ಕೊಪ್ಪಳ | ದೆಹಲಿಯಲ್ಲಿ ಜರುಗುವ ಸ್ವಾತಂತ್ರ್ಯೋತ್ಸವದ ವಿಶೇಷ ಅತಿಥಿಯಾಗಿ ಗ್ರಾಪಂ ಅಧ್ಯಕ್ಷೆ ಫರೀದಾ ಬೇಗಂ ಆಯ್ಕೆ

Date:

Advertisements

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕೊಪ್ಪಳದ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಫರೀದಾ ಬೇಗಂ ತಂಬಾಕದಾರ್‌ ಅವರು ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ಕಲಬುರಗಿ, ಬೆಳಗಾವಿ, ಚಿಕ್ಕಮಂಗಳೂರು, ಕೊಡಗು, ತುಮಕೂರು, ದಕ್ಷಿಣ ಕನ್ನಡ ಹಾಗೂ ಕೊಪ್ಪಳ ಜಿಲ್ಲೆಯ ಸೇರಿ‌ ಒಟ್ಟು ಎಂಟು ಗ್ರಾಮ ಪಂಚಾಯತ್‌ ಅಧ್ಯಕ್ಷರನ್ನು ವಿವಿಧ ಮಾನದಂಡಗಳಡಿ ವಿಶೇಷ ಅತಿಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಎರಡು ಗ್ರಾಮ ಪಂಚಾಯತಿ ಆಧ್ಯಕ್ಷರು ಆಯ್ಕೆಯಾಗಿದ್ದು, ಇದರಲ್ಲಿ ಕುದುರಿಮೋತಿಯ ಫರೀದಾ ಬೇಗಂ ಒಬ್ಬರು. ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯ ಅಧಿಕೃತ ಮಾಹಿತಿ ನೀಡಿದೆ.

Advertisements

ಈ ಎಂಟು ಜನರಿಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯ್ಕೆಯಾದ ಸದಸ್ಯರು ತಮ್ಮೊಂದಿಗೆ ಪತಿ ಅಥವಾ ಪತ್ನಿಯನ್ನು ಕರೆದೊಯ್ಯಲು ಅವಕಾಶವಿದ್ದು, ರೈಲು ಪ್ರಯಾಣ ಹಾಗೂ ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳುವ ವಸತಿ, ಊಟ, ಉಪಹಾರದ ವೆಚ್ಚವನ್ನು ಪಂಚಾಯತ್ ನಿಧಿಯಿಂದ ಭರಿಸುವಂತೆ ಸೂಚಿಸಲಾಗಿದೆ.

ಗ್ರಾಮ ಪಂಚಾಯತಿ ಅಧ್ಯಕ್ಷೆ ಫರೀದಾ ಬೇಗಂ ಮಾತನಾಡಿ, “ಕೊಪ್ಪಳ ಜಿಲ್ಲೆಯಲ್ಲಿಯೇ ಕುದರಿಮೋತಿ ಗ್ರಾಮ ಪಂಚಾಯತಿಯಿಂದ ಆಗಸ್ಟ್ 15ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ನನ್ನನ್ನು ವಿಶೇಷ ಅತಿಥಿಯಾಗಿ ಆಯ್ಕೆ ಮಾಡಿದ ಕೇಂದ್ರ‌ ಸರಕಾರಕ್ಕೆ ಧನ್ಯವಾದಗಳು‌ ಹೇಳುತ್ತೇನೆ. ಕುದರಿಮೋತಿಯಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನ ಪರಿಗಣಣಿಸಿ ನಮ್ಮ ಗ್ರಾಮ ಆಯ್ಕೆ ಮಾಡಿದ್ದಾರೆ. ಇದು ಗ್ರಾಮದ ಪ್ರಗತಿಗೆ ಹಾಗೂ ಮತ್ತಷ್ಟು ಸಕ್ರಿಯವಾಗಿ ಅಭಿವೃದ್ಧಿ ಕೆಲಸ ಮಾಡಲು ಪ್ರೋತ್ಸಾಹ ನೀಡಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೊಪ್ಪಳ | ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವು

ಗ್ರಾಮ ಪಂಚಾಯತಿ ಪಿಡಿಒ ಮಾತನಾಡಿ, “ಕೇಂದ್ರ ಸರಕಾರ ಕುದರಿಮೋತಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಕೆಲಸವನ್ನು ಪರಿಗಣಿಸಿ ನಮ್ಮ ಆಯ್ಕೆ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಯಾಗಿ ಆಯ್ಕೆ ಮಾಡಿದೆ. ಇದು ನಮ್ಮ ಗ್ರಾಮಕ್ಕೆ ಹೆಮ್ಮೆ” ಎಂದರು.

ಅಧ್ಯಕ್ಷೆ ಫರೀದಾ ಬೇಗಂ ಹುಸೇನಸಾಬ್‌ ತಂಬಾಕದಾ‌ರ್ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X