ಕೊಪ್ಪಳ | ವಾಂತಿ-ಭೇದಿ ಪ್ರಕರಣ ಹೆಚ್ಚಳ; ಗಾರವಾಳ ಗ್ರಾಮದಲ್ಲಿ ತೆರೆದ ತಾತ್ಕಾಲಿಕ ಆರೋಗ್ಯ ಕೇಂದ್ರ

Date:

ಕೊಪ್ಪಳ ಜಿಲ್ಲೆಯಾದ್ಯಂತ ವಾಂತಿ-ಭೇದಿ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಒಂದು ವಾರದಿಂದ ಕುಕನೂರು ತಾಲೂಕಿನ ಗಾವರಾಳ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಯಥೇಚ್ಛವಾಗಿ ಕಾಣಿಸಿಕೊಂಡಿದ್ದು, ಈವರೆಗೆ ಒಟ್ಟು 19 ವಾಂತಿ ಭೇದಿ ಪ್ರಕರಣಗಳು ದಾಖಲಾಗಿವೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಪರೀಕ್ಷೆ ನಡೆಸಿ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆಯುವಂತೆ ಸೂಚಿಸಿದ್ದು, ದಿನದ 24 ಗಂಟೆಯೂ ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನುರಿತ ವೈದ್ಯರು, ಸಿಬ್ಬಂದಿಗಳು ಹಗಲು ರಾತ್ರಿ ಗ್ರಾಮಗಳಲ್ಲಿ ಬೀಡುಬಿಟ್ಟು ರೋಗಿಗಳಿಗೆ ಬೇಕಾದ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಪ್ರಕಾಶ್ ಮಾತನಾಡಿ, “ಕಲುಷಿತ ನೀರು, ಆಹಾರ ಸೇವನೆಯಿಂದ ವಾಂತಿಭೇದಿ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ರೋಗಿಗಳಿಗೆ ಬೇಕಾಗಿರುವ ಚಿಕಿತ್ಸೆಯನ್ನು ಗ್ರಾಮದಲ್ಲೇ ನೀಡುತ್ತಿದ್ದು, ಆರೋಗ್ಯ ಇಲಾಖೆ ಗಾವರಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತೆರೆದಿರುವ ತಾತ್ಕಾಲಿಕ ಆರೋಗ್ಯ ಕೇಂದ್ರಕ್ಕೆ ಬಂದು ರೋಗಿಗಳು ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಹೇಳಿದರು.

“ರೋಗಿಗಳಿಗೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಇಲಾಖೆಯಿಂದ ಮಾಡಲಾಗಿದ್ದು, ಆ್ಯಂಬುಲೆನ್ಸ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಗ್ರಾಮಸ್ಥರು ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕಾಯಿಸಿದ ನೀರನ್ನು ಕುಡಿಯಬೇಕು, ಹಣ್ಣು ಹಂಪಲುಗಳನ್ನು ತಿನ್ನಬೇಕು, ತಂಗಳು ಆಹಾರ ತಿನ್ನುವುದನ್ನು ನಿಲ್ಲಿಸಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಕುಲುಷಿತ ನೀರು ಕುಡಿದು ವೃದ್ಧೆ ಸಾವು

ಸ್ಥಳಕ್ಕೆ ಡಿಎಚ್‌ಒ ಭೇಟಿ
ಗಾವರಾಳ ಗ್ರಾಮಕ್ಕೆ ಡಿಎಚ್ಒ ಡಾ. ಅಲಕಾನಂದ ಮಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ರೋಗಿಗಳಿಗೆ ಬೇಕಾದಂತ ಚಿಕಿತ್ಸೆ ನೀಡುವುದರ ಜೊತೆಗೆ ಅವರಿಗೆ ಬೇಕಾದಂತ ಸಲಹೆ ಸೂಚನೆಗಳನ್ನು ನೀಡಿ ಆರೋಗ್ಯದ ಬಗ್ಗೆ ಗಮನ ಹರಿಸಲು ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಲಹೆ ನೀಡಿದರು.

“ಯಾರಿಗಾದರೂ ವಾಂತಿಭೇದಿ ಕಾಣಿಸಿಕೊಂಡರೆ ಕೂಡಲೇ ಅವರನ್ನು ತಾತ್ಕಾಲಿಕ ಆರೋಗ್ಯ ಕೇಂದ್ರಕ್ಕೆ ಕರೆತರಬೇಕು. ತ್ವರಿತ ಚಿಕಿತ್ಸೆ ನೀಡಬೇಕು. ರೋಗದ ತೀವ್ರತೆ ಹೆಚ್ಚಾದಾಗ ಕೊಪ್ಪಳಕ್ಕೆ ಕಳುಹಿಸಿ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ತಮ್ಮ ಹಕ್ಕುಗಳಿಗಾಗಿ ಲಿಂಗತ್ವ ಅಲ್ಪಸಂಖ್ಯಾತರ ಹೋರಾಟ

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಗೌರವಯುತ ಜೀವನ ನಡೆಸಲು ತಮಗೆ ಲಿಂಗತ್ವ ಅಲ್ಪಸಂಖ್ಯಾತರ...

ಕಲಬುರಗಿ | ಅಕ್ರಮ ಸಾಗಾಟ; 9 ಲೀಟರ್ ಮದ್ಯ, 45 ಲಕ್ಷ ರೂ. ಮೌಲ್ಯದ ಬಸ್ ವಶ

ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಸ್‌ ತಡೆದು ಅಬಕಾರಿ ಇಲಾಖೆಯ ಅಧಿಕಾರಿಗಳು ಪರಿಶೀಲನೆ...

ಯಾದಗಿರಿ | ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥ

ವಸತಿ ಶಾಲೆಯಲ್ಲಿ ಕಲುಷಿತ ನೀರು ಕುಡಿದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ...

ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

ಶತಾಯುಷಿ ವೃದ್ಧೆಯೊಬ್ಬರು ಆಧಾರ್ ಕಾರ್ಡ್‌ ಇಲ್ಲದ ಕಾರಣ, ಮಾಸಾಶನ ಪಡೆಯಲು ಸಾಧ್ಯವಾಗಿರಲಿಲ್ಲ....