ಕೊಪ್ಪಳ | ಬಲ್ಡೋಟಾ ವಿಸ್ತರಣೆ & ಹೊಸ ಕಾರ್ಖಾನೆ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ

Date:

ಕೊಪ್ಪಳ ಜಿಲ್ಲೆಗೆ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಹಾಗೂ ಹೊಸ ಕಾರ್ಖಾನೆಗಳನ್ನು ಸ್ಥಾಪಿಸುವುದನ್ನು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ಸಮಿತಿ ನಗರಸಭೆ ಸಂಕೀರ್ಣದ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿವೆ.

- Advertisement -

ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ ಸುಮಿ, ಎಕ್ಸ್ ಇಂಡಿಯಾ ಸೇರಿ ಎಲ್ಲಾ ಕಾರ್ಖಾನೆಗಳ ವಿಸ್ತೀರ್ಣ ಮತ್ತು ಆರಂಭವನ್ನು ವಿರೋಧಿಸಿ ಸತ್ಯಾಗ್ರಹಕ್ಕೆ ಚಾಲನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, “ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಬೇಕು ಎಂದೇನಿಲ್ಲ, ಅವುಗಳಿಂದ ಎಲ್ಲಾ ಸಮಸ್ಯೆ ಪರಿಹಾರ ಆಗಿದೆ ಎಂಬುದು ಕೇವಲ ಭ್ರಮೆ. ಇಲ್ಲಿ ಹಣ ಹೂಡಿಕೆ ಮಾಡುವುದು ದೊಡ್ಡ ಸಂಗತಿ ಎಂದು ಭಾವಿಸಿರುವುದೇ ಬಹುದೊಡ್ಡ ತಪ್ಪು. ಹಣದ ಲೆಕ್ಕದಲ್ಲಿ ಜನರಿಗೆ ಬದುಕು ಸಿಗಲ್ಲ. ಬಳ್ಳಾರಿಗೆ ಜಿಂದಾಲ್‌ನಂತಹ ಬೃಹತ್‌ ಕಾರ್ಖಾನೆ ಸ್ಥಾಪನೆ ಮಾಡುವ ಮೊದಲು ಏನು ಹೇಳಿ ಬಂದಿತ್ತೊ, ಅ ಪ್ರಕಾರ ನಡೆದುಕೊಳ್ಳದೇ ಇರುವ ಕಾರಣ ಅಲ್ಲಿಯ ಜನ ಕಂಗಾಲಾಗಿದ್ದಾರೆ, ಬಹುತೇಕ ಕಂಪನಿಗಳು ಈಗ ಉದ್ಯೋಗ ಕಡಿತ ಆರಂಭಿಸಿವೆ. ಈಗ ಉದ್ಯೋಗ ಕೊಡ್ತಿವಿ ಅಂದವರು ಮುಂದೆ ಕೊಡಲು ಸಾಧ್ಯವಿಲ್ಲ ಎನ್ನುತ್ತಾರೆ. ಅದು ಏನೇ ಇದ್ದರೂ ಉದ್ಯೋಗಕ್ಕಿಂತ ಮೊದಲು ಆರೋಗ್ಯ ಹಾಗೂ ಬದುಕು ಮುಖ್ಯ” ಎಂದರು.

ರೈತ ಚಳವಳಿಯ ಮುಂಚೂಣಿ ನಾಯಕ ಚಾಮರಸ ಮಾಲಿಪಾಟೀಲ್‌ ಮಾತನಾಡಿ, “ಕಾರ್ಖಾನೆಗಳಿಂದ ಬರುತ್ತಿರುವ ಧೂಳು ಮತ್ತು ಹೊಗೆಯಿಂದ ಪರಿಸರ ನಾಶವಾಗಿದೆ. ರೈತರ ಬೆಳೆ ನಾಶವಾಗಿದೆ. ಅಲ್ಲದೆ, ಇಲ್ಲಿಯ ನದಿಯಿಂದ ನೀರನ್ನು ಹೇರಳವಾಗಿ ಬಳಸಿಕೊಂಡು ರೈತರಿಗೆ ಎರಡನೆ ಬೆಳೆಗೆ ನೀರಿಲ್ಲದಂತೆ ಮಾಡಿದ್ದಾರೆ. ಕುಡಿಯುವ ನೀರು ಮಲಿನವಾಗಿವೆ ಎಂಬ ಸಾಮಾನ್ಯ ಪ್ರಜ್ಞೆ ಇಟ್ಟುಕೊಳ್ಳದಿರುವುದು ವಿಷಾದಕರ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೊಪ್ಪಳ | ಬಸಪ್ಪ, ಚಂದ್ರಶೇಖರ, ದೇವೇಂದ್ರಕುಮಾರ್‌ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಈ ವೇಳೆ ಹಿರಿಯ ಸಾಹಿತಿ ಎಎಂ ಮದರಿ, ಮಹಿಳಾ ಹೋರಾಟಗಾರ್ತಿ ಶಶಿಕಲಾ, ಜಂಟಿ ಕ್ರಿಯಾ ವೇದಿಕೆ ಹೋರಾಟ ಸಂಚಾಲಕ ಕೆ ಬಿ ಗೋನಾಳ, ಡಿ ಹೆಚ್ ಪೂಜಾರ, ಮಂಜುನಾಥ ಜಿ ಗೊಂಡಬಾಳ, ಮಹಾಂತೇಶ ಕೊತಬಾಳ, ನಜೀರಸಾಬ್‌ ಮೂಲಿಮನಿ, ಶರಣು ಗಡ್ಡಿ, ಎಸ್‌ ಎ ಗಫಾರ್, ಬಸವರಾಜ ಶೀಲವಂತರ, ಎಸ್ ಬಿ ರಾಜೂರ, ರವಿ ಕಾಂತನವರ, ಚಿಟ್ಟಿಬಾಬು ಸಿಂಧನೂರು, ಭೀಮಸೇನ ಕಲಿಕೇರಿ, ಶರಣು ಪಾಟೀಲ್‌, ಹನುಮಂತಪ್ಪ ಬಸವರಾಜ ಯರದಿಹಾಳ, ಮೂಕಣ್ಣ ಮೇಸ್ತ್ರಿ ಮಂಗಳೇಶ ರಾಠೋಡ, ಬಸವರಾಜ ನರೆಗಲ್‌, ರಮೇಶ ಪಾಟೀಲ್ ಬೇರಿಗಿ, ಗವಿಸಿದ್ದಪ್ಪ ಹಲಿಗಿ, ಯಮನೂರಪ್ಪ ಹಾಲಳ್ಳಿ ಬಸಾಪುರ, ಮಹಾದೇವಪ್ಪ ಮಾವಿನಮಡು, ದುರುಗೇಶ ಹಿರೇಮನಿ ವಟಪರ್ವಿ, ಸುಂಕಮ್ಮ ಗಾಂಧಿನಗರ, ಭೀಮಪ್ಪ ಯಲಬುರ್ಗಾ, ಚನ್ನಬಸಪ್ಪ ಅಪ್ಪಣ್ಣವರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...