ಕೊಪ್ಪಳ | ಎಸ್‌ಸಿ/ಎಸ್‌ಟಿ ವಸತಿ ನಿಲಯದಲ್ಲಿ ಮೂಲಸೌಕರ್ಯ ಕೊರತೆ; ಮಕ್ಕಳು ಮನೆಯಿಂದ ತರುವ ಸ್ಥಿತಿ

Date:

ವಿದ್ಯಾರ್ಥಿಗಳು ಭವಿಷ್ಯದ ಕನಸುಗಳನ್ನು ಹೊತ್ತು ವಸತಿ ನಿಲಯಗಳಿಗೆ ಬರುತ್ತಾರೆ. ಆದರೆ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯ ಕೊರತೆಯಾಗಿದ್ದು, ಅದೆಷ್ಟೋ ಮಕ್ಕಳು ತಮಗೆ ಬೇಕಾಗುವ ಸಾಮಗ್ರಿಗಳನ್ನು ಮನೆಯಿಂದಲೇ ತರುವಂತಹ ಪರಿಸ್ಥಿತಿ ಎದುರಾಗಿದೆ.

- Advertisement -

ಕೊಪ್ಪಳ ನಗರದ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವೃತ್ತಿಪರ ವಸತಿ ನಿಲಯದ ವಿದ್ಯಾರ್ಥಿಗಳು ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿದ್ಯಾರ್ಥಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ವಸತಿ ನಿಲಯದಲ್ಲಿ ಒಟ್ಟು 200ಕ್ಕಿಂತ ಅಧಿಕ ಮಕ್ಕಳು ದಾಖಲಾಗಿದ್ದಾರೆ. ಆದರೆ ವಸತಿ ನಿಲಯದಲ್ಲಿ ಹಾಸಿಗೆ ಬೆಡ್ ವ್ಯವಸ್ಥೆಯಿಲ್ಲದೆ ಮಕ್ಕಳು ಮನೆಯಿಂದ ತಂದು ಮಲಗುವ ಸ್ಥಿತಿ ನಿರ್ಮಾಣವಾಗಿದೆ. ತರಲಾರದ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳು ಬೆಡ್‌ಗಳಿಲ್ಲದೆ ನೆಲದ ಮೇಲೆಯೇ ಮಲಗುವ ಪರಿಸ್ಥಿತಿಯಿದೆ” ಎಂದು ಬೇಸರ ವ್ಯಕ್ತಪಡಿಸಿದರು.

1000053723
ವಸ್ತುಗಳನ್ನು ಜೋಡಿಸಲು ಕಬೋರ್ಡ್‌ಗಳಿಲ್ಲದ ಕಾರಣ ನೆಲದಲ್ಲಿಯೇ ಇಟ್ಟಿರುವ ವಸ್ತುಗಳು

“ಸೋಲಾರ್‌ ವ್ಯವಸ್ಥೆಯಿದ್ದರೂ ನೀರಿನ ಸಂಪರ್ಕ ಕಲ್ಪಿಸದ ಕಾರಣ, ಚಳಿ ಮತ್ತು ಮಳೆಗಾಲದಲ್ಲೂ ತಣ್ಣೀ‌ರು ಸ್ನಾನ ಮಡುವಂತಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಸುಸಜ್ಜಿತವಾಗಿ ಕಟ್ಟಡ ನಿರ್ಮಾಣವಾಗಿದೆ. ಆದರೆ ಈವರೆಗೂ ಮಕ್ಕಳಿಗೆ ಯಾವುದೇ ರೀತಿಯ ಬೆಡ್‌ಗಳಿಲ್ಲದೆ ಹೆಣಗಾಡುವಂತಾಗಿದೆ. ಈಗ ಚಳಿಗಾಲ ಆರಂಭವಾಗಿರುವುದರಿಂದ ಬರೀ ಚಾಪೆ ಮೇಲೆ ಮಲಗಲು ಸಾಧ್ಯವಾಗುತ್ತಿಲ್ಲ” ಎಂದು ಅವಲತ್ತುಕೊಂಡರು.

