲೆ
ಈ ವೇಳೆ ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್, ಮಖಬೂಲ್, ವೀರೇಶ್ ತೆಗ್ಗಿನಮನಿ, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್, ದಲಿತ ಯುವ ವೇದಿಕೆ ಜಿಲ್ಲಾ ಅಧ್ಯಕ್ಷ ಸುಂಕಪ್ಪ ಮಿಸಿ ಮುಂತಾದವರು ಇದ್ದರು.