ಕೊಪ್ಪಳ | ರೈತರ ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಧರಣಿ ಖಚಿತ: ಈಶಪ್ಪ ಸರಬದ

Date:

ರೈತರ ಬೇಡಿಕೆಗಳನ್ನು ಈಡೇರಿಸಿದಿದ್ದರೆ ಅನಿರ್ದಿಷ್ಟಾವಧಿ ಧರಣಿ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಈಶಪ್ಪ ಸಬರದ ಎಚ್ಚರಿಕೆ ನೀಡಿದ್ದಾರೆ.

- Advertisement -

ಕುಕನೂರು ಪಟ್ಟಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಪಟ್ಟಣದ ರಾಘವಾನಂದ ಮಠದಿಂದ ಅಂಬೇಡ್ಕರ್ ವೃತ್ತದ ಮೂಲಕ ವೀರಭದ್ರಪ್ಪ ವೃತ್ತದ ವರೆಗೆ ಪ್ರತಿಭಟನೆಯ ಮೂಲಕ ತಹಶೀಲ್ದಾರ್ ಎಚ್ ಪ್ರಾಣೇಶ್‌ರವರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕುಕನೂರು ಪಟ್ಟಣದ ಎಪಿಎಂಸಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಬೇಕು ಹಾಗೂ ಮುಂದೆ ಬರುವ ಹೆಸರು, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಬೆಂಬಲ ಬೆಲೆಯಡಿ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು. ಪ್ರತಿ ಬಾರಿ ಬೆಳೆ ಬಂದ ಮೇಲೆ ಬೆಂಬಲ ಬೆಲೆ ಘೋಷಣೆ ಮಾಡುತ್ತೀರಿ, ಇದರಿಂದ ರೈತರಿಗೆ ತೊಂದರೆಯಾಗುತ್ತಿದ್ದು, ಈಗಿನಿಂದಲೇ ಬೆಂಬಲ ಬೆಲೆ ಕುರಿತು ತಯಾರಿ ಮಾಡಿಕೊಳ್ಳಬೇಕು. ಈಗ ಸುಮಾರು 40 ವರ್ಷಗಳಿಂದ ಕುಕನೂರು ಪಟ್ಟಣದ ಎಪಿಎಂಸಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿಲ್ಲ. ಈ ಬಗ್ಗೆ ಖುದ್ದು ನೆಪ ಮಾತ್ರಕ್ಕೆ ರೈತರೇ ದೇಶದ ಬೆನ್ನೆಲುಬು ಎನ್ನುವ ಜನಪ್ರತಿನಿಧಿಗಳು ಗಮನಹರಿಸಬೇಕು” ಎಂದು ಆಗ್ರಹಿಸಿದರು.

ಪಟ್ಟಣದ ಕಸ ವಿಲೇವಾರಿ ಘಟಕದ ಕಾಮಗಾರಿ ಕಳಪೆಯಾಗಿ ನಡೆಯುತ್ತಿದ್ದು, ಸಾಕಷ್ಟು ಬಾರಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೂ ಮನವಿ ಸಲ್ಲಿಸಿದರೂ ಜಾಣ ಕುರುಡನಂತೆ ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರು ಪಟ್ಟಣದ ಎಪಿಎಂಸಿಯಲ್ಲಿ ಟೆಂಡರ್ ಪ್ರಕ್ರಿಯೆ ಮಾಡಬೇಕು ಮತ್ತು ಕಳಪೆ ಮಟ್ಟದ ಕಸ ವಿಲೇವಾರಿ ಘಟಕದ ಕಾಮಗಾರಿಯ ಬಗ್ಗೆ ಆರ್ಥಿಕ ಸಲಹೆಗಾರರು, ಶಾಸಕ ಬಸವರಾಜ ರಾಯರಡ್ಡಿ ಮತ್ತು ಜಿಲ್ಲಾಧಿಕಾರಿಗಳು, ಕೃಷಿ ಮಂತ್ರಿಗಳು ಗಮನಹರಿಸಿ ಬೇಗನೇ ರೈತರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗಂಗಮ್ಮ ಹೂಡೆದ ಮಾತನಾಡಿ, “ಮುಂದೆ ಬರುವ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಎಪಿಎಂಸಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಬೇಕು. ಎಪಿಎಂಸಿ ಆವರಣದಲ್ಲಿ ರೈತರಿಗೆ ರೈತ ಭವನವನ್ನು ನಿರ್ಮಿಸಿಕೊಡಬೇಕು ಮತ್ತು ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುಬೇಕು. ಈಡೇರಿಸದೆ ಇದ್ದ ಪಕ್ಷದಲ್ಲಿ ಕುಕುನೂರು ಯಲಬುರ್ಗಾ ಬಂದ್‌ಗೆ ಕರೆ ಕೊಟ್ಟು ಅನಿರ್ದಿಷ್ಟಾವಧಿ ಧರಣಿ ಹಾಗೂ ಹೋರಾಟ ಮಾಡಲಾಗುವುದು” ಎಂದರು.

ಈ ವೇಳೆ ನಗರ ಘಟಕ ಅಧ್ಯಕ್ಷ ಶಿವು ಬಂಗಿ, ಬಸವರಾಜ ಸಬರದ, ಹನುಮಪ್ಪ ಮರಡಿ, ಬಸಪ್ಪ ಲಾಲ್ ಗುಂಡೂರ, ವೀರಯ್ಯ ತೋಂಟದಾರ್ಯ ಮಠ, ಈರಪ್ಪ ಈ ಬೇರಿ, ಮಹಮ್ಮದ್ ರಫಿ ಸವಣೂರು, ಉಮೇಶ್ ಬಿದವಟ್ಟಿ, ಶಿವಪ್ಪ ಯತ್ನಟ್ಟಿ, ಕೆಂಚಪ್ಪ, ಈರಪ್ಪ ಗುಳಗಣ್ಣನವರ್, ಮಹದೇವಪ್ಪ ಕುರಿ, ವೀರಪ್ಪ ಕೂಡ್ಲೂರು, ಬಸಪ್ಪ ಮಂಡಲಗೇರಿ, ಮಲ್ಲಪ್ಪ ಮೂಲಿಮನಿ, ಎಚ್ ಎಮ್ ಮರಡಿ, ಮಲ್ಲಪ್ಪ ಯತ್ನಟ್ಟಿ, ಶರಣಪ್ಪ ಚೆಂಡೂರ, ರಾಮಣ್ಣ ಬಳ್ಳಾರಿ, ಬಸಪ್ಪ ಬಂಗಿ, ಯಲ್ಲಪ್ಪ ಕಲಾಲ್, ಬಸವರಾಜ್ ಸಬರದ, ಚಂದ್ರಶೇಖರ ವಸ್ತ್ರದ, ಶರಣಪ್ಪ ಯತ್ನಟ್ಟಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...