ಕೊಪ್ಪಳ | ಪಿಡಿಒ ಮೇಲೆ ಗ್ರಾಮ ಪಂ. ಸದಸ್ಯೆ ಹಲ್ಲೆ; ಕೊಲೆ ಯತ್ನ ಪ್ರಕರಣ ದಾಖಲು

Date:

ಗ್ರಾಮ ಪಂಚಾಯತಿಯ ಪಿಡಿಒ ಮೇಲೆ ಗ್ರಾಮ ಪಂಚಾಯತಿ ಸದಸ್ಯೆ ಮತ್ತು ಆಕೆಯ ಮಗ ಹಲ್ಲೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದಲ್ಲಿ ನಡೆದಿದೆ.

- Advertisement -

ಹಿರೇಮ್ಯಾಗೇರಿ ಪಂಚಾಯತಿಯ ಪಿಡಿಒ ರತ್ನಮ್ಮ ಗುಂಡಣ್ಣನವರ ಎಂಬವರ ಮೇಲೆ ಅದೇ ಪಂಚಾಯತಿಯ ಸದಸ್ಯೆ ಶಾಂತಮ್ಮ ಬಸಪ್ಪ ಬಂಡಿವಡ್ಡರ ಮತ್ತು ಆಕೆಯ ಪುತ್ರ ಭೀಮೇಶ ಬಸಪ್ಪ ಬಂಡಿವಡ್ಡರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಾಂತಮ್ಮ ಮತ್ತು ಭೀಮೇಶ್‌ ವಿರುದ್ಧ ಯಲಬುರ್ಗಾ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಹಂಚಿಕೆಗೆ ಫಲಾನುಭವಿಗಳ ಆಯ್ಕೆಯಾಗಿ ಪಂಚಾಯತಿಯಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಮುಖಂಡರು ಭಾಗಿಯಾಗಿದ್ದರು.

ಚರ್ಚೆ ನಡೆಯುತ್ತಿದ್ದ ವೇಳೆ, ಮನೆ ಹಂಚಿಕೆ ವಿಚಾರವಾಗಿ ಪಿಡಿಒ ರತ್ನಮ್ಮ ಮತ್ತು ಸದಸ್ಯೆ ಶಾಂತಮ್ಮ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ರತ್ನಮ್ಮ ಮೇಲೆ ಶಾಂತಮ್ಮ ಏಕಾಏಕಿ ದಾಳಿಮಾಡಿದ್ದಾರೆ. ಶಾಂತಮ್ಮ ಜೊತೆಗೆ ಆಕೆಯ ಪುತ್ರನೂ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಘಟನೆ ಸಂಬಂಧ ಪಿಡಿಒ ರತ್ನಮ್ಮ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. “ಏಕಾಏಕಿ ತಮ್ಮ ಮೇಲೆ ಹಲ್ಲೆ ನಡೆಸಿದ್ದು, ಕತ್ತು ಹಿಚುಕಿ ಕೊಲೆಗೆ ಯತ್ನಿಸಿದ್ದಾರೆ. ತಡೆಯಲು ಬಂದ ಸಿಬ್ಬಂದಿ ಅಂದಪ್ಪ ಮೇಲೂ ಹಲ್ಲೆ ನಡೆಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...