ಕೊಪ್ಪಳ | ದೆಹಲಿ ಗಣರಾಜ್ಯೋತ್ಸವಕ್ಕೆ ಕಿನ್ನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಆಹ್ವಾನ

Date:

Advertisements

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿ ಅದ್ಯಕ್ಷೆ ಶ್ವೇತಾ ರಾಘವೇಂದ್ರ ಡಂಬಳ‌ ಅವರಿಗೆ ನವದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲು ಆಹ್ವಾನ ಲಭಿಸಿದೆ.

ದೇಶಾದ್ಯಂತ 750 ಸ್ಥಳೀಯ ಅಡಳಿತದ ಪ್ರತಿನಿಧಿಗಳನ್ನು ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದ್ದು, ರಾಜ್ಯದ 12 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ ಈ ಅವಕಾಶ ಲಭಿಸಿದೆ.

ಶ್ವೇತಾ ರಾಘವೇಂದ್ರ ಡಂಬಳ ಮಾತನಾಡಿ, “ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿ ಇದೇ 26ಕ್ಕೆ ಒಂದು ತಿಂಗಳಾಗುತ್ತದೆ. ಅದರೊಳಗೆ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನನಗೆ ತುಂಬಾ ಖುಷಿಯಾಗಿದೆ. ಕಿನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ರಾಜ್ಯದ ಹನ್ನೆರಡು ಪಂಚಾಯಿತಿಗಳಲ್ಲಿ ಕಲ್ಯಾಣ ಕರ್ನಾಟಕದ ನಮ್ಯ ಕಿನ್ನಾಳ ಗ್ರಾಮ ಪಂಚಾಯಿತಿ ಆಯ್ಕೆ ಮಾಡಿ ನನ್ನನ್ನು ಅತಿಥಿಯಾಗಿ ಆಹ್ವಾನಿಸಿರುವ ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೂ, ರಾಜ್ಯ ಸರ್ಕಾರದವರಿಗೂ ಧನ್ಯವಾದ ಹೇಳುತ್ತೆನೆ” ಎಂದು ಹೆಮ್ಮೆಪಟ್ಟರು.

Advertisements

ಗ್ರಾಮದ ಮುಖಂಡ ದೇವರಾಜ್ ಮಾತನಾಡಿ, “ಗ್ರಾಮದ ಮಹಿಳಾ ಸಬಲೀಕರಣ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದ್ದರಿಂದ ಈ ಬಾರಿ ನಮ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ದೆಹಲಿ ಗಣರಾಜ್ಯೋತ್ಸವದ ಅತಿಥಿಯಾಗಿ ಆಹ್ವಾನ ಸಿಕ್ಕಿರುವುದು ನಮ್ಮ ಗ್ರಾಮಕ್ಕೆ ಹೆಮ್ಮೆಯ ವಿಷಯ. ನಮ್ಮ ಪಂಚಾಯಿತಿಗೆ ನಾಲ್ಕು ಮಹಾತ್ಮಾ ಗಾಂಧಿ ಪುರಸ್ಕಾರಗಳು ದೊರೆತಿವೆ. ಮಕ್ಕಳ ಸಬಲೀಕರಣ ಪ್ರಶಸ್ತಿಗೆ ಭಾಜನರಾಗಬೇಕಿತ್ತು. ಆದರೆ ಆ ಪ್ರಶಸ್ತಿ ಕರ್ನಾಟಕದ ಬೇರೆ ಜಿಲ್ಲೆಗೆ ಹೋಗಿದೆ. ಆದರೂ, ವಿಶೇಷವಾಗಿ ಮಹಿಳಾ ಸಬಲೀಕರಣದ ವಿಷಯ ರಾಷ್ಟ್ರೀಯ ಪುರಸ್ಕಾರ ಸಿಕ್ಕಿದ್ದು, ನಮಗೆ ಇನ್ನೂ ಹೆಮ್ಮೆಪಡುವ ವಿಷಯ” ಎಂದು ಹರ್ಷ ವ್ಯಕ್ತಪಡಿಸಿದರು.

