ಕೊಪ್ಪಳದಲ್ಲಿ ಸಂಚಾರಿ ಹಾಗೂ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶವಿದ್ದು, ದಂಡದ ಮೊತ್ತದಲ್ಲಿ ಶೇ 50% ರಿಯಾಯತಿಗೆ ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರಾಜ್ಯದ ಸಂಚಾರಿ ಹಾಗೂ ಸಾರಿಗೆ ಇಲಾಖೆಗಳಲ್ಲಿ ಸಂಚಾರಿ ಹಾಗೂ ಮೋಟಾರು ವಾಹನ ಕಾಯಿದೆ, ನಿಯಮಗಳ ಉಲ್ಲಂಘನೆ ಸಂಬಂಧ 1991 ರಿಂದ 2022ರ ಅವಧಿಯಲ್ಲಿ ಪ್ರಕರಣ ದಾಖಲಾಗಿ, ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇಕಡಾ ಐವತ್ತರಷ್ಟು ಮಾತ್ರ) ರಿಯಾಯತಿ ನೀಡಿ, 2026ರ ಜೂನ್ 21 ರಿಂದ ಜುಲೈ 10ರ ವರೆಗೆ ಕಾಲಾವಕಾಶ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಮತ್ತೊಮ್ಮೆ ಅವಕಾಶ ಒದಗಿಸಲಾಗಿದೆ.
20 ದಿನಗಳ ನೀಡಿರುವ ಈ ಕಾಲಾವಕಾಶ ಬಳಸಿಕೊಂಡು ವಾಹನಗಳ ಮಾಲೀಕರು ದಂಡ ಪಾವತಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ | ವಾಹನ ಸವಾರರಿಗೆ ಸಿಹಿಸುದ್ದಿ: ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ
ಪೋಸ್ಟ್ ಹಂಚಿಕೊಳ್ಳಿ:





