ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶ್ರೀ ಶಿವಕಾಂತ ಮಂಗಲ ಭವನದಲ್ಲಿ ಜನವರಿ 22ರ ಸಂಜೆ 4ಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ-2022, ಸಾಹಿತ್ಯಶ್ರೀ ಪ್ರಶಸ್ತಿ-2022 ಹಾಗೂ ಪುಸ್ತಕ ಬಹುಮಾನ- 2021ರ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ, ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಪ್ರಶಸ್ತಿ ಪ್ರದಾನ ಮಾಡುತ್ತಾರೆ. ಕರ್ನಾಟಕ ವಿಧಾನ ಪರಿಷತ್ ಸಚೇತಕ, ಕುಷ್ಟಗಿ ಶಾಸಕ ದೊಡ್ಡನಗವಡ ಪಾಟೀಲ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಉಪಸ್ಥಿತಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಸತಿ ರಹಿತರಿಗೆ ನಿವೇಶನ ಮಂಜೂರು ಮಾಡುವಂತೆ ಕಬ್ಬೂರು ಗ್ರಾಮಸ್ಥರ ಆಗ್ರಹ
ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ ಎನ್ ಮುಕುಂದರಾಜ್ ಪ್ರಾಸ್ತಾವಿಕ ನುಡಿ, ಕೊಪ್ಪಳದ ಹಿರಿಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಅವರಿಂದ ಅಭಿನಂದನಾ ನುಡಿ, ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದ ಕೆ ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕ ಜಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ, ಡಾ ಚಂದ್ರಶೇಖರ ಬಿ ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಆಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷ ಹಸನಸಾಬ ನಭಿಸಾಬ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್ ಪಟೇಲ್ ಇರಲಿದ್ದಾರೆ.