ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶರಣಪ್ಪ ಎಂಬುವವರ ಪುತ್ರಿ ಪ್ರಶಾಂತಿ(2) ಮೃತ ಮಗು.
ರಾತ್ರಿ ಮನೆಯ ಸದಸ್ಯರೆಲ್ಲರೂ ಮಲಗಿದ್ದ ಸಂದರ್ಭ ಧಾರಾಕಾರವಾಗಿ ಮಳೆ ಸುರಿದಿದೆ. ಶಿಥಿಲಗೊಂಡ ಮನೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅವಶೇಷಗಳಡಿಯಲ್ಲಿ ಸಿಲುಕಿದ ಮಗು ಮೃತಪಟ್ಟಿದೆ. ಕುಟುಂಬಸ್ತರಿಗೆ ಗಾಯಗಳಾಗಿದ್ದು, ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಗ್ಯಾರಂಟಿ ಯೋಜನಾ ಜಿಲ್ಲಾದ್ಯಕ್ಷ ರೆಡ್ಡಿ ಶ್ರೀನಿವಾಸ, ತಹಶೀಲ್ದಾರ್, ವಿಲೇಜ್ ಅಕೌಂಟೆಂಟ್, ಗ್ರಾಪಂ ಅಧ್ಯಕ್ಷ ವಿರೇಶ ಗೌಡ ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕೊಪ್ಪಳ | ಐತಿಹಾಸಿಕ ಸಾಧನೆಗೆ ಶಕ್ತಿ ಯೋಜನೆ ಸಾಕ್ಷಿ: ಶಾಸಕ ರಾಘವೇಂದ್ರ ಹಿಟ್ನಾಳ