ಕೊಪ್ಪಳ | ಬಲ್ಡೋಟಾ ವಿಸ್ತರಣೆ ವಿರುದ್ಧ ಗವಿ ಶ್ರೀಗಳು ದೃಢ ನಿಲುವು ತಳೆಯಬೇಕು: ಜಂಟಿ ಕ್ರಿಯಾ ವೇದಿಕೆ ಮನವಿ

Date:

ಕೊಪ್ಪಳದ ಸುತ್ತಮುತ್ತ ತಲೆಯೆತ್ತಿರುವ ಕಾರ್ಖಾನೆಗಳ ವಿರುದ್ಧ, ಬಲ್ಡೋಟಾ ವಿಸ್ತರಣೆಯನ್ನು ವಿರೋಧಿಸಲು ಹಾಗೂ ಹೊಸ ಕಂಪನಿಗಳನ್ನು ಜಿಲ್ಲೆಯಲ್ಲಿ ಸ್ಥಾಪನೆಯಾಗದಂತೆ ತಡೆಯಲು ಗವಿ ಶ್ರೀಗಳು ದೃಢ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿಯಾಗಿ ಮನವಿ ಮಾಡಿವೆ.

- Advertisement -

ಬಲ್ಡೋಟಾ ವಿಸ್ತರಣೆ ಹಾಗೂ ಮುಕುಂದ ಸುಮಿ ಹೊಸ ಕಾರ್ಖಾನೆಗಳ ಸ್ಥಾಪನೆ ವಿರೋಧಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹವನ್ನು ಅ.31ರಿಂದ ನಗರಸಭೆಯ ಆವರಣದಲ್ಲಿ ಹಮ್ಮಿಕೊಂಡಿದ್ದು, ಧರಣಿಯನ್ನು ಗವಿ ಶ್ರೀಗಳು ಬೆಂಬಲಿಸಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಬಲ್ಡೋಟ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಷಿಂಡಿಯಾ ಮುಂತಾದ ಈ ಕಾರ್ಖಾನೆಗಳು 20 ಹಳ್ಳಿಗಳ ಸುತ್ತ ಸ್ಪಾಂಜ್ ಐರನ್, ಪಲ್ಲೆಟ್, ಉಕ್ಕು, ಸಿಮೆಂಟ್, ಕಾಸ್ಟಿಂಗ್, ವಿಷ ರಸಾಯನ, ಕೆಮಿಕಲ್ ಗೊಬ್ಬರ, ಸುಣ್ಣ, ಸಿಮೆಂಟ್, ಇಂಡಸ್ಟ್ರೀಯಲ್ ಗ್ಯಾಸ್, ಕಲ್ಲಿದ್ದಲು ಉರಿಸಿ ವಿದ್ಯುತ್, ಹಾಲಿನ ಪದಾರ್ಥ ಉತ್ಪಾದನೆ, ಮಾಡುತ್ತಾ ಪರಿಸರ ಹಾನಿ ಮಾಡುತ್ತಿವೆ. ಇವುಗಳ ವಿಸ್ತರಣೆ, ಹೊಸ ಕಂಪನಿಗಳ ಸ್ಥಾಪನೆಯಾಗದಂತೆ ತಡೆಯಲು ತಾವು ಮುಂದಾಳತ್ವ ವಹಿಸಬೇಕು” ಎಂದು ಗವಿ ಶ್ರೀಗಳಿಗೆ ವಿನಂತಿಸಲಾಯಿತು.

WhatsApp Image 2025 11 09 at 12.27.18 PM

ಫೆಬ್ರುವರಿ 24ರಂದು ತಮ್ಮ ಮುಂದಾಳತ್ವದಲ್ಲಿ ಸಾವಿರಾರು ಜನರ ಕಾರ್ಖಾನೆಗಳ ತೊಲಗಿಸಲು ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಎಸ್‌ಪಿಎಲ್ ವಿಸ್ತರಣೆ ನಿಲ್ಲಿಸಲು ಹಾಗೂ ಸರಕಾರದಿಂದ ಆದೇಶ ಪ್ರತಿ ತರುವಂತೆ ಬೇಡಿಕೆಗಳನ್ನು ಜನಪ್ರತಿನಿಧಿಗಳಿಗೆ ಆದೇಶದ ಜೊತೆ ಜವಾಬ್ದಾರಿಯನ್ನೂ ವಹಿಸಿದ್ದರಿ. ಇದಕ್ಕೆ ಒಪ್ಪಿಕೊಂಡ ಜನಪ್ರತಿನಿದಿನಗಳು ಆ ಕೆಲಸ ಮಾಡಿಲ್ಲ. ಆದ್ದರಿಂದ ಜನಪ್ರತಿನಿಧಿಗಳನ್ನು ತಮ್ಮಲ್ಲಿಗೆ ಕರೆಯಿಸಿಕೊಂಡು ತಾವು ಜಿಲ್ಲೆಯ ಜನರ ಪರವಾಗಿ ಕಂಪನಿ ವಿಸ್ತರಣೆ ಶಾಶ್ವತವಾಗಿ ರದ್ದುಗೊಳಿಸುವ ಆದೇಶ ತರಬೇಕೆಂದು ಜನಪ್ರತಿನಿಧಿಗಳು ಮತ್ತೊಮ್ಮೆ ಆಗ್ರಹಿಸಬೇಕು ಎಂದರು.

ಇದನ್ನೂ ಓದಿ: ಕೊಪ್ಪಳ | ತುಂಗಭದ್ರಾ ಕಾಲುವೆಯಲ್ಲಿ ಈಜಲು ಹೋದ ಯುವಕ ನಾಪತ್ತೆ

ಈ ವೇಳೆ ಅಲ್ಲಮಪ್ರಭು ಬೆಟ್ಟದೂರು, ಕೆ ಬಿ ಗೋನಾಳ, ಗಾಳೆಪ್ಪ ಮುಳಗಿ, ಮಂಜುನಾಥ ಗೊಂಡಬಾಳ, ಮುದಕಪ್ಪ ಹೊಸಮನಿ, ಶರಣು ಗಡ್ಡಿ, ಸರಣು ಪಾಟೀಲ್, ಮಂಗಳೇಶ ರಾಠೋಡ, ಮಹಂತೇಶ ಎಮ್ ಕೆ ಸಾಹೇಬ್, ಶಿವಪ್ಪ ಹಡಪದ, ಎಸ್ ಎ ಗಫಾರ್ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...