ಕೊಪ್ಪಳ | ಶುಲ್ಕ ಪಾವತಿ ಸಮಸ್ಯೆ ಬಗೆಹರಿಸಲು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಒತ್ತಾಯ

Date:

ಶುಲ್ಕ ಪಾವತಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕೊಪ್ಪಳ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಒತ್ತಾಯಿಸಿದರು.

- Advertisement -

ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ, ಬಿಕಾಂ, ಬಿಎಸ್‌ಸಿ ಓದುತ್ತಿರುವ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್‌ಗಳಿಗೆ ಪ್ರವೇಶ ಪಡೆಯಲು ಶುಲ್ಕ ಪಾವತಿಸಲು ಫೆಬ್ರವರಿ 20 ರಿಂದ 28ರವರೆಗೆ ಬ್ಯಾಂಕ್ ಆಫ್ ಬರೋಡದಲ್ಲಿ ಅವಕಾಶ ಕಲ್ಪಿಸಿದೆ. ಇದರಲ್ಲಿ ನಾಲ್ಕನೇ ಶನಿವಾರ ಮತ್ತು ಭಾನುವಾರ ಬ್ಯಾಂಕ್ ರಜೆ, ಸೋಮವಾರ ಕೊಪ್ಪಳ ಬಂದ್, ಫೆಬ್ರವರಿ 26 ಮಹಾಶಿವರಾತ್ರಿ ಹೀಗಾಗಿ ನಾಲ್ಕು ದಿನಗಳ ಕಾಲ ರಜೆಯಾಗಿದೆ. ಐದು ದಿನಗಳಲ್ಲಿ 3,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಹೇಗೆ ಸಾಧ್ಯ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಬ್ಯಾಂಕಿನಲ್ಲಿ ವಿದ್ಯಾರ್ಥಿಗಳು ಮುಗಿಬಿದ್ದು ಶುಲ್ಕ ಪಾವತಿಸಲು ಹರಸಾಹಸ ಪಡುತ್ತಿದ್ದಾರೆ. ಬ್ಯಾಂಕಿನ ವ್ಯವಹಾರ ಮಾಡುವ ಗ್ರಾಹಕರು ತಮ್ಮ ನಿತ್ಯ ವ್ಯವಹಾರಕ್ಕೆ ಬ್ಯಾಂಕಿನಲ್ಲಿ ಹೋಗಲು ಆಗದೆ ತೊಂದರೆ ಅನುಭವಿಸುತ್ತಿದ್ದಾರೆ, ಬ್ಯಾಂಕಿನ ಅಧಿಕಾರಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತ್ಯೇಕ ವಿಭಾಗ ತೆರೆದು ಶುಲ್ಕ ಪಾವತಿಸಿಕೊಳ್ಳಬೇಕು. ಇಲ್ಲವೇ ಆನ್‌ಲೈನ್‌ ಮೂಲಕ ಪಾವತಿಸುವ ವ್ಯವಸ್ಥೆ ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಹೆಚ್ಚಳ; ಕಂಡಕ್ಟರ್‌ ಮೇಲೆ ಹಲ್ಲೆ

ಈ ವೇಳೆ ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್, ಮಖಬೂಲ್, ವೀರೇಶ್ ತೆಗ್ಗಿನಮನಿ, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್, ದಲಿತ ಯುವ ವೇದಿಕೆ ಜಿಲ್ಲಾ ಅಧ್ಯಕ್ಷ ಸುಂಕಪ್ಪ ಮಿಸಿ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...