ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ.
ಬಿಜೆಪಿ ಉಚ್ಚಾಟಿತ ಶಾಸಕ ಯತ್ನಾಳ ಅವರು ‘ಮುಸ್ಲಿಂ ಮಹಿಳೆಯರನ್ನು ಹಿಂದೂ ಯುವಕರು ಮದುವೆಯಾದರೆ 5 ಲಕ್ಷ ನೀಡುವ ಅಭಿಯಾನವನ್ನು ಆರಂಭಿಸುತ್ತೇವೆ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಯಿಂದ ಸಮಾಜ ಸೌಹಾರ್ದತೆಗೆ ಧಕ್ಕೆಯಾಗಿದೆ ಎಂದು ಅಬ್ದುಲ್ ಕಲಾಂ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ರೀತಿ ನೀಡಿದ ಹೇಳಿಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ, ದಿನ ಪತ್ರಿಕೆ, ಸುದ್ದಿ ಮಾಧ್ಯಮಗಳಲ್ಲಿ ರಾಜ್ಯ ಮಟ್ಟದಲ್ಲಿ ಚರ್ಚೆ ಹರಿದಾಡುತ್ತಿದೆ. ಕೊಪ್ಪಳ ನಗರದಲ್ಲಿ ನೀಡಿದಂತಹ ಈ ಹೇಳಿಕೆಯಿಂದಾಗಿ ರಾಜ್ಯದಲ್ಲಿ ಎರಡು ಕೋಮುಗಳ ನಡುವೆ ಪ್ರಚೋದನೆ ನೀಡಿ ಸಂಘರ್ಷಕ್ಕೆ ಕಾರಣವಾಗುವಂತೆ ಮಾಡಿದ್ದಾರೆ. ಯತ್ನಾಳ್ ನೀಡಿದ ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷಾಸೂಯೆ ಬೆಳೆಸುವಂತೆ ಮಾಡಿದೆ ಮತ್ತು ಮುಸ್ಲಿಂ ಮಹಿಳೆಯರನ್ನು ಕೀಳಾಗಿ ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೇ ಅವಮಾನ ಮಾಡಿರುತ್ತಾರೆ. ಇದು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವುದಲ್ಲದೇ ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡಿರುತ್ತದೆ” ಎಂದು ಅಬ್ದುಲ್ ಕಲಾಂ ದೂರಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಕೊಪ್ಪಳ | ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ಓರ್ವ ಆರೋಪಿ ಶರಣಾಗತಿ
ಎರಡು ಕೋಮುಗಳ ನಡುವೆ ಪ್ರಚೋದನೆ ನೀಡಿ ಸಂಘರ್ಷಕ್ಕೆ ಕಾರಣವಾಗುವಂತೆ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ್ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಕುರಿತು ಕೊಪ್ಪಳ ನಗರ ಠಾಣೆಯಲ್ಲಿ 196(1)(a), 299, 353(2) ಭಾರತೀಯ ನ್ಯಾಯ ಸಂಹಿತೆ-2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
https://shorturl.fm/uYKLK