ಕೊಪ್ಪಳ | ಸಿಜೆಐಗೆ ಅಪಮಾನ; ಆರೋಪಿ ವಕೀಲನ ಗಡಿಪಾರಿಗೆ ಡಿಎಸ್‌ಎಸ್ ಆಗ್ರಹ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ರಾಕೇಶ್ ಕಿಶೋರ್ ಎಂಬ ವಕೀಲ ವಿಚಾರಣೆ ನಡೆಯುವ ಸಂದರ್ಭದಲ್ಲಿಯೇ ನ್ಯಾಯಾಲಯದ ಆವರಣದಲ್ಲಿ ಶೂ ಎಸೆದು ಅವಮಾನ ಮಾಡಿ ವಕೀಲ ವೃತ್ತಿಗೇ ಧಕ್ಕೆ ತಂದಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವನನ್ನು ಗಡಿಪಾರು ಮಾಡಬೇಕು ಎಂದು‌ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದ್ದು, ಕೊಪ್ಪಳದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ.

- Advertisement -

“ಕೊಪ್ಪಳ ಜಿಲ್ಲೆಯ ಕಾನೂನು ಪ್ರಜ್ಞಾವಂತ ನಾಗರಿಕರು ಹಾಗೂ ಸಂವಿಧಾನ ಪಾಲಕರು, ಅಕ್ಟೋಬರ್ 6ರಂದು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಗವಾಯಿಯವರ ಮೇಲೆ ನಡೆದ ಅಪಮಾನ ಆಗುವಂತ ಘಟನೆಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇವೆ. ಘಟನೆ ಕೇವಲ ಒಬ್ಬ ವ್ಯಕ್ತಿಯ ಮೇಲೆ ನಡೆದ ಹಲ್ಲೆಯಲ್ಲ; ಅದು ಭಾರತದ ಸಂವಿಧಾನದ ಗೌರವ, ನ್ಯಾಯಾಂಗದ ಸ್ವಾತಂತ್ರ್ಯ ಹಾಗೂ ಕಾನೂನಿನ ಆಳ್ವಿಕೆಗೆ ಧಿಕ್ಕಾರ ನೀಡುವ ಕೃತ್ಯವಾಗಿದೆ. ದೇಶದ ಉನ್ನತ ನ್ಯಾಯಾಂಗದ ಮುಖ್ಯಸ್ಥರ ಮೇಲೆ ಹಲ್ಲೆ ನಡೆಸುವುದು ರಾಷ್ಟ್ರದ ಸಂವಿಧಾನಾತ್ಮಕ ವ್ಯವಸ್ಥೆಯ ಮೇಲೆ ದಾಳಿ ಮಾಡಿದಂತಾಗಿದೆ” ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಕೊಪ್ಪಳ | ದಶಕದ ಹಿಂದಿನ ಯಲ್ಲಾಲಿಂಗನ ಕೊಲೆ ಪ್ರಕರಣ: 9 ಆರೋಪಿಗಳ ಖುಲಾಸೆ

ಈ ವೇಳೆ ನಿಂಗಪ್ಪ ಜಿಎಸ್ ಬೆಣಕಲ್, ಶಶಿಕಲಾ ಮಠದ, ಸಲ್ಮಾ ಜಾನ್, ಕರಿಯಪ್ಪ ಬಿ ಮನ್ನಿನವರ, ಮೈಲಪ್ಪ ಮಾದೇನೂರು, ಯಮನೂರು ಬಣಕಾರ್, ಶ್ರೀಕಾಂತ ಹೊಸಮನಿ, ದುರ್ಗಮ್ಮ ಬೆಟಗೇರಿ, ಮಾಂತೇಶ್ ಮ್ಯಾಗಲಮನಿ, ಮುತ್ತು ಅರಕೇರಿ, ಭೀಮೇಶ್ ಮಂಡಲಗೇರಿ,ಅರ್ಜುನ ಬೆಣಕಲ,‌ ವೀರೇಶ್, ವೀರೇಶ ವೀರಾಪುರ್ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...