ಕೊಪ್ಪಳ | ಸರ್ಕಾರದ ಯೋಜನೆ ಸೌಲಭ್ಯಗಳು ಕುರಿಗಾಹಿಗಳಿಗೆ ಸಮರ್ಪಕವಾಗಿ ತಲುಪಬೇಕು: ಜಿ.ಪಂ ಸಿಇಒ ರಾಹುಲ್ ರತ್ನಂ

Date:

Advertisements

ಕುರಿಗಾಹಿಗಳಿಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಕೊಡುವುದರ ಜತೆಗೆ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ‌ ಪಶು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕೊಪ್ಪಳ ಪಟ್ಟಣದ ಪಂಚಾಯತ್ ಕಚೇರಿ ಸಭಾಗಣದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳೊಂದಿಗೆ ಕುರಿಗಾಹಿ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

“ಕುರಿಗಾಹಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ಕುರಿ-ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯ, ಸಹಾಯಧನ ಸೌಲಭ್ಯ, ಅಗತ್ಯ ಪರಿಕರಗಳ ವಿತರಣೆ ಮತ್ತು ಜಾನುವಾರುಗಳಿಗೆ ಲಸಿಕೆ ಹೀಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಈ ಎಲ್ಲ ಕಾರ್ಯಕ್ರಮಗಳ ಬಗ್ಗೆ ಜಿಲ್ಲೆಯ ಕುರಿಗಾರರಿಗೆ ಅರಿವು ಅಥವಾ ಜಾಗೃತಿ ಮೂಡಿಸಬೇಕು. ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಪ್ರಮಾಣ ಶೇ.100 ರಷ್ಟಾಗಬೇಕು. ಸೌಲಭ್ಯ ವಿತರಣೆಯಲ್ಲೂ ಜಿಲ್ಲೆಯ ಪ್ರಗತಿ ಹೆಚ್ಚಾಗಬೇಕು. ಬಹಳಷ್ಟು ಕುರಿಗಾರರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಹೇಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂಬುದು ತಿಳಿದಿರುವುದಿಲ್ಲ” ಎಂದರು.

Advertisements

ಗಂಗಾವತಿಯ ಹಿಮಾಲಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಕೆ ಬಿ ಜೂಡಿ ಮಾತನಾಡಿ, “ಮಾರುಕಟ್ಟೆಯಲ್ಲಿ ಕುರಿಗಳನ್ನು ಮಾರಾಟ ಮಾಡಲು ವಾರದಲ್ಲಿ ಒಮ್ಮೆ ಪ್ರತಿ ಶುಕ್ರವಾರದಂದು ಕುಕನಪಳ್ಳಿಯಲ್ಲಿ ಸಂತೆ ನಡೆಯುತ್ತದೆ. ಇದರೆ ಜತೆಗೆ ಡಿಜಿಟಲ್ ಮಾರುಕಟ್ಟೆ ಅತ್ಯವಶ್ಯಕವಾಗಿದ್ದು, ಗಂಗಾವತಿ ಮಾರುಕಟ್ಟೆ ಸಮಿತಿಯಲ್ಲಿ ಡಿಜಿಟಲ್ ತೂಕದ ಯಂತ್ರವನ್ನು ಅಳವಡಿಸಬೇಕು” ಎಂದರು.

ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ ಪಿ.ಎಂ ಮಲ್ಲಯ್ಯ ಅವರು ಮಾತನಾಡಿ, “ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಸಾಲ ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು, 2025ರ ಮಾರ್ಚ್ 31ರವರೆಗೆ ಆವಕಾಶವಿರುತ್ತದೆ. ಆಸಕ್ತ ಕುರಿಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಡಾ ಆನಂದ ದೇವರನಾವದಗಿ ಮಾತನಾಡಿ, “ಕುರಿ ಹಾಗೂ ಮೇಕೆಗಳಿಗೆ ಔಷಧಿಗಳ ವಿತರಣೆಗಾಗಿ ಕೇಂದ್ರ ಕಚೇರಿಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದ್ದು, ಸರಬರಾಜು ಆದ ಕೂಡಲೇ ವಿತರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.

ಕೊಪ್ಪಳದ ಜೈ ಭೀಮ್ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಮಹಾಲಕ್ಷ್ಮೀ ಲಕ್ಷ್ಮಣ ಕಂದಾರಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್‌ಗೆ ಅಮಿತ್ ಶಾ ಅವಮಾನ: ಜನಪರ ಸಂಘಟನೆಗಳಿಂದ ಡಿ.28ಕ್ಕೆ ವಿಜಯಪುರ ಬಂದ್‌ಗೆ ಕರೆ

ಸಭೆಯಲ್ಲಿ ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ.ವಿನೋದ ಕುಮಾರ ದಿವಟರ, ಡಾ.ಶಿವರಾಜ ಎಂ.ಶೆಟ್ಟರ, ಡಾ.ಚನ್ನಬಸಪ್ಪ ಹಳ್ಳದ, ಡಾ.ಪ್ರಕಾಶ ಚೂರಿ, ಡಾ.ಜಾಕೀರ ಹುಸೇನ್, ಕುರಿಗಾಹಿಗಳದ ಮುಕ್ಕುಂದಪ್ಪ ಅಳವಂಡಿ, ಮಹಾಂತಪ್ಪ ಹನವಾಳ ಸೇರಿದಂತೆ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X