ಹನುಮೇಶ ಕೋವಿ ಮಾತನಾಡಿ, “ನಮ್ಮೂರಿನ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಇದೇ 26ರ ಗಣರಾಜ್ಯೋತ್ಸವಕ್ಕೆ ಅಹ್ವಾನ ನೀಡಿದ್ದು, ಹೆಮ್ಮೆಯ ಸಂಗತಿ ಇದಕ್ಕೆ ನಮ್ಮ ಇಡೀ ಗ್ರಾಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಾರಿಯಾಗಿದ್ದೆವೆ.‌ ಗ್ರಾಮದಲ್ಲಿ ಗ್ರಾಮಸಭೆ, ವಾರ್ಡ್ ಸಭೆ, ಮಹಿಳಾ, ಮಕ್ಕಳ ಸಭೆ ಕರೆದು ಚರ್ಚಿಸಿ ಅಭಿವೃದ್ಧಿ ಕೆಲಸ ಮಾಡಿದೆ. ಮೂಲ ಸೌಕರ್ಯಗಳ ಕಡೆಗೆ ಗಮನ ಹರಿಸಿ ಸೌಲಭ್ಯ ಕಲ್ಪಿಸಿಕೊಟ್ಟಿದ್ದೆವೆ. ಗ್ರಾಮದ ಎಲ್ಲಾ ಅಭಿವೃದ್ಧಿ ಕಾರ್ಯ ಗಮನಿಸಿ‌ ಕೇಂದ್ರ ಸರಕಾರ ನಮ್ಮ ಪಂಚಾಯತ್ ಆಯ್ಕೆ ಮಾಡಿಕೊಂಡಿದ್ದು ಸಂತಸ ತಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜ.24ರಂದು ಸನ್ನತಿ ಪಂಚಶೀಲ ಪಾದಯಾತ್ರೆ ಸಮಾರೋಪ ಸಮಾರಂಭ

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಮಾತನಾಡಿ, “ಹೈದರಾಬಾದ್ ಕರ್ನಾಟಕದಲ್ಲಿ ಕಿನ್ನಾಳ ಗ್ರಾಮ ʼರಾಷ್ಟ್ರ ಸ್ನೇಹಿ ಗ್ರಾಮ ಪಂಚಾಯಿತಿʼಯೆಂದು ಆಯ್ಕೆಯಾಗಿದ್ದು, ಹೆಮ್ಮೆ ತಂದಿದೆ. ನಾಲ್ಕು ಬಾರಿ ಗಾಂಧಿ ಪುರಸ್ಕಾರ ಪಡೆದಿದೆ. ವಿಶೇಷವಾಗಿ ‘ಮಹಿಳಾ ಸ್ನೇಹಿ’ ಪಂಚಾಯಿತಿಯೆಂದು ಆಯ್ಕೆಯಾಗಿದ್ದು, ಮನರೇಗಾದಲ್ಲಿ ಮಹಿಳೆಯರಿಗೆ ನಿವೇಶನ ನಿರ್ಮಾಣ ಮಾಡಿಕೊಡಲು ₹42 ಲಕ್ಷ ಮೀಸಲಿಟ್ಟಿದ್ದು, ಮಹಿಳೆಯರ ಶೌಚಾಲಯ, ಶಾಲೆ, ಜಾಲೆಜು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣಕ್ಕೆ ಹಣವನ್ನು ಮೀಸಲಿಟ್ಟು ಗ್ರಾಮ ಅಭಿವೃದ್ಧಿ ಕೆಲಸದಲ್ಲಿ ಮುಂಚೂಣಿಯಲ್ಲಿದೆ. ಕಿನ್ನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕೆಲಸವನ್ನು ಪರಿಗಣಿಸಿ ನಮ್ಮ ಪಂಚಾಯಿತಿ ಅದ್ಯಕ್ಷರನ್ನು ಈ ಬಾರಿಯ 26ರ ಗಣರಾಜ್ಯೋತ್ಸವಕ್ಕೆ ಆಹ್ವಾನಿಸಿದ್ದು ಶ್ಲಾಘನೀಯ. ಇದಕ್ಕೆ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಕೃತಜ್ಞರಾಗಿದ್ದೆವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X