“ವಸತಿ ನಿಲಯದಲ್ಲಿ ಗ್ರಂಥಾಲಯವಿದೆ. ಆದರೆ ಅಲ್ಲಿ ಮಕ್ಕಳಿಗೆ ಓದುವುದಕ್ಕೆ ಪುಸ್ತಕಗಳಿಲ್ಲ. ಶುಚಿ ರುಚಿಯಾದ ಊಟ ನೀಡುವುದಿಲ್ಲ. ಬದಲಿಗೆ ಕಳಪೆ ಊಟ ನೀಡುತ್ತಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವಂತೆ ಬೇಡಿಕೊಂಡರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಕಾನೂನು ಪದವಿ ವಿದ್ಯಾರ್ಥಿ ಉಮೇಶ್ ಮಾತನಾಡಿ, “ವಿದ್ಯಾರ್ಥಿಗಳು ಮನೆಯಿಂದಲೇ ಹಾಸಿಗೆ ಮತ್ತು ಹೊದಿಕೆಗಳನ್ನು ತೆಗೆದುಕೊಂಡು ಬಂದಿದ್ದಾರೆ. ವೃತ್ತಿಪರ ಕೋರ್ಸ್‌ಗಳಿಗೆ ಸಂಬಂಧಿಸಿದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ಸಂಬಂಧಿಸಿದ ಗಣಕಯಂತ್ರಗಳಿಲ್ಲ. ವಿಶಾಲವಾದ ಗ್ರಂಥಾಲಯವಿದೆ. ಆದರೆ ಓದುವುದಕ್ಕೆ ಪುಸ್ತಕಗಳಿಲ್ಲ” ಎಂದರು.

1000053720

“ವಸತಿ ನಿಲಯವು ಪ್ರಾರಂಭಗೊಂಡು ಕೆಲವೇ ವರ್ಷಗಳಾಗಿದ್ದು, ನಿಲಯದಲ್ಲಿ ಹಲವು ಸಿಬ್ಬಂದಿಗಳಿದ್ದಾರೆ. ಆದರೂ ಕೂಡಾ ನಿಲಯದ ಸ್ವಚ್ಛತೆ ಹದೆಗೆಟ್ಟಿದೆ. ಶೌಚಾಲಯಗಳು ಸ್ವಚ್ಛವಾಗಿಲ್ಲ. ವಸತಿ ನಿಲಯಕ್ಕೆ ಕಾಯಂ(ಪರ್ಮನೆಂಟ್) ವಾರ್ಡನ್ ಇಲ್ಲ. ಕಳಪೆ ದರ್ಜೆಯ ಅಡುಗೆ ಮಾಡುತ್ತಿದ್ದಾರೆ. ಇಲಾಖೆಯು ವಸತಿ ನಿಲಯಗಳಿಗೆ ಲಕ್ಷಗಟ್ಟಲೆ ಖರ್ಚು ಮಾಡುತ್ತಿದೆಯಾದರೂ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳು ದೊರೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಶಿವಪ್ಪ ಬಾವಿಕಟ್ಟಿ ಮಾತನಾಡಿ, “ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಇಡೀ ಕೊಪ್ಪಳ ಜಿಲ್ಲೆಗೆ ಒಂದೇ ಒಂದು ವೃತ್ತಿಪರ ವಸತಿ ನಿಲಯವಾಗಿದೆ. ಇಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಿಂತ ಅಧಿಕವಾಗಿ ಇತರೆ ವರ್ಗ ಹಾಗೂ ಅನರ್ಹ ವ್ಯಕ್ತಿಗಳಿದ್ದಾರೆ. ಇದರಿಂದಾಗಿ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬಹುತೇಕ ವಿದ್ಯಾರ್ಥಿಗಳು ವಸತಿ ನಿಲಯದಿಂದ ವಂಚಿತರಾಗಿದ್ದಾರೆ. ವಾರ್ಡನ್‌ ಕೇಳಿದರೆ ಮುಂದಿನ ತಿಂಗಳು ಬರುತ್ತವೆ, ಇನ್ನು 15 ದಿನಗಳಲ್ಲಿ ಬರುತ್ತವೆಂದು ಹೇಳಿ ದಿನಗಳನ್ನು ಮುಂದೂಡುತ್ತಿದ್ದಾರೆ” ಎಂದರು.

1000053717
Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...